ಹುಣಸೂರಿನಲ್ಲಿ ಅಪಘಾತ; ಕೇರಳ ಮೂಲದ ಇಬ್ಬರ ದುರ್ಮರಣ
ಮೈಸೂರು, ಜನವರಿ 14: ಮೈಸೂರಿನ ಹುಣಸೂರಿನಲ್ಲಿ ಇನ್ನೋವಾ ಮತ್ತು ಸ್ವಿಫ್ಟ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹುಲ್ಲೇನಹಳ್ಳಿ ಗ್ರಾಮದ ಬಳಿ ಅಫಘಾತ ಸಂಭವಿಸಿದೆ. ಡಿವೈಡರ್ ಗೆ ಜೋರಾಗಿ ಡಿಕ್ಕಿ ಹೊಡೆದು ಅಲ್ಲಿಂದ ಹಾರಿ ಸ್ವಿಫ್ಟ್ ಕಾರು ಇನ್ನೋವಾಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಕೇರಳ ಮೂಲದ ಒಬ್ಬ ಮಹಿಳೆ ಹಾಗೂ ಒಬ್ಬ ಪುರುಷ ಸಾವನ್ನಪ್ಪಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಮೃತಪಟ್ಟವರ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications