ಮೈಸೂರು: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದಾರುಣ ಸಾವು

ಮೈಸೂರು, ಸೆಪ್ಟೆಂಬರ್ 23: ಕೃಷಿ ಹೊಂಡದ ಬಳಿ ಆಟವಾಡುತ್ತಾ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮುಳುಗಿ ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ‌ ಮೈಸೂರಿನ ತಿ.ನರಸೀಪುರ ತಾಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ನಿನ್ನೆ ಮಂಗಳವಾರ ನಡೆದಿದೆ.

ಅಂಕನಹಳ್ಳಿ ಗ್ರಾಮದ ಪಟೇಲ್ ವೆಂಕಟೇಶ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ನಿನ್ನೆ ಈ ದುರ್ಘಟನೆ ನಡೆದಿದೆ. ಕಾವೇರಿ (2), ರೋಹಿತ್ (3) ಹಾಗೂ ಸಂಜಯ್ (4) ಎಂಬ ಪುಟ್ಟ ಮಕ್ಕಳು ಹೊಂಡಕ್ಕೆ ಬಿದ್ದು ಸಾವನ್ನಪ್ಪಿದವರು. ಜಮೀನಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಕೃಷಿ ಹೊಂಡಕ್ಕೆ ಬಿದ್ದು ಈ ಮಕ್ಕಳು ಮೃತಪಟ್ಟಿದ್ದಾರೆ.

Mysuru: Three Children Dies By Falling Into Farm Pond

ಬಳ್ಳಾರಿ ಜಿಲ್ಲೆಯಿಂದ ಕಬ್ಬು ಕಟಾವಿಗೆ ಮೈಸೂರಿಗೆ ಆಗಮಿಸಿದ್ದ ಕೂಲಿಕಾರರ ಕುಟುಂಬದ ಈ ಮೂವರು ಮಕ್ಕಳು ಆಟವಾಡುತ್ತಾ ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದಿದ್ದಾರೆ. ಕೆಲ ಹೊತ್ತಿನವರೆಗೂ ಯಾರೂ ಗಮನಿಸಿಲ್ಲ. ನಂತರ ಮಕ್ಕಳು ಕಾಣದಿದ್ದಾಗ ಹುಡುಕಾಟ ನಡೆಸಿದಾಗ, ಹೊಂಡದಲ್ಲಿ ಬಿದ್ದಿರುವುದು ಕಂಡುಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತ ಮಕ್ಕಳ ದೇಹವನ್ನು ಬನ್ನೂರು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+