ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವರಮಹಾಲಕ್ಷ್ಮೀ ಹಬ್ಬ: ಇಂದಿನಿಂದ 3 ದಿನಗಳ ಕಾಲ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧ

|
Google Oneindia Kannada News

ಮೈಸೂರು, ಆಗಸ್ಟ್ 20: ಶ್ರಾವಣ ಮಾಸದ ಎರಡನೇ ಶುಕ್ರವಾರ ದಿನವಾದ ಇಂದು (ಆ.20) ವರಮಹಾಲಕ್ಷ್ಮೀ ಹಬ್ಬವನ್ನು ರಾಜ್ಯದೆಲ್ಲೆಡೆ ಬಹಳ ಸಡಗರ ಸಂಭ್ರಮದಿಂದ ಜನರು ಆಚರಿಸುತ್ತಿದ್ದಾರೆ.

ಹಬ್ಬದ ವಿಶೇಷ ದಿನವಾದ ಶುಕ್ರವಾರ ಮೈಸೂರು ಜಿಲ್ಲೆಯ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿರುವುದರಿಂದ ಇಂದಿನಿಂದ ಮೂರು ದಿನಗಳ ಕಾಲ ಚಾಮುಂಡಿ ಬೆಟ್ಟಕ್ಕೆ ಪ್ರವೇಶವನ್ನು ನಿಷೇಧಿಸಲಾಗಿದೆ. ವಾರಾಂತ್ಯ ದಿನಗಳಾದ ಶನಿವಾರ ಮತ್ತು ಭಾನುವಾರವೂ ಜಿಲ್ಲಾಡಳಿತದ ಸೂಚನೆಯಂತೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ವರಮಹಾಲಕ್ಷ್ಮೀ ಹಬ್ಬದ ದಿನ ಸಾಮಾನ್ಯವಾಗಿ ಚಾಮುಂಡೇಶ್ವರಿ ದೇವಿಯ ದರ್ಶನಕ್ಕಾಗಿ ಹೆಚ್ಚಾಗಿ ಭಕ್ತರು ಬರುತ್ತಾರೆ. ಈ ವಿಶೇಷ ದಿನದಂದು ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆಯಬೇಕೆಂಬುದು ಭಕ್ತರ ಆಶಯವಾಗಿರುತ್ತದೆ.

Mysuru: Varamahalakshmi Festival: People Entry Restricted To Chamundi Hills For Next 3 Days

ಚಾಮುಂಡಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವ ಕಾರಣ ಕೊರೊನಾ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು ಜಿಲ್ಲಾಡಳಿತ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಿದೆ.

ಈಗಾಗಲೇ ಕೊರೊನಾ ಸೋಂಕಿನ ಕಾರಣದಿಂದ ವೀಕೆಂಡ್ ಕರ್ಫ್ಯೂ ಹಾಗೂ ಭಾನುವಾರ ಬೆಟ್ಟಕ್ಕೆ ನಿರ್ಬಂಧ ಹೇರಲಾಗಿದೆ. ಜೊತೆಗೆ ಶ್ರಾವಣ ಶನಿವಾರ ಹಿನ್ನಲೆ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿಯಾಗಿರುವ ವಿವಿಪುರಂನ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೂ ಪ್ರವೇಶವನ್ನು ನಿಷೇಧಿಸಲಾಗಿದೆ.

ಗೊರವನಹಳ್ಳಿ ಮಹಾಲಕ್ಷ್ಮೀ ದೇಗುಲ ಬಂದ್
ಆಗಸ್ಟ್ 20, ಶುಕ್ರವಾರದಂದು ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಭಕ್ತರು ಆಗಮಿಸುತ್ತಾರೆಂದು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನವನ್ನು ಬಂದ್ ಮಾಡಲಾಗಿದೆ.

Mysuru: Varamahalakshmi Festival: People Entry Restricted To Chamundi Hills For Next 3 Days

ಕೊರೊನಾ ಮೂರನೇ ಅಲೆ ಭೀತಿ ಎದುರಾಗಿದ್ದು, ಮಹಾಲಕ್ಷ್ಮೀ ದೇವಸ್ಥಾನಕ್ಕೆ ಬರುವ ಭಕ್ತ ಸಾಗರವನ್ನು ನಿಯಂತ್ರಿಸಲು ಕಷ್ಟವಾಗುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್​ 20ರಂದು​ ಮಹಾಲಕ್ಷ್ಮೀ ದೇಗಲವನ್ನು ಬಂದ್ ಮಾಡಲಾಗುತ್ತದೆ.

ತುಮಕೂರು ಜಿಲ್ಲೆಯ ಗೊರವನಹಳ್ಳಿ, ದೇವರಾಯನದುರ್ಗ, ನಾಮದಚಿಲುಮೆ ಹಾಗೂ ಬಸದಿಬೆಟ್ಟ, ಸಿದ್ದರಬೆಟ್ಟ ಸೇರಿದಂತೆ ಹಲವು ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

ವಾರದಲ್ಲಿ 4 ದಿನ ಬಂದ್ ಮತ್ತು 3 ದಿನ ಮಾತ್ರ ದೇಗುಲ ಓಪನ್ ಮಾಡಲು ತುಮಕೂರು ಜಿಲ್ಲಾಡಳಿತ ಆದೇಶ ಮಾಡಿದೆ. ಮಂಗಳವಾರ, ಬುಧವಾರ, ಗುರುವಾರ ಮಾತ್ರ ದೇವಸ್ಥಾನ ತೆರೆದಿರುತ್ತದೆ. ಉಳಿದ ನಾಲ್ಕು ದಿನ ದೇವಸ್ಥಾನ ಬಂದ್ ಆಗಲಿದೆ. ಈ ವೇಳೆ ಅರ್ಚಕರಿಗೆ ಮಾತ್ರ ಪೂಜೆ ಮಾಡುವ ಅವಕಾಶವಿದ್ದು, ಭಕ್ತರಿಗೆ ದರ್ಶನಕ್ಕೆ ಅವಕಾಶವಿಲ್ಲ.

English summary
Varamalakshmi Festival: People Entry Restricted to Chamundi Hills for next 3 days; Goravanhalli Mahalakshmi temple also closed for devotees . Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X