ನೋಡಿ ನಾವು 130ರಿಂದ 150 ಸೀಟ್ ಬಂದೇ ಬತ್ತೀವಿ: ಸಿದ್ದರಾಮಯ್ಯ
ವರುಣ, ಮೇ 10: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ದಿನ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
#WATCH | "I've been constantly saying that Congress will get 130 plus seats, it may go up to 150 seats also," says Former Karnataka CM and Congress leader Siddaramaiah#KarnatakaAssemblyElection2023 pic.twitter.com/65LX8TODut
— ANI (@ANI) May 10, 2023
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ನೋಡಿ ನಾವು ನಿಮಗೆ ಪದೇ ಪದೇ ಹೇಳುತ್ತಿದ್ದೇವೆ, ನಾವು ಕರ್ನಾಟಕ ಜನರ ಭಾವನೆಯನ್ನು ಗಮನಿಸಿದಾಗ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ನಾವು 130ರಿಂದ 150 ಕ್ಷೇತ್ರಗಳಲ್ಲಿ ಜಯ ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಾನು ಕ್ಷೇತ್ರದಲ್ಲಿ 60% ಕ್ಕಿಂತ ಹೆಚ್ಚು ಮತಗಳನ್ನು ಪಡೆಯುತ್ತೇನೆ. ಕಾಂಗ್ರೆಸ್ ಸ್ವಂತ ಬಲದಿಂದ ಸರ್ಕಾರ ರಚಿಸಲಿದೆ. ನಾನು ಮುಂದೆ ರಾಜಕೀಯ ನಿವೃತ್ತಿಯಾಗುವುದಿಲ್ಲ ಆದರೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇದು ನನ್ನ ಕೊನೆಯ ಚುನಾವಣೆ ಎಂದು ಕರ್ನಾಟಕದ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮತ ಚಲಾಯಿಸಿದ ನಂತರ ಹೇಳಿದರು.
ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಅವರು ಕುಟುಂಬದೊಂದಿಗೆ ಮತದಾನ ಮಾಡಿದರು. ಕಳೆದ ಬಾರಿ ಅವರ ಪುತ್ರ ಯತೀಂದ್ರ ಶಾಸಕರಾಗಿ ಆಯ್ಕೆಯಾಗಿದ್ದರು. ಮಂಗಳವಾರಷ್ಟೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಒಟ್ಟಾಗಿ ಪೂಜೆ ಸಲ್ಲಿಸಿದ್ದರು.












Click it and Unblock the Notifications