Get Updates
Get notified of breaking news, exclusive insights, and must-see stories!

ಮೈಸೂರು ಜಿಲ್ಲೆಯಲ್ಲಿ 148 ಗ್ರಾ.ಪಂ.ಗಳಿಗೆ ಚುನಾವಣೆ!

ಬೆಂಗಳೂರು, ಡಿ. 22: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮೈಸೂರು ಜಿಲ್ಲೆಯ ಐದು ತಾಲೂಕುಗಳಲ್ಲಿ ಮತದಾನ ಆರಂಭವಾಗಿದೆ. ಮೊದಲನೇ ಹಂತದಲ್ಲಿ ಹುಣಸೂರು, ಕೆ.ಆರ್. ನಗರ, ಪಿರಿಯಾಪಟ್ಟಣ, ಎಚ್.ಡಿ. ಕೋಟೆ ಮತ್ತು ಸರಗೂರು ತಾಲ್ಲೂಕುಗಳ ಒಟ್ಟು 148 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿದೆ.

ಒಟ್ಟು 949 ಕ್ಷೇತ್ರಗಳಲ್ಲಿ, 2180 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, 125 ಸದಸ್ಯರು ಈಗಾಗಲೇ ಅವಿರೋಧ ಆಯ್ಕೆಯಾಗಿದ್ದಾರೆ. 6 ವಾರ್ಡ್‌ಗಳಿಗೆ ನಾಮಪತ್ರ ಸಲ್ಲಿಕೆ ಆಗಿಲ್ಲ. ಒಟ್ಟು 6,165 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಮತಗಟ್ಟೆ ಅಧಿಕಾರಿ, ಮತದಾನಾಧಿಕಾರಿ ಸೇರಿ ಒಟ್ಟು 5,052 ಸಿಬ್ಬಂದಿಯನ್ನು ಚುನಾವಣಾ ಆಯೋಗ ನೇಮಿಸಿದೆ.

ಮತಗಟ್ಟೆ ಸಿಬ್ಬಂದಿ ಕಳುಹಿಸಲು ಹಾಗೂ ಕರೆತರು 176 ಕೆಎಸ್ಆರ್‌ಟಿಸಿ ಬಸ್, 17. ಮಿನಿ ಬಸ್, 7 ಜೀಪ್ ಬಳಕೆ ಮಾಡಲಾಗುತ್ತಿದೆ. ನಿನ್ನೆ (ಡಿ.21) ಮಧ್ಯರಾತ್ರಿ 12 ರಿಂದ ಇಂದು (ಡಿ.22) ಮಧ್ಯರಾತ್ರಿ 12 ವರಗೆ ಒಣ ದಿನ ಘೋಷಣೆ ಮಾಡಲಾಗಿದೆ. ಹೀಗಾಗಿ ಚುನಾವಣೆ ನಡೆಯುವ ಗ್ರಾಮಗಳ ವ್ಯಾಪ್ತಿಯಲ್ಲಿ ಯಾವುದೇ ಜಾತ್ರೆ, ಸಂತೆ ಮುಂತಾದ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ.

Voting Has Begun In Five Taluks Of Mysore District In Wake Of The Gram Panchayat Elections

ಕೋವಿಡ್ ಹಿನ್ನೆಲೆಯಲ್ಲಿ ಚುನಾವಣೆ ಆಯೋಗ ಸೂಚನೆಯಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಮತಗಟ್ಟೆ ಅಧಿಕಾರಿಗಳು ಹಾಗೂ ಪೋಲಿಂಗ್ ಎಜೆಂಟರು, ಮತಗಟ್ಟೆ ಅಧಿಕಾರಿಗಳು, ಫೇಸ್ ಶೀಲ್ಡ್, ಮಾಸ್ಕ್ ಮತ್ತು ಹ್ಯಾಂಡ್ ಗ್ಲೌಸ್ ಧರಿಸುವುದು ಕಡ್ಡಾಯವಾಗಿದೆ. ಮತದಾರರು ಮತಚಲಾಯಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಿರಬೇಕು. ಪ್ರತಿ ಮತಗಟ್ಟೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನೇಮಕ ಮಾಡಲಾಗಿದೆ. ಮತಗಟ್ಟೆ ಸಿಬ್ಬಂದಿ, ಮತದಾರರಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಬಳಕೆ ಮಾಡಲಾಗುತ್ತಿದೆ. ಕೋವಿಡ್ ಲಕ್ಷಣ ಕಂಡು ಬಂದವರಿಗೆ ತಕ್ಷಣ ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ.

Voting Has Begun In Five Taluks Of Mysore District In Wake Of The Gram Panchayat Elections

ಕೊರೊನಾ ವೈರಸ್ ಸೋಂಕಿತರಿಗೆ ಮತದಾನದ ಕೊನೆಯ ಒಂದು ಗಂಟೆಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+