ತಿಂಡಿ ತಟ್ಟೆ ಬಿಸಾಡಿ ದರ್ಪ ತೋರಿದ ಟಿಕೆಟ್ ಕಲೆಕ್ಟರ್
ಮೈಸೂರು, ಜೂನ್ 18 : ಮೈಸೂರಿನ ಟಿಕೆಟ್ ಕಲೆಕ್ಟರ್ ಓರ್ವರು ಚಾಲಕ ಮತ್ತು ನಿರ್ವಾಹಕರು ಉಪಹಾರ ಸೇವಿಸುತ್ತಿರುವಾಗ ಪ್ಲೇಟ್ ಕಸಿದು ಅಮಾನವೀಯವಾಗಿ ವರ್ತಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಸಾತಗಳ್ಳಿ ಬಸ್ ಡಿಪೋದಿಂದ ಬಂದಿದ್ದ ಚಾಲಕ ಕೆಂಪೇಗೌಡ ನಿವಾ೯ಹಕನೊಂದಿಗೆ ನಗರ ಬಸ್ ನಿಲ್ದಾಣದಲ್ಲಿನ ಕ್ಯಾಂಟಿನ್‌ಗೆ ತೆರಳಿ ಉಪಹಾರ ಸೇವನೆ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಸಂಚಾರ ನಿಯಂತ್ರಕ ಶ್ರೀನಿವಾಸ್ ತಿನ್ನುತ್ತಿದ್ದ ತಟ್ಟೆಯನ್ನು ಕಿತ್ತು ಬಿಸಾಡಿ ಮೊದಲು ಕೆಲಸಕ್ಕೆ ಹೋಗಿ ಆಮೇಲೆ ತಿಂಡಿ ತಿನ್ನಿ ಎಂದು ದಪ೯ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈಗಾಗಲೆ ಸಮಯವಾಗಿದೆ ಬಸ್ ಬಿಡುವುದು ಯಾವಾಗ ಎಂದು ಟಿಕೆಟ್ ಕಲೆಕ್ಟರ್ ಶ್ರೀನಿವಾಸ್ ಪ್ರಶ್ನಿಸಿ ಚಾಲಕನ ಕೈಯ್ಯಲ್ಲಿದ್ದ ಉಪಹಾರದ ತಟ್ಟೆಯನ್ನು ಎತ್ತಿ ಬಿಸಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಉಳಿದ ಚಾಲಕರು, ನಿರ್ವಾಹಕರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.

ಚಾಲಕ ಕೆಂಪೇಗೌಡ ಓರ್ವರೇ ಪ್ರತಿಭಟನೆ ನಡೆಸಿ, ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಉಪಹಾರ ಸೇವಿಸುತ್ತಿದ್ದೆ. ಆದರೆ ಅವರು ನನ್ನ ಜೊತೆ ಅಮಾನವೀಯವಾಗಿ ವರ್ತಿಸಿದ್ದಾರೆ, ನನ್ನಿಂದ ಉಳಿದವರ ಕೆಲಸಕ್ಕೆ ತೊದರೆಯಾಗುವುದು ಬೇಡ. ಉಳಿದವರು ಕೆಲಸ ನಿರ್ವಹಿಸಿ. ನಾನೊಬ್ಬನೇ ಹೋರಾಡುತ್ತೇನೆ ಎಂದು ಪಟ್ಟು ಹಿಡಿದು ಒಬ್ಬರೇ ಪ್ರತಿಭಟನೆ ನಡೆಸಿದರು. ಇದೇ ವೇಳೆ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಹಾಗೂ ಪೊಲೀಸರು ಸಮಸ್ಯೆಯನ್ನು ತಿಳಿಗೊಳಿಸಿದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications