ಮೈಸೂರು ವಿಮಾನ ನಿಲ್ದಾಣದ ಪ್ರಯಾಣಿಕರ ಗಮನಕ್ಕೆ

ಮೈಸೂರು, ಡಿಸೆಂಬರ್ 13: ಮೈಸೂರು ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸುವ ಪ್ರಯಾಣಿಕರಿಗೆ ಸಿಹಿಸುದ್ದಿ. ನಗರದಿಂದ ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸಲು ವೋಲ್ವೊ ಬಸ್‌ಗಳ ವ್ಯವಸ್ಥೆಗಳನ್ನು ಮಾಡಲಾಗಿದೆ.

ಮೈಸೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಸರಿಯಾದ ಸಂಚಾರ ವ್ಯವಸ್ಥೆ ಇಲ್ಲದ ಕಾರಣ ಪ್ರಯಾಣಿಕರು ಪರದಾಡುತ್ತಿದ್ದರು. ಟ್ಯಾಕ್ಸಿ ಚಾಲಕರು ಹೆಚ್ಚು ಹಣವನ್ನು ಸುಲಿಗೆ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿತ್ತು.

ಈ ಹಿನ್ನಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಪ್ರಯಾಣಿಕರ ಮನವಿಗೆ ಸ್ಪಂದಿಸಿ ವಿಮಾನ ನಿಲ್ದಾಣಕ್ಕೆ ನಗರ ಸಾರಿಗೆ ವೋಲ್ವೊ ಬಸ್‌ಗಳ ವ್ಯವಸ್ಥೆಯನ್ನು ಮಾಡಿದ್ದಾರೆ. ಪ್ರಯಾಣಿಕರು ಬಸ್‌ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

Volvo Bus Service To Airport From City

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮೈಸೂರು ನಗರ ಸಾರಿಗೆ ವಿಭಾಗ ಮೈಸೂರು ನಗರದಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಸ್‌ಗಳನ್ನು ಓಡಿಸಲಿದೆ.

ಬಸ್ ಮಾರ್ಗ; ನಗರ ಬಸ್ ನಿಲ್ದಾಣದಿಂದ ಹೊರಡುವ ವೋಲ್ವೊ ಬಸ್‌ಗಳು, ಗ್ರಾಮಾಂತರ ಬಸ್ ನಿಲ್ದಾಣ, ಜೆ. ಪಿ. ಪ್ಯಾಲೇಸ್ ಹೋಟೆಲ್, ಜಿಂಜರ್ ಹೋಟೆಲ್, Radisson ಬ್ಲೂ ಹೋಟೆಲ್, ಗಣಪತಿ ಸಚ್ಚಿದಾನಂದ ಆಶ್ರಮ ಮೂಲಕ ವಿಮಾನ ನಿಲ್ದಾಣ ತಲುಪಲಿದೆ.

ವೇಳಾಪಟ್ಟಿ; ನಗರ ಬಸ್ ನಿಲ್ದಾಣದಿಂದ 6.15, 9.05, 12,13.45,14.35, 15.15, 17.50ಕ್ಕೆ ವಿಮಾನ ನಿಲ್ದಾಣಕ್ಕೆ ಬಸ್ ಹೊರಡಲಿದೆ.

ವಿಮಾನ ನಿಲ್ದಾಣದಿಂದ ನಗರಕ್ಕೆ 6.50, 9.40, 12.35, 14.20, 15.10, 15.40, 18.25ಕ್ಕೆ ಬಸ್ ಹೊರಡಲಿದೆ.

Mysuru airport
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+