ತಮಿಳುನಾಡಿಗೆ ನೀರು; ಮೈಸೂರಿನಲ್ಲಿ ವಾಟಾಳ್ ಪ್ರತಿಭಟನೆ

ಮೈಸೂರು, ಮೇ 29: ತಮಿಳುನಾಡಿಗೆ ಕಾವೇರಿ ನೀರು ಹರಿಬಿಡುವ ವಿಚಾರವಾಗಿ ಕಾವೇರಿ ನಿರ್ವಹಣಾ ಪ್ರಾಧಿಕಾರವನ್ನು ರಾಜ್ಯ ಸರ್ಕಾರ ಒಪ್ಪಬಾರದು. ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ನಲ್ಲಿ ಜೂನ್ 3ರಂದು ಸತ್ಯಾಗ್ರಹ ಮಾಡಲಾಗುವುದು ಎಂದು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ತಿಳಿಸಿದರು.

ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ರಸ್ತೆ ಮೇಲೆ ಮಲಗಿ ಪ್ರತಿಭಟನೆ ನಡೆಸಿದ ವಾಟಾಳ್, ನಾನು ಪ್ರಾಧಿಕಾರವನ್ನು ಒಪ್ಪುತ್ತಿಲ್ಲ. ತಮಿಳುನಾಡು ಪ್ರಾಧಿಕಾರ ಬೇಕೆಂದು ಹೇಳಿತ್ತು. ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರದ ವಿರೋಧ ಕೂಡಿತ್ತು. ಆದರೆ ಇದೀಗ ರಾಜ್ಯ ಸರ್ಕಾರ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಿ ಅದಕ್ಕೆ ಒಪ್ಪಿಗೆ ನೀಡಿದೆ. ಯಾವುದೇ ಕಾರಣಕ್ಕೂ ಕಾವೇರಿ ನಿರ್ವಹಣಾ ಪ್ರಾಧಿಕಾರವನ್ನು ರಾಜ್ಯ ಸರ್ಕಾರ ಒಪ್ಪಬಾರದು. ಪ್ರಾಧಿಕಾರಕ್ಕೆ ನಮ್ಮ ವಿರೋಧವಿದೆ. ಒಂದು ಹನಿ ನೀರು ಕೊಟ್ಟರೂ ನಮ್ಮ ವಿರೋಧವಿದೆ. ಬೆಂಗಳೂರಿಗರಿಗೂ ನೀರಿಲ್ಲ, ರೈತರಿಗೆ ನೀರಿಲ್ಲದ ಪರಿಸ್ಥಿತಿ ಉಂಟಾಗುತ್ತದೆ. ಒಂದು ವೇಳೆ ನೀರು ಬಿಟ್ಟರೆ ಸಮಗ್ರ ಕರ್ನಾಟಕ ಬಂದ್ ಮಾಡಲಾಗುತ್ತದೆ. ಕೆಆರ್ ಎಸ್ ನಲ್ಲಿ ಜೂನ್ 3ರಂದು ಸತ್ಯಾಗ್ರಹ ಮಾಡಲಾಗುವುದು ಎಂದರು.

ಇತ್ತೀಚಿಗೆ ಸಚಿವ ಸಂಪುಟದಲ್ಲಿ ಜಿಂದಾಲ್ ಸಂಸ್ಥೆಗೆ ಭೂಮಿ ನೀಡಲು ಸಮ್ಮತಿ ನೀಡಲಾಗಿದೆ. ಈ ನಡೆ ಸರಿಯಲ್ಲ. ರೈತರ ಭೂಮಿ ಕಸಿದುಕೊಂಡು ರಿಯಲ್ ಎಸ್ಟೇಟ್ ಸಂಸ್ಥೆಗೆ ನೀಡುತ್ತಿದ್ದಾರೆ. ಜಿಂದಾಲ್ ಸಂಸ್ಥೆಯೊಂದಿಗೆ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ. 3,660ಕ್ಕೂ ಹೆಚ್ಚಿನ ಎಕರೆ ಭೂಮಿಯನ್ನು 1.45 ಲಕ್ಷ ರೂ.ನಂತೆ ನೀಡುವ ಮೂಲಕ ರಾಜ್ಯಕ್ಕೆ ಕೋಟ್ಯಾನುಕೋಟಿ ಹಣ ನಷ್ಟವಾಗಲಿದೆ. ಈ ಕೂಡಲೇ ರಾಜ್ಯ ಸರ್ಕಾರ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

Vatal nagraj protest against governments plan of giving land to Jindal

ಇದೇ ವೇಳೆ, ಇವಿಎಂ ಮತಯಂತ್ರದ ಬಗ್ಗೆ ಮಾತನಾಡಿದ ಅವರು, ಈ ಯಂತ್ರದ ಕುರಿತು ದೇಶ ವಿದೇಶಗಳಲ್ಲಿ ಅನುಮಾನ ವ್ಯಕ್ತಪಡಿಸಿರುವುದರಿಂದ, ಅದರ ಸಾಚಾತನದ ಬಗ್ಗೆ ತಿಳಿಸಬೇಕು. ಜೊತೆಗೆ ಪಕ್ಷದಿಂದ ಪಕ್ಷಕ್ಕೆ ಹಾರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಅದಕ್ಕಾಗಿ ಪಕ್ಷಾಂತರ ಕಾಯ್ದೆ ತಿದ್ದುಪಡಿಯಾಗಬೇಕು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+