ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಹೊಸವರ್ಷಾಚರಣೆ ನೆಪದಲ್ಲಿ ಪುಂಡಾಟಿಕೆ ನಡೆಸಿದರೆ ಹುಷಾರ್!

|
Google Oneindia Kannada News

ಮೈಸೂರು, ಡಿಸೆಂಬರ್ 28: 2019ರ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸುವ ಪ್ರವಾಸಿಗರು ಪೊಲೀಸ್ ಇಲಾಖೆ ನೀಡಿರುವ ಕೆಲವೊಂದು ಕ್ರಮಗಳನ್ನು ಪಾಲಿಸುವುದು ಅಗತ್ಯವಾಗಿದೆ. ಈ ಸಂಬಂಧ ನಗರ ಪೊಲೀಸ್ ಕಮೀಷನನರ್ ಡಾ. ಸುಬ್ರಹ್ಮಣ್ಯರಾವ್ ಅವರು ಹಲವು ಕಟ್ಟು ನಿಟ್ಟಿನ ಸೂಚನೆ ನೀಡಿದ್ದು ಅದನ್ನು ಪಾಲನೆ ಮಾಡದಿದ್ದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಡಿ.31ರ ರಾತ್ರಿ ಹೊಸ ವರ್ಷವನ್ನು ಬರ ಮಾಡಿಕೊಳ್ಳುವ ಸಂಬಂಧ ಪಾರ್ಟಿ ಏರ್ಪಡಿಸುವ ನಗರದ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘಸಂಸ್ಥೆಗಳು ಒಳಾವರಣದಲ್ಲಿ ಕಾರ್ಯಕ್ರಮಗಳನ್ನು ನಡೆಸಬೇಕಲ್ಲದೆ ಮಧ್ಯರಾತ್ರಿ1 ಗಂಟೆಯೊಳಗೆ ಮುಗಿಸಬೇಕಿದೆ.

ಹೊಸ ವರ್ಷದಲ್ಲಿ ಕೆಎಸ್ಆರ್‌ಟಿಸಿ ಬಸ್ ದರ ಹೆಚ್ಚಳ?ಹೊಸ ವರ್ಷದಲ್ಲಿ ಕೆಎಸ್ಆರ್‌ಟಿಸಿ ಬಸ್ ದರ ಹೆಚ್ಚಳ?

ಇನ್ನು ರೆಸ್ಟೋರೆಂಟ್ ಮತ್ತು ಮದ್ಯಪಾನ ಸರಬರಾಜು ಮಾಡುವ ಹೋಟೆಲ್‌ಗಳಲ್ಲಿ ಸರ್ಕಾರವು ನಿಗದಿಪಡಿಸಿದ ಸಮಯಕ್ಕಿಂತ ಹೆಚ್ಚಿನ ಸಮಯದಲ್ಲಿ ನೂತನ ವರ್ಷಾಚರಣೆಯ ಸಂಬಂಧ ಕಾರ್ಯಕ್ರಮ ನಡೆಸಬೇಕಾದಲ್ಲಿ ಅಬಕಾರಿ ಇಲಾಖೆಯಿಂದ ಲಿಖಿತವಾಗಿ ಹೆಚ್ಚಿನ ಅವಧಿಗೆ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕಿದೆ ಜತೆಗೆ ಅನುಮತಿ ಪಡೆದ ಪತ್ರದ ಪ್ರತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕಾಗುತ್ತದೆ.

ವಿದ್ಯಾರ್ಥಿಗಳು ಹಾಗೂ ಯುವಕರು ಡಿ.31ರ ರಾತ್ರಿ ಹೊಸ ವರ್ಷ ಆಚರಣೆ ನೆಪದಲ್ಲಿ ಯಾವುದೇ ಕಾರಣಕ್ಕೂ ರಸ್ತೆಗಳಲ್ಲಿ ಅಸಭ್ಯವಾಗಿ ವರ್ತಿಸಬಾರದು. ಒಂದು ವೇಳೆ ಅಸಭ್ಯವಾಗಿ ವರ್ತಿಸಿದರೆ ಅಂಥವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

ಡಿ.31ರಂದು ತಡರಾತ್ರಿ 2 ಗಂಟೆವರೆಗೂ ಪಾರ್ಟಿಗೆ ಅವಕಾಶಡಿ.31ರಂದು ತಡರಾತ್ರಿ 2 ಗಂಟೆವರೆಗೂ ಪಾರ್ಟಿಗೆ ಅವಕಾಶ

ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸುವ ನಗರದ ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳ ಮಾಲೀಕರು, ವ್ಯವಸ್ಥಾಪಕರು, ಆಡಳಿತ ವರ್ಗದವರು ನೂತನ ವರ್ಷಾಚರಣೆ ಆಚರಿಸಲು ಮತ್ತು ಧ್ವನಿವರ್ಧಕ ಅಳವಡಿಸಲು ಡಿ.31ರ ಸಂಜೆ 4 ಗಂಟೆಯೊಳಗೆ ಮೈಸೂರು ನಗರ ಪೊಲೀಸ್ ಕಮಿಷನರ್ ಅವರ ಕಚೇರಿಗೆ ಅರ್ಜಿ ಸಲ್ಲಿಸಿ, ಪೂರ್ವಾನುಮತಿ ಪಡೆದುಕೊಳ್ಳುವುದು. ಪೂರ್ವಾನುಮತಿ ಪಡೆಯದೆ ನೂತನ ವರ್ಷಾಚರಣೆ ಆಚರಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಬಾಕ್ಸ್ ಮಾದರಿ ಧ್ವನಿವರ್ಧಕ ಅಳವಡಿಕೆ

ಬಾಕ್ಸ್ ಮಾದರಿ ಧ್ವನಿವರ್ಧಕ ಅಳವಡಿಕೆ

ಧ್ವನಿವರ್ಧಕವನ್ನು ಅಳವಡಿಸುವವರು ತಮ್ಮ ಪ್ರದೇಶಕ್ಕೆ ಮಾತ್ರ ಸೀಮಿತವಾಗಿರುವಂತೆ ಬಾಕ್ಸ್ ಮಾದರಿ ಧ್ವನಿವರ್ಧಕವನ್ನು ಅಳವಡಿಸಿಕೊಂಡು ಕಡಿಮೆ ಧ್ವನಿಯಲ್ಲಿ ಕಾರ್ಯಕ್ರಮವನ್ನು ನಡೆಸಬೇಕು. ಹೋಟೆಲ್, ಕ್ಲಬ್ ಅಥವಾ ವಿಶೇಷ ಕೂಟಗಳ ವ್ಯವಸ್ಥಾಪಕರು ಯಾವುದೇ ಅಹಿತಕರ ಘಟನೆಗಳಾಗದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಸಾಂಸ್ಕೃತಿಕ ಕಾರ್ಯಕ್ರಮದ ನೆಪದಲ್ಲಿ ಆಶ್ಲೀಲ ಅರೆಬೆತ್ತಲೆ ಅಥವಾ ಬೆತ್ತಲೆ ನೃತ್ಯ ಹಾಗೂ ಜೂಜಾಟ ನಡೆಸುವುದನ್ನು ನಿಷೇಧಿಸಲಾಗಿದೆ.

ಆಸಭ್ಯವಾಗಿ ವರ್ತಿಸುವವರ ವಿರುದ್ಧ ಕ್ರಮ

ಆಸಭ್ಯವಾಗಿ ವರ್ತಿಸುವವರ ವಿರುದ್ಧ ಕ್ರಮ

ಹೊಸ ವರ್ಷ ಅಚರಣೆ ನೆಪದಲ್ಲಿ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರನ್ನು ಬಲವಂತವಾಗಿ ನಿಲ್ಲಿಸಿ ಅವರ ಇಚ್ಛೆಗೆ ವಿರುದ್ದವಾಗಿ ಶುಭ ಕೋರುವ ನೆಪದಲ್ಲಿ ಕಿರಿಕಿರಿ ಮಾಡುವುದು, ಹೆಣ್ಣು ಮಕ್ಕಳಿಗೆ ಮತ್ತು ಮಹಿಳೆಯರಿಗೆ ಶುಭ ಕೋರುವ ನೆಪದಲ್ಲಿ ಕೀಟಲೆ, ಅಸಭ್ಯವಾಗಿ ವರ್ತಿಸುವುದನ್ನು ತಡೆಯಲು ಕಾರ್ಯಪಡೆ ತಂಡವನ್ನು ರಚಿಸಲಾಗಿದ್ದು ಈ ಪಡೆ ಗಸ್ತಿನಲ್ಲಿದ್ದು, ಆಸಭ್ಯವಾಗಿ ವರ್ತಿಸುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ಹೊಸ ವರ್ಷ ಆಚರಣೆ: ಬೆಂಗಳೂರಲ್ಲಿ ಪೊಲೀಸರ ಬಂದೋಬಸ್ತ್ ಹೇಗಿದೆ?ಹೊಸ ವರ್ಷ ಆಚರಣೆ: ಬೆಂಗಳೂರಲ್ಲಿ ಪೊಲೀಸರ ಬಂದೋಬಸ್ತ್ ಹೇಗಿದೆ?

ಮದ್ಯಪಾನ ಮಾಡುವವರ ಬಗ್ಗೆ ನಿಗಾ

ಮದ್ಯಪಾನ ಮಾಡುವವರ ಬಗ್ಗೆ ನಿಗಾ

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾವಹಿಸಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ. ಈ ಪಡೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಜರುಗಿಸುವ ಎಚ್ಚರಿಕೆ ನೀಡಲಾಗಿದೆ. ಹೊಸವರ್ಷಾಚರಣೆ ನೆಪದಲ್ಲಿ ವಾಹನಗಳನ್ನು ವೀಲಿಂಗ್ ಮತ್ತು ಡ್ರಾಗ್ ರೇಸ್ ಮಾಡುವುದನ್ನು ಹಾಗೂ ಕರ್ಕಶ ಶಬ್ಧ ಮಾಡುವುದನ್ನು ತಡೆಗಟ್ಟಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಒಂದು ಕ್ಷಿಪ್ರ ಕಾರ್ಯಪಡೆಯನ್ನು ರಚಿಸಿದ್ದು, ಸದರಿ ಪಡೆಯು ಮೈಸೂರು ನಗರದ ಎಲ್ಲಾ ಪ್ರದೇಶಗಳಲ್ಲಿ ಗಸ್ತು ತಿರುಗಲಿದೆ.

ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಡಿ.31ರ ಸಂಜೆ 7ಗಂಟೆಯ ನಂತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇದು ಚಾಮುಂಡಿ ಬೆಟ್ಟದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಹಾಗೂ ಚಾಮುಂಡಿ ಬೆಟ್ಟದಲ್ಲಿ ವಾಸಿಸುವವರಿಗೆ ಅನ್ವಯಿಸುವುದಿಲ್ಲ. ಯಾವುದೇ ಕಾರಣಕ್ಕೂ ಸಾರ್ವಜನಿಕರ ಮನೆಗಳ ಮುಂದೆ, ವಿದ್ಯಾರ್ಥಿಗಳ ಹಾಸ್ಟೆಲ್, ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ಕಾಂಪೌಂಡ್ ನೊಳಗಡೆ ಶುಭಾಶಯ ಕೋರುವ ನೆಪದಲ್ಲಿ ಅನಧಿಕೃತವಾಗಿ ಯಾವುದೇ ವ್ಯಕ್ತಿ ಅಥವಾ ಗುಂಪು ಹೋಗಿ ಕಿರಿಕಿರಿ, ಅಸಭ್ಯವಾಗಿ ವರ್ತನೆ ಮಾಡುವುದನ್ನು ಮತ್ತು ಬಲವಂತವಾಗಿ ಶುಭಾಷಯ ಕೋರುವುದನ್ನು ಮತ್ತು ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ರೀತಿಯಲ್ಲಿ ಪಟಾಕಿ ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ. ಇನ್ನು ಹೊಸ ವರ್ಷಾಚರಣೆ ಸಂಬಂಧ ಮಹಿಳೆಯರ ರಕ್ಷಣೆಗಾಗಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವನ್ನು ರಚಿಸಿ, ನಿಯೋಜಿಸಲಾಗಿದೆ. ಒಟ್ಟಾರೆ ಹೇಳಬೇಕೆಂದರೆ ಎಲ್ಲರೂ ನೆಮ್ಮದಿಯಾಗಿ ಖುಷಿಯಾಗಿ ಹೊಸವರ್ಷಾಚರಣೆ ಮಾಡಲು ಪೊಲೀಸ್ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿದ್ದು ಕಾನೂನು ಮೀರಿ ವರ್ತಿಸಿದರೆ ಅಂತಹವರು ದಂಡನೆಗೊಳಗಾಗುವುದು ಖಚಿತ.

English summary
Tourists coming to Mysore need to follow certain steps provided by the Police Department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X