• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇವಾಲಯಗಳಿಗೆ ಟಿಪ್ಪು ಭೂಮಿ ನೀಡಿರುವ ಉದಾಹರಣೆ ಇದೆ; ಎಚ್‌ಡಿಕೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 25: "ಟಿಪ್ಪು ಕಾಲದಲ್ಲಿ ಹಲವು ಹಿಂದೂ ದೇವಾಲಯಗಳಿಗೆ ಭೂಮಿ ದಾನ ಮಾಡಿದ್ದ. ಇದು ಆ ಸಮಾಜಕ್ಕೆ ಅಂದರೆ ಮುಸ್ಲಿಮರಿಗೆ ಸೇರಿದೆ ಅಂತ ಗೊತ್ತಾದರೆ ಆ ಸಮಾಜಕ್ಕೆ ಭೂಮಿ ಬಿಟ್ಟುಕೊಡುತ್ತೀರಾ?" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೇವರು ಕನಸ್ಸಿನಲ್ಲೇನಾದ್ರೂ ಬಂದು ನನ್ನ ಮೂಲ ಸ್ಥಾನ ಇಲ್ಲಿದೆ ಅಂತ ಹೇಳಿದನೇ?. ಅದನ್ನು ಸರಿಪಡಿಸಿ ಅಂತ ಕೇಳಿತ್ತಾ" ಎಂದರು.

"ಇದನ್ನು ನೋಡಿದರೆ ಮತ್ತೊಂದು ವಿವಾದ ಶುರು ಆಗುವ ಲಕ್ಷಣ ಇದೆ. ಹಲವು ದೇವಾಲಯಗಳಿಗೆ ಟಿಪ್ಪು ಭೂಮಿ ನೀಡಿರುವ ಉದಾಹರಣೆ ಇದೆ. ಅವರೂ ಕೂಡಾ ಬಂದು ಕೇಳಿದರೆ ನೀವು ಆ ಭೂಮಿ ಕೊಡುತ್ತೀರಾ?. ಇದನ್ನು ಬಿಟ್ಟು ಜನರ ಬದುಕನ್ನು ನೋಡಿ" ಎಂದು ಕುಮಾರಸ್ವಾಮಿ ಸಲಹೆ ನೀಡಿದರು.

ಕೇಶವ ಕೃಪಾದಲ್ಲಿ ಬರುವ ಸಂದೇಶಗಳನ್ನು ಬಿಜೆಪಿ ಪಾಲಿಸುತ್ತಾರೆ

ಕೇಶವ ಕೃಪಾದಲ್ಲಿ ಬರುವ ಸಂದೇಶಗಳನ್ನು ಬಿಜೆಪಿ ಪಾಲಿಸುತ್ತಾರೆ

ಮಂಗಳೂರಿನಲ್ಲಿ ನಡೆಯುತ್ತಿರುವ ಅಷ್ಟಮಂಗಲ ಪ್ರಶ್ನೆ ವಿಚಾರಕ್ಕೆ ಕೂಡ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು. "ಅಷ್ಟಮಂಗಲ ಪ್ರಶ್ನೆಗಿಂತ ಎಲ್ಲಾ ತೀರ್ಮಾನ ಆಗೋದು ಕೇಶವ ಕೃಪಾದಲ್ಲಿ. ಅಲ್ಲಿಂದ ಬರುವ ಸಂದೇಶಗಳನ್ನು ಇವರು ಪಾಲಿಸುತ್ತಾರೆ. ಈ ರೀತಿಯ ವಾತಾವರಣದಿಂದ ದೇಶಕ್ಕೆ ಮುಂದೆ ಉತ್ತಮ ಭವಿಷ್ಯ ಇಲ್ಲ" ಎಂದರು. ಕೇಶವ ಕೃಪಾದಲ್ಲಿ ಬರುವ ಸಂದೇಶಗಳನ್ನು ಬಿಜೆಪಿ ಪಾಲಿಸುತ್ತಾರೆ ಎಂದು ಟೀಕಿಸಿದ್ದರೆ.

