ಎಚ್.ಡಿ.ಕೋಟೆ; ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕರು ನೀರು ಪಾಲು
ಮೈಸೂರು, ಜುಲೈ 2: ಕೆರೆಯಲ್ಲಿ ಈಜಾಡಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ಆಲನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆಲನಹಳ್ಳಿ ಗ್ರಾಮದ ಪ್ರೀತಮ್ (12), ಅರ್ಜುನ್ (11) ಮೃತ ಬಾಲಕರು. ಇಬ್ಬರೂ ಆಲನಹಳ್ಳಿಯ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇದೀಗ ಶಾಲೆಗಳಿಗೆ ರಜೆ ಇರುವುದರಿಂದ ಏಳೆಂಟು ಬಾಲಕರು ಕೆರೆಯಲ್ಲಿ ಈಜಾಡಲು ತೆರಳಿದ್ದರು.

ಇತ್ತೀಚಿಗಷ್ಟೇ ಕೆರೆಯಲ್ಲಿ ಹೂಳು ತೆಗೆಯಲಾಗಿತ್ತು. ಆ ಬಳಿಕ ಮಳೆ ಸುರಿದ ಪರಿಣಾಮ ಕೆರೆಯ ಒಂದು ಭಾಗದಲ್ಲಿ ಐದಾರು ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಹಾಗಾಗಿ, ಈಜಾಡಲು ತೆರಳಿದ ವೇಳೆ ಮೂವರು ಬಾಲಕರು ನೀರಿನಲ್ಲಿ ಮುಳುಗಿದ್ದರು. ಈ ವೇಳೆ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಬಾಲಕನನ್ನು ರಕ್ಷಿಸಲಾಗಿದೆ. ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications