ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಮೈಸೂರಿನಲ್ಲಿ ವಿನೂತನ ಪ್ರತಿಭಟನೆ

ಮೈಸೂರು, ಸೆಪ್ಟೆಂಬರ್. 7: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿರುವ ಬೆನ್ನಲ್ಲೇ ಮೈಸೂರು ನಗರದಲ್ಲಿ ವಿವಿಧ ಸಂಘಟನೆಗಳು ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದವು.

ನಗರದ ನ್ಯಾಯಾಲಯದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಜಮಾವಣೆಗೊಂಡ ಕರ್ನಾಟಕ ಸೇನಾಪಡೆಯ ಕಾರ್ಯಕರ್ತರು, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೇ, ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಸೇನಾಪಡೆಯ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 9 ತಿಂಗಳಿಗೊಮ್ಮೆ ಪರಿಷ್ಕರಿಸುತ್ತಿದ್ದ ಪೆಟ್ರೋಲ್, ಡೀಸೆಲ್ ದರವನ್ನು ಬಿಜೆಪಿ ಸರ್ಕಾರ ಪ್ರತಿದಿನವೂ ಪರಿಷ್ಕರಿಸಿ ಜನರ ಕಣ್ಣಿಗೆ ಮಣ್ಣೆರಚುತ್ತಿದೆ.

Various organizations protest against the increase in petrol prices.

ಪ್ರಣಾಳಿಕೆಯಲ್ಲಿ 40 ರೂ.ಗೆ ಲೀಟರ್ ಪೆಟ್ರೋಲ್ ನೀಡುವುದಾಗಿ ಘೋಷಿಸಿದ್ದ ಬಿಜೆಪಿ ಮಾತು ತಪ್ಪಿದೆ. ಕೇಂದ್ರ ಸರ್ಕಾರದ ಅಚ್ಛೇ ದಿನ್ ಮರಿಚಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಗ್ರಹಾರ ವೃತ್ತದಲ್ಲಿ ತಳ್ಳುಗಾಡಿ ಮೇಲೆ ದ್ವಿಚಕ್ರವಾಹನ ನಿಲ್ಲಿಸುವ ಮೂಲಕ ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟಿಸಿದರು.

Various organizations protest against the increase in petrol prices.

ಅಮೆರಿಕಾದ ಹಿಡಿತದಲ್ಲಿರುವ ಕೇಂದ್ರ ಸರ್ಕಾರ ಆರ್ಥಿಕ ನೀತಿಯನ್ನೇ ಗಾಳಿಗೆ ತೂರಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡುತ್ತಿರುವುದು ಖಂಡನೀಯ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+