World Sparrow Day: ಮೈಸೂರಿನಲ್ಲಿ ವಿಶಿಷ್ಟ ರೀತಿಯಲ್ಲಿ ಗುಬ್ಬಚ್ಚಿ ಹಬ್ಬ ಆಚರಣೆ
ಮೈಸೂರು, ಮಾರ್ಚ್ 20: ವಿಶ್ವ ಗುಬ್ಬಚ್ಚಿ ದಿನಾಚರಣೆಯ ಅಂಗವಾಗಿ ನಗರದ ಮಹಾರಾಜ ಮೈದಾನದ ಮುಂಭಾಗ ಕೆಎಂಪಿಕೆ ಟ್ರಸ್ಟ್ ವತಿಯಿಂದ ಪಕ್ಷಿಗಳಿಗೆ ನೀರಿನ ಬೌಲು ಅಳವಡಿಸಿ ನೀರು ಹಾಗೂ ಆಹಾರ ಹಾಕುವ ಮೂಲಕ ಗುಬ್ಬಚ್ಚಿ ಹಬ್ಬವನ್ನು ಆಚರಿಸಲಾಯಿತು. ಈ ವೇಳೆ ಪ್ರಕೃತಿ ಸಮತೋಲನಕ್ಕಾಗಿ ಗುಬ್ಬಚ್ಚಿಗಳನ್ನು ಉಳಿಸೋಣ, ಬೇಸಿಗೆಯ ಬಿಸಿಲಿನ ತಾಪದಿಂದ ಪ್ರಾಣಿ ಪಕ್ಷಿಗಳನ್ನು ರಕ್ಷಿಸೋಣ, ಅಳಿದು ಹೋಗುತ್ತಿರುವ ಗುಬ್ಬಚ್ಚಿ ಸಂಕುಲಗಳ ಉಳಿವಿಗಾಗಿ ಜನಜಾಗೃತಿ ಮೂಡಿಸೋಣ ನಶಿಸಿ ಹೋಗುತ್ತಿರುವ ಗುಬ್ಬಚ್ಚಿ ಸಂಕುಲವನ್ನು ಸಂರಕ್ಷಿಸೋಣ ಎಂಬ ಘೋಷವಾಕ್ಯದ ನಾಮಫಲಕದ ಮೂಲಕ ಪಕ್ಷಿಗಳ ಸಂರಕ್ಷಣೆಯ ಸಂದೇಶ ಸಾರಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಉರಗ ತಜ್ಞ ಸ್ನೇಕ್ ಶ್ಯಾಮ್ ಸಾರ್ವಜನಿಕರಿಗೆ ಒಂದಷ್ಟು ಸಲಹೆಗಳನ್ನು ನೀಡಿದರು. 'ಇತ್ತೀಚಿನ ದಿನಗಳಲ್ಲಿ ಗುಬ್ಬಚ್ಚಿ ಅಳಿವಿನಂಚಿನಲ್ಲಿದೆ. ಗುಬ್ಬಚ್ಚಿ ಉಳಿದರೆ ಉತ್ತಮ ಪರಿಸರ ನೋಡಲು ಸಾಧ್ಯ. ನಾವು ಗುಬ್ಬಚ್ಚಿಗಳೊಂದಿಗೆ ಬೆಳೆದವರು, ಪರಿಸರ ಸಮತೋಲನ ಬಹಳ ಮುಖ್ಯ, ಗುಬ್ಬಚ್ಚಿ ಮಾತ್ರವಲ್ಲ ಎಲ್ಲ ಪಕ್ಷಿಗಳು ಕೂಡ ಅಳಿವಿನಂಚಿನಲ್ಲಿವೆ. ಆದ್ದರಿಂದ ಮುಂದಿನ ಪೀಳಿಗೆಗೂ ಗುಬ್ಬಿ ಸಂತತಿ ಉಳಿಸಿ' ಎಂದು ಮನವಿ ಮಾಡಿದರು.

'ಇಂದು ಕೃಷಿಗೆ ಕ್ರಿಮಿನಾಶಕಗಳನ್ನು ಬಳಸಲಾಗುತ್ತಿದೆ. ಇದು ವಿಷಕಾರಿಯಾಗಿದ್ದು, ಗುಬ್ಬಿಗಳು ಸಾವನ್ನಪ್ಪುತ್ತಿವೆ. ಗುಬ್ಬಚ್ಚಿ ಉಳಿಸಿದರೆ ಪರಿಸರದ ಉಳಿವು. ಮನುಷ್ಯರು ನಾವು ಮಾತ್ರ ಬದುಕದೇ, ಎಲ್ಲಾ ಜೀವಿಗಳು ಬದುಕಲು ಅವಕಾಶ ಮಾಡಿಕೊಡಬೇಕಾಗಿದೆ. ಸುಮಾರು 25ಕ್ಕೂ ಅಧಿಕ ಗುಬ್ಬಿಗಳ ಪ್ರಬೇಧವಿದೆ. ಆದರೆ ಗುಬ್ಬಿ ಸಂತತಿ ಇಂದು ಅಳಿವಿನಂಚಿನಲ್ಲಿದೆ ಎನ್ನುವುದೇ ಬೇಸರದ ಸಂಗತಿಯಾಗಿದೆ. ಮನುಷ್ಯನಿಂದ ಗುಬ್ಬಿಗೆ ಕಂಟಕ ಎದುರಾಗಿದೆ. ವಾಸಿಸಲು ಪೂರಕ ವಾತಾವರಣ ಇಲ್ಲದಿರುವುದು ಅವುಗಳ ಸಂತತಿ ಇಳಿಮುಖವಾಗಲು ಪ್ರಮುಖ ಕಾರಣವಾಗಿದೆ. ಆದ್ದರಿಂದ ಕೈಲಾದ ಮಟ್ಟಿಗೆ ಗುಬ್ಬಿಯ ಸಂಕುಲವನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸುವ ಕೆಲಸವನ್ನು ಮಾಡೋಣ' ಎಂದು ಹೇಳಿದರು.
ಗುಬ್ಬಚ್ಚಿ ಸಂರಕ್ಷಿಸಿ ಎಂದ ನಟ ಆದಿ ಲೋಕೇಶ್
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚಿತ್ರನಟ ಆದಿ ಲೋಕೇಶ್ ಮಾತನಾಡಿ, 'ಗುಬ್ಬಿ ಕಾಣಲು ಸಿಗುತ್ತಿಲ್ಲ. ಆದರೆ ನಮ್ಮ ಬಾಲ್ಯವನ್ನು ನೆನಪಿಡಿಸಿಕೊಂಡರೆ ಗುಬ್ಬಚ್ಚಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಇಂದು ಗುಬ್ಬಚ್ಚಿ ಸೇರಿದಂತೆ ಹಲವು ಪಕ್ಷಿ ಸಂಕುಲ ಅವಸಾನದಂಚಿನಲ್ಲಿದೆ. ಗುಬ್ಬಚ್ಚಿ ದಿನ ಮಾತ್ರ ಪಕ್ಷಿಗಳಿಗೆ ನೀರು ಆಹಾರ ನೀಡುವುದು ಮುಖ್ಯವಲ್ಲ. ಪ್ರತಿದಿನವೂ ಸಹ ಪಕ್ಷಿ ಸಂಕುಲನವನ್ನು ಉಳಿಸಲು ತಮ್ಮ ತಮ್ಮ ಮನೆಯ ಮೇಲೆ ಪ್ರಾಣಿ ಪಕ್ಷಿಗಳಿಗೆ ನೀರಿನ ಬಟ್ಟಲು ಅಳವಡಿಸುವ ಕೆಲಸವಾಗಬೇಕು ಎಂದು ಹೇಳಿದರು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications