ರಸ್ತೆ ನಟ್ಟನಡುವೆ ಜನರ ಮಧ್ಯೆಯೇ ಆರಾಮಾಗಿ ನಡೆದಾಡಿದ ಚಿರತೆ
ಮೈಸೂರು, ಜನವರಿ 6: ಕಾಡಾನೆಗಳ ಹಾವಳಿ ಜತೆಗೇ ಇದೀಗ ಚಿರತೆ ಹಾವಳಿ ಕೂಡ ಶುರುವಾಗಿದೆ. ಪ್ರತಿದಿನ ಅನೇಕ ಗ್ರಾಮೀಣ ಭಾಗ ಹಾಗೂ ನಗರಗಳ ಹೊರವಲಯದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿವೆ.
ಹೀಗೆ ಚಿರತೆ ಮರಿಯೊಂದು ಹುಣಸೂರು-ಗೋಣಿಗೊಪ್ಪ ಮುಖ್ಯರಸ್ತೆ ಮಧ್ಯೆ ಕಾಣಿಸಿಕೊಂಡಿದ್ದು, ಆ ವೀಡಿಯೋ ಈಗ ವೈರಲ್ ಆಗಿದೆ. ಹಾಡುಹಗಲೇ ಚಿರತೆ ಮರಿಯೊಂದು ಜನರಿಗೆ ದರ್ಶನ ಕೊಟ್ಟಿದೆ. ಅದರೆ ಜನರು ಹೆದರಿ ಓಡದೇ ಅಲ್ಲೇ ಚಿರತೆಯನ್ನು ನೋಡುತ್ತಾ ನಿಂತಿದ್ದಾರೆ. ಸುಮಾರು ಎರಡು ವರ್ಷ ಪ್ರಾಯದ್ದೆನ್ನಲಾದ ಈ ಚಿರತೆ ಏಕಾಏಕಿ ಮುಖ್ಯ ರಸ್ತೆಯಲ್ಲಿ ವಾಹನಗಳ ಮಧ್ಯೆಯೇ ಆರಾಮವಾಗಿ ತಿರುಗಾಡಿಕೊಂಡು ಕಾಡಿಗೆ ಹೋಗಿದೆ.

ಹುಣಸೂರು - ಗೋಣಿಗೊಪ್ಪ ಮುಖ್ಯರಸ್ತೆಯ ತಿತಿಮತಿ ಅರಣ್ಯ ಪ್ರದೇಶದ ಆನೆಚೌಕೂರು ಮುಂದೆ ಇರುವ ಮಾರಮ್ಮ ದೇವಸ್ಥಾನದ ಬಳಿ ಚಿರತೆ ಮರಿಯೊಂದು ತಾಯಿಯಿಂದ ಬೇರ್ಪಟ್ಟು ಮುಖ್ಯರಸ್ತೆಗೆ ಬಂದು ತಿರುಗಾಡುತ್ತಿತ್ತು. ಈ ದೃಶ್ಯವನ್ನು ಜನರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications