ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾಪ್ ಸಿಂಗರ್ ರಿಹಾನಾ ವಿರುದ್ಧ ಕೇಂದ್ರ ಸಚಿವ ಸದಾನಂದಗೌಡ ಏನೆಂದರು?

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಫೆಬ್ರವರಿ 6: ಪಾಪ್ ಸಿಂಗರ್ ರಿಹಾನಾ ಏನಾದರೂ ಭತ್ತದ ಗದ್ದೆ ನೋಡಿದ್ದಾರಾ? ಬಹುಶಃ ಅವರು ಭತ್ತದ ಗದ್ದೆ ಮುಂದೆ ನಿಂತು ಫೋಟೋ ತೆಗೆಸಿಕೊಂಡು ಹೋಗಿರಬಹುದು ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಕೆಂಡಾಮಂಡಲರಾದರು.

ರಿಹಾನಾ ಏನು ರೈತರ ಕಷ್ಟದ ಬಗ್ಗೆ ಮಾತನಾಡೋದು? ರಿಹಾನಾಗೆ ರೈತರ ಶ್ರಮದ ಬಗ್ಗೆ ಏನು ಗೊತ್ತಿದೆ? ರೈತರು ಬೆಳೆ ಮಾರಾಟ ಹೇಗೆ ಮಾಡ್ತಾರೆ ಅಂತ ರಿಹಾನಾಗೆ ಗೊತ್ತಾ? ಎಂದು ಪ್ರಶ್ನಿಸಿದ ಕೇಂದ್ರ ಸಚಿವ ಸದಾನಂನಗೌಡ, ವಿದೇಶಿ ಕೈಗೊಂಬೆಯಾಗಿ ಅವರು ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರೈತರನ್ನು ಬೆಂಬಲಿಸಿ ನಟಿ ರಮ್ಯಾ ಸಾಮಾಜಿಕ ತಾಣದಲ್ಲಿ ಹಾಕಿದ ವಿಭಿನ್ನ ಪೋಸ್ಟ್ ರೈತರನ್ನು ಬೆಂಬಲಿಸಿ ನಟಿ ರಮ್ಯಾ ಸಾಮಾಜಿಕ ತಾಣದಲ್ಲಿ ಹಾಕಿದ ವಿಭಿನ್ನ ಪೋಸ್ಟ್

ಅವರು ಯಾವತ್ತಾದರೂ ಭತ್ತದ ಗದ್ದೆಯನ್ನಾದರೂ ನೋಡಿದ್ದಾರಾ ಹೇಳಲಿ ಎಂದು ರಿಹಾನಾ ವಿರುದ್ಧ ಕೇಂದ್ರ ಸಚಿವ ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಆದರೆ ರೈತನಿಗೆ ಇನ್ನು ಸ್ವಾತಂತ್ರ್ಯ ಸಿಕ್ಕಿಲ್ಲ. ರೈತನಿಗೆ ಬೆಳೆದ ಬೆಳೆಯನ್ನು ಮುಕ್ತವಾಗಿ ಮಾರಾಟ ಮಾಡಲು ಸ್ವಾತಂತ್ರ್ಯ ನೀಡುತ್ತಿದ್ದೇವೆ ಎಂದು ಹೇಳಿದರು.

 Mysuru: Union Minister DV Sadananda Gowda Reacted About Singer Rihanna Statement

ರೈತರು ಈಗ ಸರ್ಕಾರದ ಕೈಗೊಂಬೆಯಾಗಿದ್ದಾರೆ, ಬೇಕಾದವರಿಗೆ ಬೆಳೆ ಮಾರಾಟ ಮಾಡಲು ಸ್ವಾತಂತ್ರ್ಯ ಇಲ್ಲವಾಗಿದೆ. ತನ್ನ ಬೆಳೆಗೆ ಯಾರಾದರೂ ಹೆಚ್ಚು ಬೆಲೆ ಕೊಡುತ್ತಾರೆ ಅಂದರೆ ಕೊಡಲಿ ಬಿಡಿ. ಸುಮ್ಮನೆ ಯಾಕೆ ಹಠ ಮಾಡುತ್ತೀರಾ? ಎಂದು ಪ್ರಶ್ನಿಸಿದರು.

ರೈತರಿಗೆ ಬೆಂಬಲ ನೀಡಿದ್ದು ನರೇಂದ್ರ ಮೋದಿ ಸರ್ಕಾರ, ರೈತರು ಎಪಿಎಂಸಿ ಕೈಗೊಂಬೆಯಾಗಿ ಇರುವುದು ಬೇಡ. ರೈತರು ಸ್ವತಂತ್ರವಾಗಿ ಬೆಳೆ ಮಾರಾಟ ಮಾಡಲು ಅವಕಾಶ ಕೊಟ್ಟಿದ್ದೇವೆ. ಬಂಡವಾಳ ಶಾಹಿಗಳ ಕೈಗೊಂಬೆಯಾಗ್ತಾರೆ ಅನ್ನೋದು ಸುಳ್ಳು. ಪಟ್ಟಭದ್ರ ಹಿತಾಸಕ್ತಿಯಿಂದ ಈ ಪ್ರತಿಭಟನೆ ನಡೆಯುತ್ತಿದೆ ಎಂದು ತಿಳಿಸಿದರು.

ಕೃಪಾಪೋಷಿತ ಜನರ ಪ್ರೇರಣೆಯಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ಕಾಂಪ್ರಮೈಸ್ ಆಗಿದ್ದೀವಿ. ಮಾತುಕತೆಗೂ ಸಿದ್ಧರಿದ್ದೀವಿ, ಆದರೆ ಕೆಲ ರೈತರೇ ಹಠ ಮಾಡುತ್ತಿದ್ದಾರೆ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಸದಾನಂದಗೌಡ ಹೇಳಿದರು.

English summary
Union minister Sadananda Gowda expressed outrage against the post made by pop singer Rihanna.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X