ಲಾರಿ-ಟಾಟಾ ಏಸ್ ಮೈಸೂರಿನಲ್ಲಿ ಭೀಕರ ಅಪಘಾತ: 3 ಸಾವು
ಮೈಸೂರು, ಆಗಸ್ಟ್ 5: ಲಾರಿ ಹಾಗೂ ಟಾಟಾ ಏಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೂವರ ಸಾವನ್ನಪ್ಪಿರುವ ಘಟನೆ ಮೈಸೂರು ತಿ.ನರಸೀಪುರ ಮುಖ್ಯ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇಂದು ಬೆಳಗಿನ ಜಾವ ನಡೆದಿದೆ.
ಘಟನೆಯಲ್ಲಿ ಸಾವನ್ನಪ್ಪಿದವರನ್ನು ತಿ.ನರಸೀಪುರ ಪಟ್ಟಣದ ರಘು(25), ಮಹದೇವಮ್ಮ(45), ಬಸಮ್ಮ(36) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಾಗಳಾಗಿದ್ದು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ. ಟಾಟಾ ಎಎಸ್ ಚಾಲಕ ನಿದ್ದೆ ಮಂಪರಿನಲ್ಲಿದ್ದ ಪರಿಣಾಮ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.











Click it and Unblock the Notifications