Accident News: ಲಾರಿ-ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಸಾವು
Accident News: ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲಿದೆ. ಹಾಗೆಯೇ ಇದೀಗ ಲಾರಿ-ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮೈಸೂರಿನ ಬಳಿ ನಡೆದಿದೆ.
ಸಿಮೆಂಟ್ ಲಾರಿ, ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ವೇಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು-ಕೊಡಗು ಹೆದ್ದಾರಿಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ಈ ಅಪಘಾತ ಸಂಭವಿಸಿದೆ.

ಈ ಭೀಕರ ಅಪಘಾತದಲ್ಲಿ ಬಸ್ ಚಾಲಕ ಹಾಗೂ ಕ್ಲೀನರ್ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರಿನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿಗೆ ಕೇರಳದಿಂದ ಮೈಸೂರಿನ ಕಡೆಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಭಿಕರ ಅಪಘಾತದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಲಾರಿ ಪಲ್ಟಿಯಾಗಿದೆ. ಇನ್ನೂ ಅಪಘಾತಕ್ಕೆ ಒಳಗಾದ ಇವರೆಡೂ ವಾಹನಗಳು ಸಹ ಕೇರಳದ ಮೂಲವಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಭೀಕರ ಅಪಘಾತದಲ್ಲಿ ಮೃತಪಟ್ಟವರ ಮೃತದೇಹಗಳನ್ನು ಹುಣಸೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಇಂತಹ ಅಪಘಾತಗಳು ಸಂಭವಿಸಿರುವುದು ಇದೇ ಮೊದಲೇನಲ್ಲ. ಇಂತಹ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಬಿರುವ ಘಟನೆಗಳು ನಡೆದಿವೆ.
ಅಪಘಾತದಲ್ಲಿ ಇಬ್ಬರು ಸಾವು: ಹಂಪಿಯಿಂದ ಬೆಂಗಳೂರಿಗೆ ಹೊರಟಿದ್ದ ಕಾರೊಂದು ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿದೆ. ಈ ಅಪಘಾತದ ರಭಸಕ್ಕೆ ಇಬ್ಬರು ಸಾವು, 7 ಮಂದಿ ಗಾಯಗೊಂಡಿರುವ ಘಟನೆ ಕೂಡ್ಲಿಗಿ ತಾಲ್ಲೂಕಿನ ಬಣವಿಕಲ್ಲು ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
ಅಪಘಾತದಲ್ಲಿ ಮೃತರನ್ನು ಬೆಂಗಳೂರು ಮೂಲದ ಪ್ರೀತಿ (35) ಮತ್ತು ಅವರ ಅವರ ಪುತ್ರ ಯಶ್ಚಿತ್ (1 ವರ್ಷ10 ತಿಂಗಳು) ಎಂದು ಗುರುತಿಸಲಾಗಿದೆ. ಇನ್ನು ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬೆಂಗಳೂರು ನಿವಾಸಿ ಮೋಹನ್ ಕುಮಾರ್ ಅವರು ತಮ್ಮ ಕುಟುಂಬ ಹಾಗೂ ಸಂಬಂಧಿಕರೊಂದಿಗೆ ಮಂತ್ರಾಲಯಕ್ಕೆ ತೆರಳಿ ವಾಪಸ್ ಬರುವಾಗ ಈ ಅಪಘಾತ ಸಂಭವಿಸಿದೆ. ಹಂಪಿ ವೀಕ್ಷಣೆ ಮಾಡಿಕೊಂಡು ಊರಿಗೆ ಮರಳುವ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಕಾನಹೊಸಹಳ್ಳಿ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಮೋಹನ್ ಕುಮಾರ್ ಕಾರು ಚಾಲನೆ ಮಾಡುತ್ತಿದ್ದರು. ಅಪಘಾತದಲ್ಲಿ ಅವರ ಪುತ್ರ ಯಶ್ಚಿತ್ ಸ್ಥಳದಲ್ಲೇ ಮೃತಪಟ್ಟರು. ಅವರ ಪತ್ನಿ ಪ್ರೀತಿ ಅವರನ್ನು ಕೂಡ್ಲಿಗಿ ಆಸ್ಪತ್ರೆಗೆ ಕರೆತಂದು, ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗಕ್ಕೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯದಲ್ಲಿ ಮೃತಪಟ್ಟವರು. ಗಾಯಗೊಂಡ ಮೋಹನ್ ಕುಮಾರ್, ರಾಧಾ, ಮರಿರಂಗಯ್ಯ, ರೂಪಾ, ಲಕ್ಷ್ಮಿದೇವಿ, ಚರಿತ್ ಹಾಗೂ ಮಿಥುನ್ ಅವರನ್ನು ಚಿತ್ರದುರ್ಗ ಮತ್ತು ದಾವಣಗೆರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು. ಈ ಪ್ರಕರಣ ಕಾನಹೊಸಹಳ್ಳಿ ಠಾಣೆಯಲ್ಲಿ ದಾಖಲಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications