ಸಿದ್ದರಾಮಯ್ಯಗೆ ಬುದ್ದಿ ಬಂದಿಲ್ಲ; ವಿ. ಶ್ರೀನಿವಾಸ್ ಪ್ರಸಾದ್

ಮೈಸೂರು, ಡಿಸೆಂಬರ್ 07; ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಹಾಗೂ ಮಾಜಿ ಸಿಎಂ‌ ಸಿದ್ದರಾಮಯ್ಯ ಒಂದಾಗಿರುವುದು ಹಾಸ್ಯಾಸ್ಪದ ಎಂದು ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಲೇವಡಿ ಮಾಡಿದರು.

ಮಂಗಳವಾರ ಮೈಸೂರಿನ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, "ಸಿದ್ದರಾಮಯ್ಯ ಹಾಗೂ ಜಿ. ಟಿ. ದೇವೇಗೌಡ ಒಂದಾಗಿರುವುದು ಒಂದು ರೀತಿಯ ನಗೆಪಾಟಲಿಗೀಡಾಗಿದೆ. ಇದೇ ಜಿ. ಟಿ. ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಪರ್ವ ಮಾಡಿದ್ದರು. ಜನತಾ ಪರಿವಾರ ಕಟ್ತಿನಿ ಅಂತ ಓಡಾಡಿದ್ದರು" ಎಂದರು.

"ಇದೇ ಸಿದ್ದರಾಮಯ್ಯ ರಾತ್ರೋರಾತ್ರಿ ಊರು ಬಿಟ್ಟು ಬದಾಮಿಗೆ ಹೋಗಿ ನಿಂತರು. ಈ ವೇಳೆ 35 ಸಾವಿರ ಮತಗಳಿಂದ ಸೋತು ಸಿದ್ದರಾಮಯ್ಯಗೆ ಬುದ್ದಿ ಬಂದಿಲ್ಲ. ಸಿಎಂ ಆಗಿ ನೀವೆ ಹೆದರಿಕೊಂಡು ಓಡಿಹೋದ್ರೆ ಹೇಗೆ?. ವೀರಾವೇಷದ ಮಾತಗಳನ್ನು ಆಡಿದಿರಿ. ಆದರೆ ಹೆದರಿ ಬಾದಾಮಿಗೆ ಹೋದರಿ" ಎಂದು ವ್ಯಂಗ್ಯವಾಡಿದರು.

 V Srinivas Prasad Verbal War Against GT Devegowda And Siddaramaiah

"ಅಧಿಕಾರಕ್ಕಾಗಿ ಪಕ್ಷಾಂತರ ಮಾಡಿ ಇದೀಗ ನಾನೇ ಸಿಎಂ ಎನ್ನುತ್ತಿದ್ದಾರೆ. ಏನೋ ಚುನಾವಣೆಯಲ್ಲಿ ಗೆದ್ದು ಬಂದಿದ್ದೀರಾ?. ಮೊದಲು ಅದನ್ನು ಉಳಿಸಿಕೊಳ್ಳಿ ಸಿದ್ದರಾಮಯ್ಯನವರೇ" ಎಂದು ಸಲಹೆ ನೀಡಿದರು.

ಬಿಜೆಪಿ ಮೇಲೆ ಮತದಾರರ ಒಲವು; ಸ್ಥಳೀಯ ಸಂಸ್ಥೆಗಳಿಂದ ನಡೆಯುತ್ತಿರುವ ವಿಧಾನ ಪರಿಷತ್‌ ಚುನಾವಣೆ ಕುರಿತ ಮಾತನಾಡಿ, "ಮೈಸೂರು ಹಾಗೂ ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆ 2021ರ ಮತದಾನಕ್ಕೆ ಮೂರು ದಿನ ಮಾತ್ರ ಬಾಕಿ ಇದ್ದು ಅನಾರೋಗ್ಯದ ಹಿನ್ನೆಲೆಯಲ್ಲಿ ಎಲ್ಲಿಯೂ ಪ್ರಚಾರಕ್ಕೆ ತೆರಳಲು ನನಗೆ ಸಾಧ್ಯವಾಗಿಲ್ಲ" ಎಂದರು.

"ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ವ್ಯಾಪಕ ಪ್ರಚಾರ ಮಾಡಿದ್ದಾರೆ. ಆರೋಗ್ಯ ಸರಿಯಿಲ್ಲದ ಕಾರಣ ನಾನು ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಮೊದಲೆಲ್ಲಾ ಕಾಂಗ್ರೆಸ್, ಜೆಡಿಎಸ್ ನಡುವೆ ಮಾತ್ರ ನೇರ ಸ್ಪರ್ಧೆ ಏರ್ಪಡುತ್ತಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಪ್ರಬಲವಾಗಿರುವುದರಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ" ಎಂದು ಹೇಳಿದರು.

"ಈ ಬಾರಿ ಸ್ಪರ್ಧೆ ತೀವ್ರವಾಗಿದ್ದು, ಮೊದಲ ಪ್ರಾಶಸ್ತ್ರ ಮತದಲ್ಲೇ ಬಿಜೆಪಿ ಗೆಲ್ಲಲ್ಲಿದೆ. ಮೈಸೂರು-ಚಾಮರಾಜನಗರ ಭಾಗದಲ್ಲಿ ಬಿಜೆಪಿ ಹೆಚ್ಚು ಶಕ್ತಿಯುತವಾಗಿದೆ. ಬಿಜೆಪಿ ಪಕ್ಷ ಸ್ಟ್ರಾಂಗ್ ಆದ ಕಾರಣ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕಳೆದ ಬಾರಿ ಕೆಲವೇ ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಗೆಲ್ಲುವ ಆತ್ಮ ವಿಶ್ವಾಸ ನಮಗಿದೆ" ಎಂದರು.

ಆರ್‌ಎಸ್‌ಎಸ್‌ ಬಗ್ಗೆ ಟೀಕೆ ಬೇಡ; ಆರ್‌ಎಸ್‌ಎಸ್‌ ಅನ್ನು ವ್ಯಾಪಕವಾಗಿ ಟೀಕಿಸುತ್ತಿದ್ದ ಜೆಡಿಎಸ್ ಇದೀಗ ಬಿಜೆಪಿ ಜೊತೆ ಹೊಂದಾಣಿಕೆಗೆ ಮುಂದಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, "ಎಚ್. ಡಿ. ಕುಮಾರಸ್ವಾಮಿ ಬಿಜೆಪಿ ಬಗ್ಗೆ ಟೀಕೆ ಮಾಡುವುದು ಸರಿ. ತಮ್ಮ ಟೀಕೆಗೆ ಆರ್‌ಎಸ್‌ಎಸ್‌ ಬಳಸಿ ಕೊಳ್ಳುವುದು ಸರಿಯಲ್ಲ. ಆರ್‌ಎಸ್‌ಎಸ್ ಒಂದು ರಾಜಕೀಯ ಪಕ್ಷವಲ್ಲ. ಹೀಗಾಗಿ ಅದರ ಮೇಲೆ ರಾಜಕೀಯವಾಗಿ ಟೀಕೆ ಸಲ್ಲದು" ಎಂದು ತಿಳಿಸಿದರು.

"ಬಿಜೆಪಿಗೆ ಯಾವ ಪಕ್ಷದ ಮೈತ್ರಿಯೂ ಅನಿವಾರ್ಯ ವಲ್ಲ. ಬಿಜೆಪಿಗೆ ಯಾರ ಮೈತ್ರಿಯೂ ಬೇಕಾಗಿಲ್ಲ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದ ಗೆದ್ದಿದ್ದು ಎಷ್ಟು ಸ್ಥಾನ ಗೊತ್ತಿದೆ. ಯಾರ ಮೈತ್ರಿಯೂ ಬಿಜೆಪಿಗೆ ಅಗತ್ಯವಿಲ್ಲ ಅತಿ ಹೆಚ್ಚು ಸ್ಥಾನಗಳಿಸಿ ಕೇಂದ್ರದಲ್ಲಿ ಅಧಿಕಾರ ಹಿಡಿದಿರೋ ದೊಡ್ಡ ಪಕ್ಷ ಬಿಜೆಪಿ" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+