ನೀತಿ ಸಂಹಿತೆ ಉಲ್ಲಂಘನೆ:ನಿಖಿಲ್,ಸುಮಲತಾ ವಿರುದ್ಧ ಪ್ರತ್ಯೇಕ ಎಫ್ ಐಆರ್ ದಾಖಲು

ಮೈಸೂರು, ಏಪ್ರಿಲ್ 11:ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಮಂಡ್ಯ ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ಪ್ರತ್ಯೇಕ ಪ್ರಕರಣದಲ್ಲಿ ಎಫ್‍ಐಆರ್ ದಾಖಲಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ನಾಗಮಂಗಲ ತಾಲೂಕಿನ ಬೆಳ್ಳೂರು ಬಳಿ ತೆಂಗಿನ ತೋಟದಲ್ಲಿ ಕಾರ್ಯಕರ್ತರಿಗೆ ಊಟ ಹಂಚಿದ ಆರೋಪದ ಮೇಲೆ ಅಭ್ಯರ್ಥಿ ನಿಖಿಲ್ ಮತ್ತು ಬೆಂಬಲಿಗ ಕನಘಟ್ಟ ಶ್ರೀನಿವಾಸ್ ವಿರುದ್ಧ ಬೆಳ್ಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಗೆಯೇ ನಾಗಮಂಗಲ ವ್ಯಾಪ್ತಿಯಲ್ಲಿ ಅನುಮತಿ ಪಡೆದದ್ದಕ್ಕಿಂತ ಹೆಚ್ಚು ಸಮಯ ಪ್ರಚಾರ ನಡೆಸಿದ ಆರೋಪದಡಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಬೆಂಬಲಿಗ ರವಿಕಾಂತ ಎಂಬುವವರ ವಿರುದ್ಧ ನಾಗಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Violated code of conduct:FIR filed against Nikhil Kumarswamy and Sumalatha

ನಾಗಮಂಗಲ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 8:30ಕ್ಕೆ ನಡೆಯಬೇಕಿದ್ದ ಸುಮಲತಾ ಪ್ರಚಾರ, ತಡವಾಗಿ 11:30 ಕ್ಕೆ ಆರಂಭವಾಗಿತ್ತು. ಇದು ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ನಾಗಮಂಗಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನೀತಿ ಸಂಹಿತೆ ಉಲ್ಲಂಘನೆ ಹಿನ್ನಲೆಯಲ್ಲಿ ಈಗಾಗಲೇ ನಿಖಿಲ್ ವಿರುದ್ಧ 16 ಪ್ರಕರಣ ದಾಖಲಾಗಿದ್ದವು. ಇದೀಗ ಬುಧವಾರ ನಡೆದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವೂ ಸೇರಿ ಒಟ್ಟು 17 ಪ್ರಕರಣ ದಾಖಲಾದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+