ಚಾಮುಂಡಿ ಬೆಟ್ಟದಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಿ; ವಿಎಚ್‌ಪಿ ಆಗ್ರಹ

ಮೈಸೂರು, ಮಾರ್ಚ್ 26: ಹಿಂದೂ ದೇವಸ್ಥಾನ ಮತ್ತು ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡಲು ಅವಕಾಶ ನೀಡಬಾರದೆಂಬ ಕೂಗಿಗೆ ಮೈಸೂರಿನ ವಿಶ್ವ ಹಿಂದೂ ಪರಿಷತ್ ಧ್ವನಿಗೂಡಿಸಿದೆ.

ಶಾಲಾ- ಕಾಲೇಜುಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸಬಾರದು. ಅದು ಧಾರ್ಮಿಕತೆ ಭಾಗ ಅಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಇದನ್ನು ಖಂಡಿಸಿ ಇತ್ತೀಚೆಗೆ ಮುಸ್ಲಿಂ ಸಮುದಾಯದ ವ್ಯಾಪಾರಿಗಳು 1 ದಿನ ವ್ಯಾಪಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.

ಅಲ್ಲದೆ, ಪ್ರಸ್ತುತ ಈ ವಿವಾದ ಕುರಿತು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ಹಿಂದೂ ದೇವಾಸ್ಥಾನದಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದೆಂಬ ಕೂಗ ಕೇಳಿ ಬಂದಿದೆ.

VHP Urged To Ban On Stalls of Muslim Traders In Chamundeshwari Temple in Chamundi Hills

ಉಡುಪಿಯ ಕಾಪು ಮಾರಿಗುಡಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶವನ್ನು ಹಿಂದೂ ಸಂಘಟನೆಗಳು ನಿರ್ಬಂಧಿಸಿವೆ. ಇದೀಗ ರಾಜ್ಯದ ಇತರ ಭಾಗಗಳಿಗೂ ಇದು ವ್ಯಾಪಿಸುತ್ತಿದೆ. ಮೈಸೂರಿನ ಪ್ರಮುಖ ಧಾರ್ಮಿಕ ಕೇಂದ್ರ ಚಾಮುಂಡಿ ಬೆಟ್ಟದಲ್ಲೂ ಮುಸ್ಲಿಂರಿಂದ ವ್ಯಾಪಾರ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಧಾರ್ಮಿಕ ದತ್ತಿ ಇಲಾಖೆಗೆ ವಿಶ್ವ ಹಿಂದೂ ಪರಿಷತ್ ಮೈಸೂರು ಘಟಕದಿಂದ ಮನವಿ ಸಲ್ಲಿಕೆಯಾಗಿದೆ.

VHP Urged To Ban On Stalls of Muslim Traders In Chamundeshwari Temple in Chamundi Hills

ಧಾರ್ಮಿಕ ದತ್ತಿ ಇಲಾಖೆಗೆ ಪತ್ರ ಬರೆದಿರುವ ವಿಶ್ವ ಹಿಂದೂ ಪರಿಷತ್ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಕಲ್ಪಿಸಬೇಕು. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ. ಸದ್ಯ ಚಾಮುಂಡಿ ಬೆಟ್ಟದಲ್ಲಿ 5 ಮುಸ್ಲಿಮರ ಅಂಗಡಿಗಳಿರುವ ಬಗ್ಗೆ ಮಾಹಿತಿ ಇದ್ದು, ಹಿಂದೂಯೇತರರಿಗೆ ಅವಕಾಶ ಕೊಡಬಾರದು ಎಂದು ಮನವಿ ಸಲ್ಲಿಕೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+