ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೌದಿಯಲ್ಲಿ ಮೈಸೂರು ಯುವಕ ಸಾವು: ಸುಷ್ಮಾ ಪ್ರತಿಕ್ರಿಯೆ

ಸೌದಿಯಲ್ಲಿ ಮೈಸೂರು ಮೂಲದ ವ್ಯಕ್ತಿ ಅನುಮಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಗೆ ವಿದೇಶಾಂಗ ಸಚಿವೆ ಸುಷ್ಮಾಪ್ರತಿಕ್ರಿಯಿಸಿದ್ದಾರೆ.

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮಾರ್ಚ್ 28: ಸೌದಿಯಲ್ಲಿ ಮೈಸೂರು ಮೂಲದ ವ್ಯಕ್ತಿ ಅನುಮಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಮಾಡಿದ ಟ್ವೀಟ್ ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪ್ರತಿಕ್ರಿಯಿಸಿದ್ದಾರೆ.

ಗೂಟದ ಕಾರು ನೆನಪಾಗಿ ಗೀತಾ ಚುನಾವಣೆಗೆ:ಹೇಳಿಕೆ ಹಿಂಪಡೆದ ಪ್ರತಾಪ್ ಸಿಂಹ

ಮಾರ್ಚ್ 25 ರಂದು ಶಬ್ಬಿರ್ (24) ಎಂಬವರು ಸಂಶಯಾಸ್ಪದವಾಗಿ ಸೌದಿಯಲ್ಲಿ ಮೃತರಾಗಿದ್ದರು. 9 ತಿಂಗಳ ಹಿಂದೆ ಡ್ರೈವರ್ ಕೆಲಸಕ್ಕಾಗಿ ಶಬ್ಬಿರ್ ಸೌದಿಗೆ ತೆರಳಿದ್ದರು. ಮೂರು ದಿನಗಳ ಹಿಂದೆ ನೇಣುಬಿಗಿದ ಸ್ಥಿತಿಯಲ್ಲಿ ಶಬ್ಬೀರ್ ಶವ ಪತ್ತೆಯಾಗಿತ್ತು. ಶವದ ಸ್ಥಿತಿ ನೋಡಿದ ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪ ಮಾಡಿದ್ದರು.['ಹರಕು ಬಾಯಿ ಹೊಲಸು ನಾಲಿಗೆಯ ಪ್ರತಾಪ್ ಸಿಂಹರಿಗೆ ಬುದ್ಧಿವಾದ ಹೇಳಿ']

Union minister Sushma assures help to bring Mysuru man's deadbody from Saudi

ಶಬ್ಬಿರ್ ಮೃತದೇಹವನ್ನು ಭಾರತಕ್ಕೆ ಕಳುಹಿಸಲು ಅಲ್ಲಿನ ಕಂಪೆನಿ ಮಾಲೀಕರು 3 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಶಬ್ಬಿರ್ ಮೃತದೇಹ ತರಿಸಿಕೊಡುವಂತೆ ಸಂಸದ ಪ್ರತಾಪ್ ಸಿಂಹಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಪ್ರತಾಪ್ ಸಿಂಹ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಪತ್ರ ಬರೆದು ಟ್ವೀಟ್ ಕೂಡ ಮಾಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸುಷ್ಮಾ ಸ್ವರಾಜ್ ಭಾರತೀಯ ರಾಯಭಾರಿ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಅವರಿಗೆ ಟ್ವೀಟ್ ಮಾಡಿದ್ದಾರೆ.

English summary
Union minister Sushma Swaraj has replied to the tweet posted by Mysore MP Pratap Simha, regarding suspicious death of a Mysuru man in Saudi Arabia. 'Indian Embassy is attending to this', She replied to pratap.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X