ಈ ರೀತಿಯ ವಾತಾವರಣದಿಂದ ದೇಶಕ್ಕೆ ಮುಂದೆ ಉತ್ತಮ ಭವಿಷ್ಯ ಇಲ್ಲ. ಇನ್ನೂ ಒಂದು ವರ್ಷ ಈ ತರದ ಬರವಣೆಗೆಗಳು ನಡೆಯುತ್ತಇರುತ್ತವೆ. ದೇಶದ ಶಾಂತಿ, ಸಾಮರಸ್ಯ ಮತ್ತುಷ್ಟು ಹಾಳಾಗುತ್ತದೆ. "ಇನ್ನೂ ಒಂದು ವರ್ಷ ಈ ತರದ ಬೆಳವಣಿಗೆಗಳು ನಡೆಯುತ್ತಿರುತ್ತವೆ. ದೇಶದ ಶಾಂತಿ, ಸಾಮರಸ್ಯ ಮತ್ತಷ್ಟು ಹದಗೆಡುವ ಆತಂಕ ಎದುರಾಗಿದೆ" ಎಂದು ಎಚ್. ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಹಿತ ಶತ್ರುಗಳು ಈಗ‌ ನೇರ ಶತ್ರುಗಳಾಗಿದ್ದಾರೆ

ಹಿತ ಶತ್ರುಗಳು ಈಗ‌ ನೇರ ಶತ್ರುಗಳಾಗಿದ್ದಾರೆ

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, ಎಂಎಲ್ ಸಿ ಚುನಾವಣೆಯಲ್ಲಿ ಜೆಡಿಎಸ್ ಹಿತ ಶತ್ರುಗಳಿಂದ ತಮಗೆ ಲಾಭ ಆಗುತ್ತೆ ಎಂದು ಕಾಂಗ್ರೆಸ್ ಅಂದುಕೊಂಡಿದೆ. ಅದ್ಯಾವುದು ಈಗ ನಡೆಯುವುದಿಲ್ಲ. ಪಕ್ಷದಲ್ಲಿರುವ ಹಿತ ಶತ್ರುಗಳು ಈಗ‌ ನೇರ ಶತ್ರುಗಳಾಗಿದ್ದಾರೆ. ಅವರ ಬಗ್ಗೆ ನಮ್ಮ ಕಾರ್ಯಕರ್ತರಿಗೆ ಅರಿವಾಗಿದೆ" ಎಂದು ಕುಮಾರಸ್ವಾಮಿ ಹೇಳಿದರು.

"ಎಂಎಲ್ ಸಿ ಚುನಾವಣೆಯಲ್ಲಿ ನಾವು ಸ್ಪರ್ಧೆ ಮಾಡದ ಕ್ಷೇತ್ರದಲ್ಲಿ ಯಾರಿಗೆ ಬೆಂಬಲ ಕೊಡಬೇಕು ಎಂದು ಎರಡು ದಿನಗಳಲ್ಲಿ ತೀರ್ಮಾನ ಮಾಡಲಾಗುತ್ತದೆ. ಮುಂದಿನ 2023ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬೆಂಬಲ ನೀಡುತ್ತೇವೆ" ಎಂದು ತಿಳಿಸಿದರು.

