ಮೈಸೂರು; ರಿಂಗ್ ರಸ್ತೆಯಲ್ಲಿ ಕಾರು ಮಗುಚಿ ಬಿದ್ದು ಇಬ್ಬರ ದುರ್ಮರಣ

ಮೈಸೂರು, ನವೆಂಬರ್ 2: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಿಂಗ್ ರಸ್ತೆಯ ಸಾತಗಳ್ಳಿ ಬಡಾವಣೆ ಸಮೀಪ ನಡೆದಿದೆ.

ಮೃತರನ್ನು ಅಫ್ತಾಬ್ ಬೇಗ್, ಫರ್ದನ್ ಎಂದು ಗುರುತಿಸಲಾಗಿದ್ದು, ಮುದಾಸಿರ್ ಮತ್ತು ಅಮಿನ್ ಖಾನ್ ಎಂಬುವವರು ಗಾಯಗೊಂಡಿದ್ದಾರೆ. ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಇವರೆಲ್ಲರೂ ಶಾಂತಿ ನಗರ ನಿವಾಸಿಗಳಾಗಿದ್ದು, ಸ್ನೇಹಿತರಾಗಿದ್ದರು ಎಂದು ತಿಳಿದುಬಂದಿದೆ.

ಮಹದೇವಪುರ ಚೆಕ್ ಪೋಸ್ಟ್ ಕಡೆಯಿಂದ ವಿಟಿಯು ಕಾಲೇಜು ಕಡೆಗೆ ಹೋಗುತ್ತಿದ್ದಾಗ ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ಬದಿಯಿಂದ ತಗುಲಿದೆ. ಈ ಸಮಯದಲ್ಲಿ ಚಾಲಕನ ನಿಯಂತ್ರಣವನ್ನು ಕಳೆದುಕೊಂಡ ಕಾರು ರಸ್ತೆ ಬದಿಗೆ ಮಗುಚಿ ಬಿದ್ದಿದೆ. ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

 Mysuru: Two Dies In An Accident At Sathagalli Ring Road

ಅಪಘಾತದಲ್ಲಿ ಗಾಯಗೊಂಡಿರುವವರನ್ನು ತಕ್ಷಣವೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಸಿದ್ದಾರ್ಥ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+