ಚುನಾವಣೆ ನೀತಿ ಸಂಹಿತೆ: ಮೈಸೂರಿನಲ್ಲಿ 7 ಲಕ್ಷ 48 ಸಾವಿರ ವಶಕ್ಕೆ

ಮೈಸೂರು, ಏಪ್ರಿಲ್ 7 : ವಿಧಾನಸಭಾ ಚುನಾವಣೆಗೆ ಮೈಸೂರು ಜಿಲ್ಲಾಡಳಿತ ಸಜ್ಜಾಗುತ್ತಿದೆ. ಈ ಹಿನ್ನೆಲೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು, ಮಾಧ್ಯಮಗಳ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತಿಳಿಸಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈವರೆಗೂ ಒಂದು ಕೆಜಿ ಚಿನ್ನ , 7 ಲಕ್ಷದ 48 ಸಾವಿರ ನಗದು ವಶ ಪಡಿಸಿಕೊಳ್ಳಲಾಗಿದೆ. ಮೈಸೂರು ಜಿಲ್ಲೆಯಲ್ಲಿ 55 ಕೇಸ್ ಗಳು ದಾಖಲಾಗಿದೆ. ಈ ಪೈಕಿ 44 ದೂರುಗಳನ್ನು ಇತ್ಯಾರ್ಥ ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಚುನಾವಣೆಯ ಬಗ್ಗೆ ಅರಿವು ಮೂಡಿಸಲು ನಾಳೆಯಿಂದ ಮಿಂಚಿನ ನೋಂದಣಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 18 ವರ್ಷ ತುಂಬಿರುವ ಎಲ್ಲರು ತಮ್ಮ ಹೆಸರನ್ನು ನೋಂದಾಯಿಸಬಹುದು. ಪ್ರತಿಯೊಂದು ಬೂತ್ ಮಟ್ಟದಲ್ಲೂ ತಮ್ಮ ಹೆಸರು ನೊಂದಣಿ ಮಾಡಿಕೊಳ್ಳಬಹುದು. ಅಧಿಕಾರಿಗಳಿಗೆ ಎಲೆಕ್ಟ್ರಾನಿಕಲ್ ಪೋಸ್ಟಿಂಗ್ ಬ್ಯಾಲೆಟ್ ವ್ಯವಸ್ತೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

We are following model code of conduct strictly: Mysuru DC

ಒಟ್ಟು 263 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದ್ದು, 2 ಸಾವಿರ ವಿವಿಧ ಪಕ್ಷಗಳ ಪೋಸ್ಟರ್ ಗಳು ಜಪ್ತಿ ಮಾಡಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಎರಡು ಬೋರ್ ವೆಲ್ ಲಾರಿಗಳು ವಶಕ್ಕೆ ಪಡೆಯಲಾಗಿದೆ. ಈ ಎಲ್ಲಾ ಪ್ರಕರಣಗಳಲ್ಲಿ ಒಟ್ಟು 37 ಜನರನ್ನು ವಶಕ್ಕೆಪಡೆದು ವಿಚಾರಣೆ ನಡೆಸಲಾಗಿದೆ ಎಂದು ವಿವರಿಸಿದರು.

ಚುನಾವಣಾ ಪ್ರಚಾರಕ್ಕೆ ವಾಹನಗಳನ್ನು ಬಳಕೆ ಮಾಡಲು ಮಾತ್ರ ನೀತಿಸಂಹಿತೆ ಅನ್ವಯವಾಗಲಿದ್ದು, ಯಾರಾದರೂ ಪ್ರಚಾರ ಕಾರ್ಯಕ್ಕೆ‌ ಪರವನಾಗಿ ಇಲ್ಲದೆ ಬಳಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗಳು, 7 ಅಬಕಾರಿ ಚೆಕ್ ಪೋಸ್ಟ್ 52 ಇತರೆ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಚುನಾವಣೆ ಹಿನ್ನಲೆಯಲ್ಲಿ ಎಲ್ಲಾ ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಜನವರಿ ಒಂದನೇ ತಾರಿಕಿಗೆ 18ವರ್ಷ ತುಂಬಿರುವ ಎಲ್ಲರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಬಹುದು. ಪ್ರತಿಯೊಂದು ಬೂತ್ ಮಟ್ಟದಲ್ಲೂ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅಧಿಕಾರಿಗಳಿಗೆ ಎಲೆಕ್ಟ್ರಾನಿಕಲ್ ಪೋಸ್ಟಿಂಗ್ ಬ್ಯಾಲೆಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೇಂದ್ರದ ಭದ್ರತಾ ಪಡೆ ನಾಳೆ ಜಿಲ್ಲೆಗೆ ಆಗಮಿಸುವ ಸಾಧ್ಯತೆಯಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+