ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಸರಾ ಉದ್ಘಾಟನೆ, ವಿಜಯದಶಮಿ ಮೆರವಣಿಗೆಗೆ ಸಮಯ ನಿಗದಿ

|
Google Oneindia Kannada News

ಮೈಸೂರು, ಅಕ್ಟೋಬರ್. 8 : ಅಕ್ಟೋಬರ್ 10 ರಿಂದ 19ವರೆಗೆ ನಡೆಯಲಿರುವ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅಕ್ಟೋಬರ್ 10ರಂದು ಬುಧವಾರ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆಯ ಮೂಲಕ ವಿದ್ಯುಕ್ತ ಚಾಲನೆ ದೊರೆಯಲಿದೆ.

ದಸರಾಗೆ ಬೆಂಗಳೂರು- ಮೈಸೂರು ನಡುವೆ ವಿಶೇಷ ರೈಲು ಸಂಚಾರದಸರಾಗೆ ಬೆಂಗಳೂರು- ಮೈಸೂರು ನಡುವೆ ವಿಶೇಷ ರೈಲು ಸಂಚಾರ

ಚಾಮುಂಡಿ ಬೆಟ್ಟದಲ್ಲಿ ಅಕ್ಟೋಬರ್ 10ರಂದು ಬೆಳಗ್ಗೆ 07-05 ರಿಂದ 07-35 ರ ವರೆಗೆ ಸಲ್ಲುವ ತುಲಾ ಲಗ್ನದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ. ಚಾಮುಂಡಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾಮೂರ್ತಿಯವರು ವಿಶ್ವವಿಖ್ಯಾತ ದಸರಾ ಉದ್ಘಾಟಿಸಲಿದ್ದಾರೆ.

 ದಸರೆಗೆ 4 ದಿನ ಇರುವಾಗಲೇ 200ಕ್ಕೂ ಹೆಚ್ಚು ಗೋಲ್ಡ್ ಕಾರ್ಡ್ ಗಳ ಮಾರಾಟ ದಸರೆಗೆ 4 ದಿನ ಇರುವಾಗಲೇ 200ಕ್ಕೂ ಹೆಚ್ಚು ಗೋಲ್ಡ್ ಕಾರ್ಡ್ ಗಳ ಮಾರಾಟ

ದಸರಾ ಉದ್ಘಾಟನೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿ ಸಚಿವ ಸಂಪುಟದ ಹಲವರು ಭಾಗಿಯಾಗಲಿದ್ದಾರೆ.

Time scheduled for the inauguration of Dasara

ವಿಜಯದಶಮಿ ಮೆರವಣಿಗೆ ಸಮಯ ನಿಗದಿ
ಅಕ್ಟೋಬರ್ 19 ರಂದು ಪ್ರಮುಖ ಆಕರ್ಷಣೆ ಜಂಬೂಸವಾರಿ ನಡೆಯಲಿದೆ. ಅಂದು ಮಧ್ಯಾಹ್ನ 2.30 ರಿಂದ 3.16 ರೊಳಗಿನ ಶುಭ ಕುಂಭ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಪೂಜೆ ಸಲ್ಲಿಸಲಿದ್ದಾರೆ.

 ದಸರಾ ಉದ್ಘಾಟನೆ - ಸಾಮಾನ್ಯಳಿಗೆ ಸಿಕ್ಕ ದೊಡ್ಡ ಸನ್ಮಾನ : ಸುಧಾ ಮೂರ್ತಿ ದಸರಾ ಉದ್ಘಾಟನೆ - ಸಾಮಾನ್ಯಳಿಗೆ ಸಿಕ್ಕ ದೊಡ್ಡ ಸನ್ಮಾನ : ಸುಧಾ ಮೂರ್ತಿ

ನಂತರ 3.40 ರಿಂದ 4.10 ರೊಳಗಿನ ಶುಭ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಆರಂಭವಾಗಲಿದ್ದು, ಕ್ಯಾಪ್ಟನ್ ಅರ್ಜುನ ಆನೆಯ ಮೇಲೆ ಚಿನ್ನದ ಅಂಬಾರಿಯಲ್ಲಿರುವ ತಾಯಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪೂಜೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ಸಿಗಲಿದೆ.

English summary
Mysore Dasara will be inaugurated after a special pooja on October 10 at Chamundi Hill on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X