ನಂಜನಗೂಡು ಶ್ರೀಕಂಠೇಶ್ವರ ಜಾತ್ರೆಯಲ್ಲಿ ಮತದಾನದ ಜಾಗೃತಿ

ಮೈಸೂರು, ಮಾರ್ಚ್ 19 : ರಾಜ್ಯದ ನಾನಾ ಜಿಲ್ಲೆಗಳ ಭಕ್ತರು ಇಂದು ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಜಾತ್ರ ಮಹೋತ್ಸವಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಜಾತ್ರೆಯಲ್ಲಿಯೂ ಮತದಾನದ ಜಾಗೃತಿಯನ್ನು ಮೂಡಿಸಲಾಯಿತು.

ಮತದಾರರ ಜಾಗೃತಿ ಮತ್ತು ಪಾಲ್ಗೊಳ್ಳುವಿಕೆ ಸಮಿತಿ (ಸ್ವೀಪ್‌) ನಂಜನಗೂಡು ಜಾತ್ರೆಯಲ್ಲಿ ಮತದಾನದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದೆ.

ನಂಜನಗೂಡು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭೆ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ಎಲೆಕ್ಟ್ರಾನಿಕ್ ಮತಯಂತ್ರ, ವಿವಿಪ್ಯಾಟ್ ಕುರಿತು ಜನರಿಗೆ ಮಾಹಿತಿ ನೀಡಲಾಯಿತು.

Voters awareness campaign in Nanjangud car festival

'ಮತದಾನ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಪಾಲ್ಗೊಂಡು ತಮ್ಮ ಅತ್ಯಮೂಲ್ಯವಾದ ಮತದಾನ ಹಕ್ಕನ್ನು ಚಲಾಯಿಸಬೇಕು. ಸಮಾಜದ ಅಂಕು ಡೊಂಕುಗಳನ್ನು ತಿದ್ದಲು ಮತದಾನವು ಬ್ರಹ್ಮಾಸ್ತ್ರವಾಗಿದೆ' ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಂಠ ರಾಜೇ ಅರಸ್ ತಿಳಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೆ ಪ್ರಭುಗಳು, ಜನಪರ ಕಾಳಜಿ ಹಾಗೂ ದೇಶದ ಅಭಿವೃದ್ಧಿಯ ಮಾನದಂಡ ಇಟ್ಟುಕೊಂಡು ಉತ್ತಮ ಆಡಳಿತ ನಡೆಸುವ ಸರ್ಕಾರವನ್ನು ಆಯ್ಕೆ ಮಾಡುವ ಅವಕಾಶ ನಿಮ್ಮ ಕೈಯಲ್ಲಿದೆ ಚುನಾವಣೆಯ ದಿನ ಮತಗಟ್ಟೆಗೆ ಬಂದು ತಪ್ಪದೇ ಮತದಾನ ಮಾಡಿ ಎಂದು ಜನವರಲ್ಲಿ ಮನವಿ ಮಾಡಲಾಯಿತು.

ಜನರು ಹಣ, ಹೆಂಡ ಹಾಗೂ ಇನ್ನಿತರ ಆಮಿಷಗಳಿಗೆ ಒಳಗಾಗದೆ ಪ್ರಜಾಪ್ರಭುತ್ವದ ಬಲಪಡಿಸಿ, ದೇಶ ಪ್ರಜೆಗಳಿಗೋಸ್ಕರ ಪಾರದರ್ಶಕ ಆಡಳಿತ ನಡೆಸುವ ನಾಯಕರನ್ನು ಆಯ್ಕೆ ಮಾಡಲು ಮುಂದಾಗುವಂತೆ ಕರೆ ನೀಡಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+