ಮೈಸೂರಿನಲ್ಲಿ ಭೀಕರ ಅಪಘಾತ: ಇಬ್ಬರ ದುರ್ಮರಣ
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಮೃತರಾದ ಘಟನೆ ಮೈಸೂರಿನ ಮಾನಂದಾಡ ಬಳಿ ಇಂದು ನಡೆದಿದೆ. ಕೆ.ಆರ್.ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು, ಮೇ 11: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಮೂವರಲ್ಲಿ ಇಬ್ಬರು ಸ್ಥಳದಲ್ಲೇ ಮೃತರಾದ ಘಟನೆ ಮೈಸೂರಿನ ಮಾನಂದಾಡ ಬಳಿ ಇಂದು ನಡೆದಿದೆ. ಬೈಕಿನಲ್ಲಿದ್ದ ಅಭಿಷೇಕ್ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು ಅವರಿಗೆ ಚಿಕಿತ್ಸೆ ನಡಲಾಗುತ್ತಿದೆ.
ಮೃತರನ್ನು ಮೈಸೂರಿನ ಮಹದೇವಪುರ ಗ್ರಾಮದ ರಾಜೇಶ್ (22) ನಂದನ್ (21) ಎಂದು ಗುರುತಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ.[ಮೈಸೂರಿನ ಕೆ ಆರ್ ನಗರದಲ್ಲಿ ಸಿಡಿಲಿಗೆ ಮತ್ತೊಬ್ಬ ಬಲಿ]

ಕೆ.ಆರ್.ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications