ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ವಿದ್ಯಾರ್ಥಿಗಳಿಗೆ ಸಲಹೆಗಳೇನು?
ಮೈಸೂರು, ಏಪ್ರಿಲ್ 18: ಇದೀಗ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ವಿದ್ಯಾರ್ಥಿಗಳು ಕಠಿಣ ತಯಾರಿ ಮಾಡುವುದು ಎಲ್ಲೆಡೆ ಕಂಡು ಬರುತ್ತಿದೆ ಈ ಸಂಬಂಧ ವಿವಿಧೆಡೆ ತರಬೇತಿ ನೀಡಲೆಂದೇ ಸಂಸ್ಥೆಗಳು ಹುಟ್ಟಿಕೊಂಡಿವೆ. ಹೀಗಿರುವಾಗ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ತರಬೇತಿಯ ಜೊತೆಗೆ ಈಗಾಗಲೇ ಪರೀಕ್ಷೆ ಬರೆದು ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಬಹುಮುಖ್ಯವಾಗುತ್ತದೆ. ಮತ್ತು ಅದು ಪರೀಕ್ಷೆ ಸಮಯದಲ್ಲಿ ಉಪಯೋಗಕ್ಕೆ ಬರುತ್ತದೆ.
ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರು ಮಾಡುವಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಬಹುದೊಡ್ಡ ಕೊಡುಗೆ ಇದೆ. ಈ ಕೇಂದ್ರವು ಬರೀ ತರಬೇತಿ ನೀಡುವುದಲ್ಲದೇ ಐಎಎಸ್ ಮತ್ತು ಐಪಿಎಸ್, ಕೆಎಎಸ್ ಹೀಗೆ ವಿವಿಧ ಪರೀಕ್ಷೆಗಳನ್ನು ಬರೆದು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಆಹ್ವಾನಿಸಿ ಅವರ ಅನುಭವವ ಮತ್ತು ಸಲಹೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವುದು ನಡೆಯುತ್ತಾ ಬರುತ್ತಿದೆ.

ಈ ಸಂಬಂಧ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ 50 ದಿನಗಳ ಐಎಎಸ್, ಕೆಎಎಸ್ ಪರೀಕ್ಷಾ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದ ದಕ್ಷಿಣ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕ ಡಾ.ಎಂ.ಬಿ.ಬೋರಲಿಂಗಯ್ಯ ಅವರು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. ಅವರ ಪ್ರಕಾರ ಉದ್ಯೋಗದ ಮಾರುಕಟ್ಟೆಯಲ್ಲಿ ಈಗ ಸ್ಪರ್ಧೆ ಹೆಚ್ಚಿದೆಯಂತೆ. ಯಾವುದೇ ಕೆಲಸದ ನೋಟಿಫಿಕೇಷನ್ ಪ್ರಕಟವಾದರೂ ಅಲ್ಲಿ ಇರುವುದು ಕೆಲವೇ ಹುದ್ದೆಗಳಾಗಿರುತ್ತವೆ, ಆದರೆ ಸಾವಿರ, ಲಕ್ಷ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿರುತ್ತಾರೆ. ಸರ್ಕಾರಿ ನೌಕರಿಗಿರುವ ಸೆಳೆತ ಅಂತದ್ದು. ಕಠಿಣ ಪರಿಶ್ರಮವಿದ್ದರೆ ಇಂತಹ ಉದ್ಯೋಗಗಳನ್ನು ನೀವು ಪಡೆಯಬಹುದು ಎಂದು ಪೊಲೀಸ್ ಉಪ ಮಹಾ ನಿರೀಕ್ಷಕ ಡಾ.ಎಂ.ಬಿ.ಬೋರಲಿಂಗಯ್ಯ ಹೇಳಿದ್ದಾರೆ.
ನಿದ್ದೆಗೆಟ್ಟು ಓದುವುದು ಬೇಡ..ಸಮಯ ಪಾಲನೆ ಮಾಡಿ
ನಾನು ಕೂಡ ಹಳ್ಳಿಯಲ್ಲಿಯೇ ಹುಟ್ಟಿ ಬೆಳೆದು ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಓದಿ ಯುಪಿಎಸ್‌ಸಿ ಪರೀಕ್ಷೆ ತಯಾರಿಗೆ ದೆಹಲಿಗೆ ಹೋಗಿದ್ದೆ. ಇಲ್ಲಿ ಬಹುತೇಕರು ಗ್ರಾಮೀಣ ಭಾಗದವರೇ ಇದ್ದೀರಿ. ಶ್ರಮ ಪಟ್ಟು ಓದಿ. ಪ್ರಸ್ತುತ ಪರೀಕ್ಷೆ ತಯಾರಿಗೆ ದೆಹಲಿಗೆ ಹೋಗ ಬೇಕೆಂದಿಲ್ಲ. ಮೈಸೂರಿನ ಕೆಎಸ್ ಒಯು ನಡೆಸುತ್ತಿರುವ ತರಬೇತಿ ಅತ್ಯುತ್ತಮ ತರಬೇತಿ ಕೇಂದ್ರವಾಗಿದೆ.
