ಮೈಸೂರಿನಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ಮೈಸೂರು, ಮಾರ್ಚ್ 23 : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು - ಕೊಡಗು ಕ್ಷೇತ್ರದಲ್ಲಿ ಸ್ಪರ್ಧಿಸಲು ಬಯಸಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ವಿ. ಆಶಾರಾಣಿ ಸೇರಿದಂತೆ ಶುಕ್ರವಾರ ನಾಲ್ವರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
ಲೋಕಸಭಾ ಮಹಾ ಸಮರವೂ ವೇಗವನ್ನು ಪಡೆದುಕೊಂಡಿದ್ದು, ಕಾಂಗ್ರೆಸ್- ಬಿಜೆಪಿ ಪಕ್ಷಗಳು ಸಜ್ಜಾಗುತ್ತಿದೆ. ಈ ನಡುವೆ ಪಕ್ಷೇತರರಾಗಿ ಕೂಡ ಹಲವನ್ನು ನಾಮಪತ್ರ ಸಲ್ಲಿಸಿದ್ದಾರೆ. ಮಾರ್ಚ್ 26ಕ್ಕೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿರುವ ಕಾರಣ ಸದ್ಯ 11ಮಂದಿ ಸ್ಪರ್ಧಾಕಾಂಕ್ಷಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಚಲನಚಿತ್ರ ನಟ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಸ್ಥಾಪಿಸಿರುವ ಉತ್ತಮ ಪ್ರಜಾಕೀಯ ಪಕ್ಷದಿಂದ ಮೈಸೂರು - ಕೊಡಗು ಕ್ಷೇತ್ರದ ಅಭ್ಯರ್ಥಿಯಾಗಿ ಆಶಾರಾಣಿ ಕಣಕ್ಕಿಳಿಯುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ಅಭಿರಾಮ ಅವರಿಗೆ ಆಶಾರಾಣಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಉಳಿದಂತೆ ಶ್ರೀನಿವಾಸಯ್ಯ, ಕಾವೇರಿಯಮ್ಮ ಹಾಗೂ ಬಿ.ಡಿ ನಿಂಗಪ್ಪ ಎಂಬುವರು ತಮ್ಮ ಬೆಂಬಲಿಗರೊಂದಿಗೆ ತೆರಳಿ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಆದ ಅಭಿರಾಂ ಅವರಿಗೆ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರತಾಪ್ ಸಿಂಹ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಇದು ಯಾವುದೇ ನಾಮಪತ್ರ ಸ್ವೀಕೃತಿ ಇಲ್ಲ:ಸರ್ಕಾರದ ಅಧಿಸೂಚನೆಯ ಪ್ರಕಾರ ತಿಂಗಳಿನ ಎರಡನೇ ಮತ್ತು ನಾಲ್ಕನೇ ಶನಿವಾರ ಬ್ಯಾಂಕ್ ಗಳಿಗೆ ರಜಾ ದಿನವೆಂದು ಘೋಷಿಸಲಾಗಿದೆ.

ಭಾರತೀಯ ಚುನಾವಣಾ ಆಯೋಗ ಕೂಡ ತಿಂಗಳಿನ ಎರಡನೇ ಹಾಗೂ ನಾಲ್ಕನೇ ಶನಿವಾರದಂದು ರಜಾ ದಿನವಾಗಿರುವುದರಿಂದ ನಾಮಪತ್ರ ಸ್ವೀಕರಿಸುವುದಿಲ್ಲ. ಈ ಹಿನ್ನೆಲೆ ಲೋಕಸಭಾ ಚುನಾವಣೆ ಸಂಬಂಧ ನಾಲ್ಕನೇ ಶನಿವಾರವಾದ ಇಂದು ಯಾವುದೇ ನಾಮಪತ್ರಗಳನ್ನು ಸ್ವೀಕರಿಸುವುದಿಲ್ಲ ಎಂದು ಮೈಸೂರು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.












Click it and Unblock the Notifications