ಜೆಡಿಎಸ್ ನಿಂದ ಅಭಿವೃದ್ಧಿ ಕಾಣದ ಮಂಡ್ಯ: ಸಿದ್ದರಾಮಯ್ಯ ಆರೋಪ

ಜೆಡಿಎಸ್ ನಿಂದ ಅಭಿವೃದ್ಧಿ ಕಾಣದ ಮಂಡ್ಯ: ಸಿದ್ದರಾಮಯ್ಯ ಆರೋಪ

ಮಂಡ್ಯ ನಗರದ ಚಂದ್ರದರ್ಶನ ಸಮುದಾಯಭವನದಲ್ಲಿ ಮಂಗಳವಾರ ನಡೆದ ದಕ್ಷಿಣ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ಪರ ಮತಪ್ರಚಾರದ ಬಹಿರಂಗಸಭೆ ಉದ್ಘಾಟಿಸಿ ಮಾತನಾಡಿದ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, "ದೇಶದ ಸಂವಿಧಾನವನ್ನು ಉಳಿಸಬೇಕಾದರೆ ಅದು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ಜೆಡಿಎಸ್ ಪಕ್ಷ ಒಂದು ಪ್ರಾದೇಶಿಕ ಪಕ್ಷವಾಗಿದೆ. ದೇಶ ಹಾಗೂ ಸಂವಿಧಾನ ಉಳಿಸಲು ಸಾಧ್ಯವಿಲ್ಲ. ದೇಶದ ಸಂವಿಧಾನವನ್ನು ಉಳಿಸುವ ಮೂಲಕ ದೇಶದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ನಾನು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ಹಲವು ಜನಪರ ಯೋಜನೆ ಜಾರಿಗೆ ತಂದೆ. ಇದ್ದರಿಂದ ಅನೇಕ ಉಪಯೋಗವಾಗುತ್ತಿದೆ. ಕಳೆದ ಚುನಾವಣೆಯಲ್ಲಿ ಜನರನ್ನು ಎಲ್ಲರೂ ದಿಕ್ಕು ತಪ್ಪಿಸಿದ್ದಾರೆ. ಮತ್ತೊಮ್ಮೆ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಬಾರದು ಅಂತ ಅನೇಕ ಪ್ರಯತ್ನಗಳು ನಡೆದಿವೆ. ಈ ಬಾರೀ ಆದರೂ ಜನರು ದಿಕ್ಕು ತಪ್ಪಬಾರದು ಎಂದರು.

ಕೊಡುಗೆ ಏನು ಎಂಬುದು ಮಂಡ್ಯ ಜನರಿಗೆ ಗೊತ್ತಿದೆ: ಎಚ್ ಡಿಕೆ ಕಿಡಿ

ಕೊಡುಗೆ ಏನು ಎಂಬುದು ಮಂಡ್ಯ ಜನರಿಗೆ ಗೊತ್ತಿದೆ: ಎಚ್ ಡಿಕೆ ಕಿಡಿ

ಮಂಡ್ಯದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು. ಜೆಡಿಎಸ್ ನಿಂದ ಮಂಡ್ಯಕ್ಕೆ ಏನು ಕೊಡುಗೆ ನೀಡಿದೆ. ಕಳೆದ ಬಾರಿ ಗೆದ್ದಿದ್ದ ಕೆ.ಟಿ.ಶ್ರೀಕಂಠೇಗೌಡ ಏನು ಮಾಡಿದ್ದಾರೆ. ಈ ಬಾರಿ ಆತನೇ ನಿಲ್ಲಬಹುದಿತ್ತು. ಆದರೆ ಯಾಕೆ ನಿಂತಿಲ್ಲ ಎಂಬ ಬಗ್ಗೆ ಪ್ರತಿಕ್ರಿಯಿಸಿ, "ತಮ್ಮ ಕೊಡುಗೆ ಏನು‌ ಎಂದು ಸಿದ್ದರಾಮಯ್ಯ ಹೇಳಲಿ. ರೈತರು ಆತ್ಮಹತ್ಯೆ ಮಾಡಿಕೊಂಡರು ಅದು ನಿಮ್ಮ‌ ಕೊಡುಗೆ. 200 ಕುಟುಂಬಗಳ ಅನಾಥವಾಗಿ ಮಾಡಿದ್ದೇ ನಿಮ್ಮ ಕೊಡುಗೆ. ಆದರೆ ನಮ್ಮ ಕೊಡುಗೆ ಏನು ಎಂಬುದು ಮಂಡ್ಯ ಜನರಿಗೆ ಗೊತ್ತಿದೆ. ನಾನು ಮಂಡ್ಯವನ್ನು ಇನ್ನಷ್ಟು ಅಭಿವೃದ್ಧಿ ಮಾಡುತ್ತಿದ್ದೆ. ಅಷ್ಟರಲ್ಲಿ ನೀವು ಸರ್ಕಾರ ತೆಗೆದಿರಿ" ಎಂದು ಕುಮಾರಸ್ವಾಮಿ ಆರೋಪಿಸಿದರು.

English summary
Former chief minister H. D. Kumaraswamy said that Tipu Sultan donated land for many Hindu temples.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X