ಕಠಿಣ ಅಭ್ಯಾಸ ಮತ್ತು ಪರಿಶ್ರಮದ ಜೊತೆಗೆ ಓದಿನಲ್ಲಿ ತಯಾರಿ ಇರಲಿ. ನಿದ್ರೆಯೂ ಮುಖ್ಯ. ನಿದ್ದೆಗೆಟ್ಟು ಓದುವುದು ಬೇಡ. ಎಲ್ಲದಕ್ಕೂ ಸಮಯ ಪಾಲನೆ ಇದ್ದರೆ ಒಳಿತು. ತಯಾರಿ ಸಮಯದಲ್ಲಿ ವಿದ್ಯಾರ್ಥಿಗಳು ಗುಂಪು ರಚಿಸಿಕೊಂಡು ಆಯ್ಕೆವಾರು ವಿಷಯಗಳನ್ನು ಚರ್ಚಿಸಿ. ಸಾಧ್ಯವಾದಷ್ಟು ಸಾಮಾಜಿಕ ಜಾಲತಾಣದ ಗೀಳಿನಿಂದ ದೂರವಿದ್ದು, ದೈನಂದಿನ ದೈಹಿಕ ಚಟುವಟಿಕೆ ಕಡೆಗೆ ಗಮನ ಹರಿಸುವಂತೆ ತಿಳಿ ಹೇಳಿದರು.

ಪರೀಕ್ಷೆ ಎದುರಿಸಲು ಬೇಕಾಗಿರುವುದು ಏನು?
ಸ್ಪರ್ಧಾತ್ಮಕ ಪರೀಕ್ಷಾ ಸಿದ್ಧತೆ ಕುರಿತು ಮಾತನಾಡಿದ ಮಹಾನಗರ ಪಾಲಿಕೆಯ ಉಪ ಆಯುಕ್ತ ಜಿ.ಎಸ್.ಸೋಮಶೇಖರ್, ಪರೀಕ್ಷೆ ಎದುರಿಸುವುದಕ್ಕೆ ದೃಢ ಮನಸ್ಸು ಇರಬೇಕು. ಆತ್ಮವಿಶ್ವಾಸ, ಸಮಯ ಪಾಲನೆ, ನೆನಪಿನ ಶಕ್ತಿ, ಪರೀಕ್ಷೆ ಬರೆಯುವ ತಂತ್ರ ಕಲಿತರೆ ಗೆಲುವು ನಿಮ್ಮದೆ ಆಗಿರುತ್ತದೆ. ನಾವು ಸಾವಿರ ಜನರಿಗಿಂತ ಮುಂದೆ ಇದ್ದೇವೆ ಎನ್ನುವ ಭರವಸೆ ಇರಲಿ. ಪರೀಕ್ಷೆ ಬರೆದ ಮೊದಲ ಬಾರಿಯಲ್ಲಿ ಆಯ್ಕೆಯಾಗಬೇಕು ಎನ್ನುವ ಛಲ ಇರಲಿ. ಆದರೆ, ಆಗದೆ ಇದ್ದಾಗ ಛಲ ಬಿಡದೆ ಮತ್ತೆ ಮತ್ತೆ ಪ್ರಯತ್ನಿಸಿ, ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸಿದರೆ ಇನ್ನಿತರ ಬೇರೆ ಸ್ಪರ್ಧಾತ್ಮಕ ಪರೀಕ್ಷೆಗೂ ಕೂಡ ಅನುಕೂಲವಾಗಲಿದೆ. ದಿನದ 24 ಗಂಟೆಯನ್ನು ವಿಂಗಡಿಸಿಕೊಂಡು ಸಮಯ ಪರಿಪಾಲಿಸಿ, ಪರೀಕ್ಷೆ ಬಗ್ಗೆ ತಿಳಿವಳಿಕೆ ಇರಬೇಕು. ಪಠ್ಯಕ್ರಮ, ಪರೀಕ್ಷೆ ಮಾದರಿ, ಹಿಂದಿನ ವರ್ಷದ ಪ್ರಶ್ನೆ ಪ್ರತ್ರಿಕೆಗಳ ಅಧ್ಯಯನದ ಜೊತೆಗೆ ಪ್ರತಿ ನಿತ್ಯ ದಿನಪತ್ರಿಕೆ, ನಿಮ್ಮಿಷ್ಟದ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಿ ಎಂದು ಸಲಹೆ ನೀಡಿದರು
ನಿರಂತರ ಪ್ರಯತ್ನದಿಂದ ಎಲ್ಲವೂ ಸಾಧ್ಯ
ಇನ್ನು ಈ ವೇಳೆ ಮುಕ್ತ ವಿವಿ ಕುಲಪತಿ ಪ್ರೊ ಶರಣಪ್ಪ ವಿ ಹಲಸೆ ಮಾತನಾಡಿ, ವಿದ್ಯಾರ್ಥಿಗಳು ಸತತ ಪ್ರಯತ್ನ ಪಟ್ಟು ಓದಬೇಕು. ನಿಮ್ಮ ನಿರಂತರ ಪ್ರಯತ್ನದಿಂದ ಎಲ್ಲವೂ ಸಾಧ್ಯ. ಶಿಕ್ಷಣ ಉದ್ಯೋಗದ ಜೊತೆಗೆ ಶಿಸ್ತನ್ನು ಕಲಿಸುತ್ತದೆ. ಬಾಬಾ ಸಾಹೇಬ್ ಅಂಬೇಡ್ಕರ್ ಕಷ್ಟಪಟ್ಟು ಓದಿ ವಿಶ್ವ ಜ್ಞಾನಿ ಆಗಿದ್ದಾರೆ. ಜಗತ್ತು ಇಂದು ಅವರ ಜ್ಞಾನಕ್ಕೆ ಹೆದರುತ್ತಿದೆ. ನಿರಂತರ ಪರಿಶ್ರಮದಿಂದ ಮಾತ್ರ ಇದೆಲ್ಲಾ ಕೂಡ ಸಾಧ್ಯ. ಹೀಗಾಗಿ ನಿಮ್ಮ ಓದು ನಿರಂತರವಾಗಿರಲಿ ಎಂದು ಹೇಳಿದರು.
