ಮೈಸೂರಿನಲ್ಲಿ ಸರಣಿ ಅಪಘಾತ: ಇಬ್ಬರು ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ
ಮೈಸೂರು, ಫೆಬ್ರವರಿ 25: ನಿಯಂತ್ರಣ ತಪ್ಪಿ ಕಾರು, ಆಟೋ, ದ್ವಿಚಕ್ರ ವಾಹನ ಡಿಕ್ಕಿ ಸಂಭವಿಸಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನಲ್ಲಿ ನಡೆದ ಸರಣಿ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆ ಮೈಸೂರಿನ ಬನ್ನೂರು-ಮಳವಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.

ನಿಯಂತ್ರಣ ತಪ್ಪಿ ಕಾರು ಆಟೋಗೆ ಗುದ್ದಿದ್ದು, ಆಟೋ ದ್ವಿಚಕ್ರ ವಾಹನಕ್ಕೆ ಗುದ್ದಿದೆ. ಬಳಿಕ ನಿಯಂತ್ರಣ ತಪ್ಪಿ ವಾಹನಗಳು ಹಳ್ಳಕ್ಕೆ ಬಿದ್ದಿವೆ, ಸಿದ್ಧಾರ್ಥನಗರ ಸಂಚಾರಾ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications