ದೇವೇಗೌಡರ ಮೇಲೆ ನಂಬಿಕೆ, ವಿಶ್ವಾಸವಿಲ್ಲ : ಶ್ರೀನಿವಾಸ್ ಪ್ರಸಾದ್
ಮೈಸೂರು, ಮಾರ್ಚ್ 30 : ನಮಗೆ ಜೆಡಿಎಸ್ ಮುಖಂಡ ದೇವೇಗೌಡರ ಬಗ್ಗೆ ಗೌರವವಿದೆ, ಅದರೆ ನಂಬಿಕೆ, ವಿಶ್ವಾಸವಿಲ್ಲ ಎಂದು ಚಾಮರಾಜನಗರ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ನಗರದಲ್ಲಿ ಮಾತನಾಡಿದ ಅವರು, ರಾಜಕೀಯವಾಗಿ ಅವರು ನಂಬಿಕೆ ಉಳಿಸಿಕೊಂಡಿಲ್ಲ. ಮಾಜಿ ಪ್ರಧಾನಿಯಾಗಿರುವ ಎಚ್.ಡಿ.ದೇವೇಗೌಡ ಅವರು ರಾಷ್ಟದ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಆದರೆ ತಮ್ಮ ಸ್ಥಾನಕ್ಕೆ ತಕ್ಕಂತೆ ನಂಬಿಕೆ ಬರುವ ಹಾಗೆ ಜನರಲ್ಲಿ ಭಾವನೆ ಉಳಿಸಿಕೊಂಡಿಲ್ಲ ಎಂದರು.
ಐಟಿ ಇಲಾಖೆಯ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಐಟಿ ಇಲಾಖೆ ಕೇಂದ್ರದ ಸಂಸ್ಥೆ. ಅದಕ್ಕೆ ತನ್ನದೇ ಆದ ಜವಬ್ದಾರಿ ಇದೆ. ಐಟಿ ಅಧಿಕಾರಿಗಳು ಮಾಹಿತಿ ಆಧರಿಸಿ ದಾಳಿ ಮಾಡುತ್ತಾರೆ ಹೊರತು ಅವರಿಗೆ ಯಾರು ಹೇಳಿಕೊಡುವುದಿಲ್ಲ. ಆದರೆ ಅದನ್ನು ಪ್ರಶ್ನಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದರು.

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಪಕ್ಷದ ನಾಯಕರು ಐಟಿ ದಾಳಿ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಬಹುದಿತ್ತು. ಅದನ್ನು ಬಿಟ್ಟು ಇಲಾಖೆಯ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದು ಸರಿಯಲ್ಲ ಎಂದರು.












Click it and Unblock the Notifications