ಕುಲ ಸಚಿವ ಪ್ರೊ.ಕೆ.ಬಿ.ಪ್ರವೀಣ ಮಾತನಾಡಿ, ವಿದ್ಯಾರ್ಥಿಗಳು ಹಾರ್ಡ್ ವರ್ಕ್ ಜೊತೆಗೆ ಸ್ಮಾರ್ಟ್ ವರ್ಕ್ ಮಾಡಬೇಕು. ಆಸೆ ಪಟ್ಟು ಓದಿ. ವಿಶ್ವ ವಿದ್ಯಾಲಯದ ಆವರಣದಲ್ಲಿ ಎಲ್ಲಾ ರೀತಿಯ ಸೌಕರ್ಯಗಳಿವೆ. ಇವುಗಳನ್ನು ಉಪಯೋಗಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರೆ, ಪರೀಕ್ಷಾಂಗ ಕುಲ ಸಚಿವ ಪ್ರೊ ಹೆಚ್ ವಿಶ್ವನಾಥ್, ಹಣಕಾಸು ಅಧಿಕಾರಿ ಪ್ರೊ ನಿರಂಜನ್ ರಾಜ್, ಅಧ್ಯಯನ ಕೇಂದ್ರದ ಡೀನ್ ಪ್ರೊ ರಾಮನಾಥಂ ನಾಯ್ಡು, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣ ಗೌಡ, ಸಿದ್ದೇಶ್ ಹೊನ್ನೂರ್, ಗಣೇಶ್ ಕೆ.ಜಿ ಕೊಪ್ಪಲ್ ಮೊದಲಾದವರು ಪರೀಕ್ಷೆ ತಯಾರಿ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಹತ್ತು ಹಲವು ರೀತಿಯ ಸಲಹೆಗಳನ್ನು ನೀಡಿದ್ದಾರೆ.
ದಿನ ಕಳೆದಂತೆ ಆಸಕ್ತಿ ಕಳೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು
ಇತ್ತೀಚಿಗೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚಿನ ಅಂಕ ಬಂದ ವಿದ್ಯಾರ್ಥಿಗಳು ಮೊದಮೊದಲು ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಸುವ ಬಗ್ಗೆ ಉತ್ಸುಕರಾಗಿರುತ್ತಾರೆ. ಆದರೆ ದಿನ ಕಳೆದಂತೆ ಆಸಕ್ತಿ ಕಳೆದುಕೊಂಡು ಯಾವುದೋ ಒಂದು ಬೇಗ ಕೆಲಸ ಸಿಗುವ ಕೋರ್ಸ್ ಮಾಡಿದರೆ ಸಾಕು ಎನ್ನುವ ನಿರ್ಧಾರಕ್ಕೆ ಬರುತ್ತಾರೆ. ಇದಕ್ಕೆ ವಿದ್ಯಾರ್ಥಿಗಳ ಇಚ್ಛಾಶಕ್ತಿಯ ಜೊತೆಗೆ ಸರಿಯಾದ ಮಾರ್ಗದರ್ಶನದ ಕೊರೆತೆ ಕೂಡ ಇರುತ್ತದೆ. ಹೀಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಂತಹ ಸಂಸ್ಥೆಗಳಿಂದ ಆಯೋಜಿಸುವ ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸಕರಾತ್ಮಕ ಯೋಚನೆ ಬರುವಂತೆ ಮಾಡುವುದರಲ್ಲಿ ಎರಡು ಮಾತಿಲ್ಲ.
-
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
SSLC Hindi Exam: ಮಾರ್ಚ್ 30ರ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
CBSE 12ನೇ ತರಗತಿಯ ಜೀವಶಾಸ್ತ್ರ ಪ್ರಶ್ನೆಪತ್ರಿಕೆ ವಿಶ್ಲೇಷಣೆ: ತಜ್ಞರು ಮತ್ತು ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ಮಾಹಿತಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್










Click it and Unblock the Notifications