• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

10 ಸರ್ಕಾರಿ ಶಾಲೆಗಳ ದತ್ತು ಪಡೆದ ಮೈಸೂರು ವಿಶ್ವವಿದ್ಯಾಲಯ

By ಮೈಸೂರು ಪ್ರತಿನಿಧಿ
|

ಮೈಸೂರು, ನವೆಂಬರ್ 26: ರಾಜ್ಯ ಸರ್ಕಾರದ ʻಸರ್ಕಾರಿ ಶಾಲೆಗಳ ದತ್ತು ಸ್ವೀಕಾರʼ ಯೋಜನೆ ಅಡಿಯಲ್ಲಿ ಮೈಸೂರು ವಿಶ್ವವಿದ್ಯಾಲಯ 10 ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿದೆ.

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ʻಸರ್ಕಾರಿ ಶಾಲೆಗಳ ದತ್ತು ಸ್ವೀಕಾರʼ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ದತ್ತು ಸ್ವೀಕಾರ ಪತ್ರ ವಿತರಿಸಿದರು.

ಶಾಸಕರ 'ಮಹಾರಾಣಿ' ಹೇಳಿಕೆಗೆ ಡಿಸಿ ರೋಹಿಣಿ ಸಿಂಧೂರಿ ತಿರುಗೇಟು

ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಇನ್ನಿತರರು ಹಾಜರಿದ್ದರು.

ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ (ಶತಮಾನ ಕಂಡ ಶಾಲೆ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಯಳಂದೂರು ತಾಲ್ಲೂಕಿನ ಕೊಮಾರನಸಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹನೂರು ತಾಲೂಕಿನ ಬೈಲೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದತ್ತು ಪಡೆಯಲಾಗಿದೆ.

ಅದೇ ರೀತಿ ಮಂಡ್ಯ ತಾಲ್ಲೂಕಿನ ಯಲೇಚಿಕ್ಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೊಳೆ ನರಸೀಪುರ ತಾಲ್ಲೂಕಿನ ಯಲ್ಲೇಶಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೈಸೂರು ತಾಲೂಕಿನ ಮಾರ್ಬಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗುಂಗ್ರಾಲ್ ಛತ್ರ ಸರ್ಕಾರಿ ಪ್ರೌಢಶಾಲೆ, ಕೆ.ಆರ್.ಮಿಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಎಚ್.ಡಿ.ಕೋಟೆ ತಾಲೂಕಿನ ಕ್ಯಾತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ವಿಶ್ವವಿದ್ಯಾಲಯ ದತ್ತು ಸ್ವೀಕರಿಸಿದೆ.

English summary
Mysore University has adopted 10 government schools under the State Government's Adoptance of Government Schools.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X