ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವರುಣಾ ಕ್ಷೇತ್ರ: ಯತೀಂದ್ರ vs ಬಿಎಸ್ ವೈ ಪುತ್ರ ವಿಜೇಂದ್ರ?

By ಯಶಸ್ವಿನಿ ಎಂ.ಕೆ
|
Google Oneindia Kannada News

ಮೈಸೂರು, ಮಾರ್ಚ್ 26 : ವರುಣಾ ವಿಧಾಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ಈಗಾಗಲೇ ಕ್ಷೇತ್ರದಲ್ಲೆಡೆ ಅಭ್ಯರ್ಥಿ ಎಂದು ಘೋಷಣೆಯಾಗುವುದಕ್ಕೂ ಮುನ್ನವೇ ಸ್ವಘೋಷಿತವಾಗಿಯೇ ಯತೀಂದ್ರ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಯತೀಂದ್ರ ಎದುರು ಸ್ಪರ್ಧಿಸಲು ಕಮಲ ಕಾರ್ಯಕರ್ತರು ಹೊಸ ಮಾಸ್ಟರ್ ಪ್ಲಾನ್ ಗೆ ಸಜ್ಜಾಗಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೌದು, ಸಿಎಂ ಪುತ್ರನೆದುರು ಕಣಕ್ಕಿಳಿಸಲು ಬಿಎಸ್ವೈ ಪುತ್ರ ವಿಜೇಂದ್ರರವನ್ನು ನಿಲ್ಲಿಸಲು ರಣತಂತ್ರ ಸಜ್ಜಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೆ. ಎನ್ ಪುಟ್ಟಬುದ್ಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿರುದ್ಧ ಯಡಿಯೂರಪ್ಪನವರ ಪುತ್ರ ವಿಜೇಂದ್ರ ಪ್ರಬಲ ಅಭ್ಯರ್ಥಿಯಾಗಲಿದ್ದು, ಅವರು ವರುಣಾದಿಂದ ಸ್ಪರ್ಧಿಸಿದರೆ ನಾವೆಲ್ಲ ಸಂಘಟಿತರಾಗಿ ಕೆಲಸ ಮಾಡಿ ಗೆಲ್ಲಿಸುತ್ತೇವೆ ಎಂದು ಹೇಳಿದರು

ವರುಣಾ ಕ್ಷೇತ್ರದಲ್ಲಿ ಸಿದ್ದುಗೆ ಸಡ್ಡು ಹೊಡೆಯಲು ಜೆಡಿಎಸ್ ಸಜ್ಜು ವರುಣಾ ಕ್ಷೇತ್ರದಲ್ಲಿ ಸಿದ್ದುಗೆ ಸಡ್ಡು ಹೊಡೆಯಲು ಜೆಡಿಎಸ್ ಸಜ್ಜು

ಜೆಪಿ ರಾಜ್ಯಾಧ್ಯಕ್ಷ ಬಿಎಸ್ವೈ ಪುತ್ರ ವಿಜೇಂದ್ರ ಅವರು ವರುಣಾ ಕ್ಷೇತ್ರದ ಅಭ್ಯರ್ಥಿ ಎನ್ನುವುದಕ್ಕೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ನಾವು ಕೂಡ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಡಾ.ಯತೀಂದ್ರ ಅವರನ್ನು ಎದುರಿಸಲು ಸಿದ್ಧರಿದ್ದೇವೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ, ಯಾರೇ ಅಭ್ಯರ್ಥಿಯಾದರೂ ಬಿಜೆಪಿಯನ್ನು ಗೆಲ್ಲಿಸುತ್ತೇವೆ. ಈ ನಿಟ್ಟಿನಲ್ಲಿ ಕಳೆದ 6 ತಿಂಗಳಿನಿಂದಲೂ ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದೇವೆ ಎಂದಿದ್ದಾರೆ.

Varuna constituency: Siddaramaiah son vs BSy son?

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರು ಆಡಳಿತ ವೈಖರಿಯ ಜನಮೆಚ್ಚುಗೆ ಗಳಿಸಿದ್ದು ರಾಜ್ಯದಲ್ಲಿಯೂ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಮುಂದಿನ ಆಡಳಿತ ನಡೆಸಲಿದೆ ಎಂದರು.
English summary
Karnataka assembly elections 2018: BJP Leader B. S Yadiyurappa's son vijendra insist to contest in Varuna constituency in Mysuru on opposite of CM Siddramaiah son Yathindra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X