ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದಾರುಣ ಸಾವು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 23: ಕೃಷಿ ಹೊಂಡದ ಬಳಿ ಆಟವಾಡುತ್ತಾ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮುಳುಗಿ ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ‌ ಮೈಸೂರಿನ ತಿ.ನರಸೀಪುರ ತಾಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ನಿನ್ನೆ ಮಂಗಳವಾರ ನಡೆದಿದೆ.

ಅಂಕನಹಳ್ಳಿ ಗ್ರಾಮದ ಪಟೇಲ್ ವೆಂಕಟೇಶ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ನಿನ್ನೆ ಈ ದುರ್ಘಟನೆ ನಡೆದಿದೆ. ಕಾವೇರಿ (2), ರೋಹಿತ್ (3) ಹಾಗೂ ಸಂಜಯ್ (4) ಎಂಬ ಪುಟ್ಟ ಮಕ್ಕಳು ಹೊಂಡಕ್ಕೆ ಬಿದ್ದು ಸಾವನ್ನಪ್ಪಿದವರು. ಜಮೀನಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಕೃಷಿ ಹೊಂಡಕ್ಕೆ ಬಿದ್ದು ಈ ಮಕ್ಕಳು ಮೃತಪಟ್ಟಿದ್ದಾರೆ.

Mysuru: Three Children Dies By Falling Into Farm Pond

 ರಾಮನಗರ: ನಾಪತ್ತೆಯಾಗಿದ್ದ ಮಗು ಅರ್ಕಾವತಿ ನದಿಯಲ್ಲಿ ಶವವಾಗಿ ಪತ್ತೆ, ಸಂಬಂಧಿಯಿಂದಲೇ ಕೊಲೆ ರಾಮನಗರ: ನಾಪತ್ತೆಯಾಗಿದ್ದ ಮಗು ಅರ್ಕಾವತಿ ನದಿಯಲ್ಲಿ ಶವವಾಗಿ ಪತ್ತೆ, ಸಂಬಂಧಿಯಿಂದಲೇ ಕೊಲೆ

ಬಳ್ಳಾರಿ ಜಿಲ್ಲೆಯಿಂದ ಕಬ್ಬು ಕಟಾವಿಗೆ ಮೈಸೂರಿಗೆ ಆಗಮಿಸಿದ್ದ ಕೂಲಿಕಾರರ ಕುಟುಂಬದ ಈ ಮೂವರು ಮಕ್ಕಳು ಆಟವಾಡುತ್ತಾ ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದಿದ್ದಾರೆ. ಕೆಲ ಹೊತ್ತಿನವರೆಗೂ ಯಾರೂ ಗಮನಿಸಿಲ್ಲ. ನಂತರ ಮಕ್ಕಳು ಕಾಣದಿದ್ದಾಗ ಹುಡುಕಾಟ ನಡೆಸಿದಾಗ, ಹೊಂಡದಲ್ಲಿ ಬಿದ್ದಿರುವುದು ಕಂಡುಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತ ಮಕ್ಕಳ ದೇಹವನ್ನು ಬನ್ನೂರು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.

English summary
Three children were died by accidentally falling into farm pond at Ankanahalli village in T Narasipura of Mysuru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X