ಮೈಸೂರಿಗರೇ ಇನ್ನು ವಿವಿಯಲ್ಲೂ ಸಕಾಲ ಸೇವೆ ಪಡೆಯಿರಿ
ಮೈಸೂರು, ಫೆ. 12: ಸರ್ಕಾರಿ ಸೇವೆ ಕುರಿತು ಹಲವರು ಮಾಹಿತಿ ಕೊರತೆ ಎದುರಿಸುತ್ತಿದ್ದಾರೆ. ಅವರಿಗಾಗಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಸಕಾಲ ಸೇವೆ ಆರಂಭಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ ಹೇಳಿದರು.
ವಿಶ್ವವಿದ್ಯಾಲಯದ ಕ್ರಾಫಡ್ ಭವನದಲ್ಲಿ ಬುಧವಾರ ಸಕಾಲ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವವಿದ್ಯಾಲಯದ ಶೈಕ್ಷಣಿಕ, ಪರೀಕ್ಷಾಂಗ ಹಾಗೂ ಹಣಕಾಸು ವಿಭಾಗಗಳಲ್ಲಿ ಸಕಾಲ ಸೇವೆ ಆರಂಭಿಸಲಾಗಿದೆ ಎಂದು ತಿಳಿಸಿದರು. [ಸಕಾಲ ಸೇವೆ ಆನ್ ಲೈನ್]

ಕಚೇರಿಯ ಸಿಬ್ಬಂದಿ ಅಥವಾ ಅಧಿಕಾರಿಗಳು ನಿಗದಿಪಡಿಸಿದ ಗುರಿ ತಲುಪುವಲ್ಲಿ ವಿಫಲರಾದರೆ ಪ್ರತಿ ಅರ್ಜಿಗೆ ದಿನಕ್ಕೆ 20 ರು.ಗಳಂತೆ ದಂಡ ವಿಧಿಸಲಾಗುವುದು. ಈ ಮೊತ್ತವನ್ನೂ 500 ರು. ವರೆಗೂ ಹೆಚ್ಚಿಸಲು ಅವಕಾಶವಿದೆ. ದಂಡದ ಮೊತ್ತವನ್ನು ಉದ್ಯೋಗಿಯ ಸಂಬಳದಲ್ಲಿ ಕಡಿತ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. [150 ಉಪನ್ಯಾಸಕರ ನೇಮಕ]
ಸಕಾಲ ಸೇವೆಯಿಂದ ವಿಶ್ವವಿದ್ಯಾಯದ ಸಿಬ್ಬಂದಿಯ ಕರ್ತವ್ಯ ನಿರ್ವಹಣೆ ಸಂಸ್ಕೃತಿ ಸುಧಾರಿಸುತ್ತದೆ. ಕಚೇರಿಯಲ್ಲಿ ಆರೋಗ್ಯಕರ ವಾತಾವರಣ ನಿರ್ಮಾಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು. [ಮೈಸೂರು ವಿವಿಗೆ ಜಪಾನ್ ವಿವಿ ಜೋಡಿ]
ವಿವಿ ಕುಲಸಚಿವ ಪ್ರೊ. ಸಿ. ಬಸವರಾಜು, ಮೌಲ್ಯಮಾಪನ ಕುಲಸಚಿವ ಪ್ರೊ. ಡಿ. ಶ್ರೀಜಯ ದೇವರಾಜ ಅರಸು, ಹಣಕಾಸು ಅಧಿಕಾರಿ ಪೊ.ಬಿ.ಮಹದೇವಪ್ಪ, ಪಿಎಂಇಬಿ ನಿರ್ದೇಶಕ ಪೊ›.ಎಸ್.ರವಿ ಹಾಗೂ ಸಕಾಲ ನೋಡೆಲ್ ಅಧಿಕಾರಿ ಭಟ್ ಸತೀಶ್ ಶಂಕರ್ ಹಾಜರಿದ್ದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications