ವರುಣಾ ಫಲಿತಾಂಶ 2023: ವಿ ಸೋಮಣ್ಣ ಸೋಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
ಮೈಸೂರು, ಮೇ 13:ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶದ ಅಂದಾಜು ಪಟ್ಟಿ ಲಭ್ಯವಾಗಿದ್ದು, ಇಡೀ ದೇಶವೇ ಎದುರು ನೋಡುತ್ತಿದ್ದ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಸಿದ್ದರಾಮಯ್ಯ ಅವರು ಗೆಲುವು ಸಾಧಿಸಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಸಿದ್ದರಾಮಯ್ಯ ಅವರು 57,393 ಮತಗಳ ಮುನ್ನಡೆ ಸಾಧಿಸಿದ್ದಾರೆ. ವಿ ಸೋಮಣ್ಣ 34,380 ಮತಗಳನ್ನು ಪಡೆದುಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ಸೋಮಣ್ಣ ವಿರುದ್ಧ 29,193 ಮತಗಳ ಮುನ್ನಡೆ ಸಾಧಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನಾವು ಏನು ಬೇಕಾದರೂ ಮಾಡುತ್ತೇವೆ.ಕರ್ನಾಟಕದ ಹಿತದೃಷ್ಟಿಯಿಂದ ನನ್ನ ತಂದೆ ಸಿಎಂ ಆಗಬೇಕು ಎಂದು ಹೇಳಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಅವರಿಗೆ ಹತ್ತಿರ ಪ್ರತಿಸ್ಪರ್ಧಿಯಾಗಿ ಬಿಜೆಪಿಯ ಸಚಿವ ವಿ ಸೋಮಣ್ಣ ಅವರು ಸ್ಪರ್ಧೆ ಮಾಡಿದ್ದಾರೆ, ಅದರಂತೆ ಜೆಡಿಎಸ್‌ನಿಂದ ಡಾ ಭಾರತಿ ಶಂಕರ್ ಅವರು ಸ್ಪರ್ಧೆ ಮಾಡಿದ್ದಾರೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿಎಂ ಅಭ್ಯರ್ಥಿ ಬಿಂಬಿತವಾಗಿದ್ದ ಸಿದ್ದರಾಮಯ್ಯ ಅವರು ವರುಣಾದಿಂದ ಸ್ಪರ್ಧೆ ಮಾಡುತ್ತಿರುವುದರಿಂದ ಈ ಕ್ಷೇತ್ರ ದೇಶದ ಗಮನ ಸೆಳೆದಿತ್ತು.
ರಾಜ್ಯದ ಪ್ರಮುಖ ವಿಧಾನಸಭಾ ಕ್ಷೇತ್ರವಾಗಿದ್ದ ವರುಣಾದಲ್ಲಿ ಸಿದ್ದರಾಮಯ್ಯ ಅವರ ಸ್ಪರ್ಧೆಯಿಂದ ರಾಜ್ಯದ ಗಮನ ಸೆಳೆದಿತ್ತು. ಕಳೆದ ಬಾರಿ ವರುಣಾದಿಂದ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. 2008 ಹಾಗೂ 2013ರಲ್ಲಿ ವರುಣಾದಲ್ಲಿ ಎರಡು ಬಾರಿ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು.

2008ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು 71,000 ಮತಗಳನ್ನು ಪಡೆದು 18,837 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದರು, ಅವರ ವಿರುದ್ಧ ಬಿಜೆಪಿಯಿಂದ ಎಲ್. ರೇವಣಸಿದ್ದಯ್ಯ ಅವರು ಸ್ಪರ್ಧೆ ಮಾಡಿದ್ದು, 53,071 ಮತಗಳನ್ನು ಪಡೆದಿದ್ದರು. ಜೆಡಿಎಸ್‌ನಿಂದ ಎಚ್‌ವಿ ಕೃಷ್ಣಮೂರ್ತಿ ಅವರು 4,133 ಪಡೆದಿದ್ದರು. ಇಲ್ಲಿ ಸಿದ್ದರಾಮಯ್ಯ ಅವರು ಶೇಕಡ 50.23ರಷ್ಟು ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಎಲ್ ರೇವಣಸಿದ್ದಯ್ಯ ಅವರು 37.07% ಮತಗಳನ್ನು ಪಡೆದಿದ್ದರು. ಇನ್ನು ಜೆಡಿಎಸ್‌ನ ಕೃಷ್ಣಮೂರ್ತಿ ಅವರು ಕೇವಲ ಶೇಕಡ 2.89ರಷ್ಟು ಮತಗಳನ್ನು ಪಡೆದಿದ್ದರು.
ಇದೇ 2013 ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು 74,385 ಮತಗಳನ್ನು ಪಡೆದು 10,199 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದರು, ಅವರ ವಿರುದ್ಧ ಬಿಜೆಪಿಯಿಂದ ಕಾಪುಸಿದ್ದಲಿಂಗಸ್ವಾಮಿ ಅವರು ಸ್ಪರ್ಧೆ ಮಾಡಿದ್ದು, 54,744 ಮತಗಳನ್ನು ಪಡೆದಿದ್ದರು. ಜೆಡಿಎಸ್‌ನಿಂದ ಚೆಲುವರಾಜ್ ಅವರು 2,686 ಪಡೆದಿದ್ದರು. ಇಲ್ಲಿ ಸಿದ್ದರಾಮಯ್ಯ ಅವರು ಶೇಕಡ 48.75 ರಷ್ಟು ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಕಾಪುಸಿದ್ದಲಿಂಗಸ್ವಾಮಿ ಅವರು ಶೇಕಡ 34.08 ಮತಗಳನ್ನು ಪಡೆದಿದ್ದರು. ಇನ್ನು ಜೆಡಿಎಸ್‌ನ ಚೆಲುವರಾಜ್ ಅವರು ಕೇವಲ ಶೇಕಡ 1.67 ರಷ್ಟು ಮತಗಳನ್ನು ಪಡೆದಿದ್ದರು.

ಹಾಗೆಯೇ 2018ರಲ್ಲಿ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ ಅವರು ಅವರ ತಂದೆಗಿಂತಲೂ ಮುಂದೆ ಹೋಗಿ 96,435 ಮತಗಳನ್ನು ಪಡೆದು 58,616 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದರು, ಅವರ ವಿರುದ್ಧ ಬಿಜೆಪಿಯಿಂದ ಟಿ ಬಸವರಾಜು ಅವರು ಸ್ಪರ್ಧೆ ಮಾಡಿದ್ದು, 37,819 ಮತಗಳನ್ನು ಪಡೆದಿದ್ದರು. ಜೆಡಿಎಸ್‌ನಿಂದ ಅಭಿಷೇಕ್ ಅವರು 28,123 ಪಡೆದಿದ್ದರು. ಇಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಶೇಕಡ 55.09 ರಷ್ಟು ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಟಿ ಬಸವರಾಜು ಅವರು ಶೇಕಡ 21.60 ಮತಗಳನ್ನು ಪಡೆದಿದ್ದರು. ಇನ್ನು ಜೆಡಿಎಸ್‌ನ ಅಭೀಷೇಖ್ ಅವರು ಶೇಕಡ 16.07 ರಷ್ಟು ಮತಗಳನ್ನು ಪಡೆದಿದ್ದರು.
ಈ ಬಾರಿ ಸಿದ್ದರಾಮಯ್ಯ ಅವರು ಬಿಜೆಪಿಯ ಪ್ರಬಲ ಲಿಂಗಾಯತ ಸಮುದಾಯದ ನಾಯಕ ವಿ ಸೋಮಣ್ಣ ಅವರೊಂದಿಗೆ ಸ್ಪರ್ಧೆ ಮಾಡಿದ್ದು ಕ್ಷೇತ್ರದಲ್ಲಿ ಜಿದ್ದಾಜಿದ್ದಿ ಏರ್ಟಟ್ಟಿತ್ತು. ಪ್ರಚಾರಕ್ಕೆ ಹೋಗಿದ್ದ ವಿ ಸೋಮಣ್ಣಗೆ ಹಲವೆಡೆ ಗ್ರಾಮಸ್ಥರಿಂದ ಪ್ರತಿರೋಧವು ಉಂಟಾಗಿತ್ತು. ಹೀಗಾಗಿ ಸಿದ್ದರಾಮಯ್ಯ ಅವರಿಗೆ ಈ ಬಾರಿ ಗೆಲುವು ನಿಶ್ಚಿತವಾಗಿತ್ತು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election












Click it and Unblock the Notifications