ಕೆ.ಆರ್.ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ಗಾಗಿ ಭಾರಿ ಪೈಪೋಟಿ: ರಾಮದಾಸ್‌ಗೆ ಸ್ವಪಕ್ಷದವರೇ ಸ್ಪರ್ಧಿಗಳು
ಮೈಸೂರು, ಡಿಸೆಂಬರ್ 9: ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷದಲ್ಲಿ ಪ್ರಭಾವಿ ಶಾಸಕರಾಗಿ ಗುರುತಿಸಿಕೊಂಡಿರುವ ಕೆ.ಆರ್.ಕ್ಷೇತ್ರದ ಎಸ್.ಎ.ರಾಮದಾಸ್ ಅವರಿಗೆ ವಿರೋಧ ಪಕ್ಷದಲ್ಲಿ ಪೈಪೋಟಿ ಇದ್ದರೂ ಅದಕ್ಕಿಂತ ಹೆಚ್ಚಾಗಿ ಸ್ವಪಕ್ಷದಲ್ಲಿಯೇ ಹೆಚ್ಚಿನವರು ಟಿಕೆಟ್‌ಗಾಗಿ ಪೈಪೋಟಿ ನಡೆಸುತ್ತಿರುವುದರಿಂದ ಅವರೆಲ್ಲರನ್ನು ಹಿಂದಿಕ್ಕಿ ಟಿಕೆಟ್ ಪಡೆಯುವುದೇ ಸವಾಲಾಗಿದೆ.
ಈಗಾಗಲೇ ಕೆ.ಆರ್.ಕ್ಷೇತ್ರದಲ್ಲಿ ಮೇಲಿಂದ ಗೆಲುವು ಪಡೆಯುತ್ತಾ ಹಲವು ರೀತಿಯಲ್ಲಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಬಂದಿರುವ ರಾಮದಾಸ್ ಅವರ ಕಾರ್ಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ ಶ್ಲಾಘಿಸಿದ್ದಾರೆ. ಆದರೆ ಪಕ್ಷದೊಳಗೆ ಪೈಪೋಟಿ ಇರುವ ಕಾರಣ ಮುಂದಿನ ವಿಧಾನಸಭಾ ಚುನಾವಣೆಗೆ ಟಿಕೆಟ್ ಪಡೆಯುವುದು ಅಷ್ಟು ಸುಲಭವಾಗಿ ಉಳಿದಿಲ್ಲ. 1994, 1999, 2008 ಹಾಗೂ 2018 ರಲ್ಲಿ ಗೆಲುವು ಸಾಧಿಸಿದ ರಾಮದಾಸ್ ಅವರು ಮತ್ತೊಮ್ಮೆ ಟಿಕೆಟ್ ಬಯಸುವುದು ಖಚಿತವೇ ಆದರೆ ಈಗಾಗಲೇ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿದೆ.
ರಾಮದಾಸ್ ಶಾಸಕರಾಗಿ, ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಅದಕ್ಕಿಂತ ಹೆಚ್ಚಾಗಿ ಜನರ ಒಡನಾಟದಲ್ಲಿರುವ ಅವರು ಆಸರೆ ಎಂಬ ಸ್ವಯಂ ಸೇವಾ ಸಂಸ್ಥೆ ಮೂಲಕ ಜನರನ್ನು ಮನೆಮನೆಗೆ ತಲುಪಿದ್ದಾರೆ. ವೈಯಕ್ತಿಕವಾಗಿ ಮಾಡಿಕೊಂಡ ಕೆಲವು ಎಡವಟ್ಟುಗಳು ಅವರಿಗೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದರೂ ಕ್ಷೇತ್ರದಲ್ಲಿ ಅದು ಅವರಿಗೆ ಹಿನ್ನಡೆಯಾದಂತೆ ಕಾಣುತ್ತಿಲ್ಲ. ಬಿಜೆಪಿಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಅವರು ಪಕ್ಷ ನಿಷ್ಠರಾಗಿಯೇ ಇದ್ದಾರೆ ಎನ್ನುವುದರಲ್ಲಿ ಎರಡು ಮಾತಿಲ್ಲ.

ಬಿಎಸ್‌ವೈ ಬಿಜೆಪಿ ತೊರೆದಾಗಲೂ ಪಕ್ಷದಲ್ಲೇ ಇದ್ದ ರಾಮದಾಸ್
ಈ ಹಿಂದೆ 2013ರ ಚುನಾವಣೆಯಲ್ಲಿ ಬಿಜೆಪಿ ಹಿನ್ನೆಡೆಯಲ್ಲಿದ್ದರೂ, ಪಕ್ಷದಲ್ಲಿಯೇ ಉಳಿದು ಸೋಲು ಕಂಡರು. ಅದಕ್ಕೂ ಮೊದಲು ಅವರು ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ 2009ರಿಂದ 2011ರವರೆಗೆ ರಾಜಕೀಯ ಕಾರ್ಯದರ್ಶಿ ಆಗಿದ್ದರು. 2011ರಿಂದ 2013ರವರೆಗೆ ವೈದ್ಯಕೀಯ ಶಿಕ್ಷಣ ಸಚಿವ, ಜಿಲ್ಲಾ ಉಸ್ತುವಾರಿಯೂ ಆಗಿದ್ದರು. ಆದರೆ ಯಡಿಯೂರಪ್ಪ ಪಕ್ಷ ಬಿಟ್ಟು ಹೊಸಪಕ್ಷ ಕಟ್ಟಿದಾಗ ಅವರ ಜೊತೆಗೆ ಹೋಗದೆ ಪಕ್ಷದಲ್ಲಿಯೇ ಉಳಿದು ಬಿಟ್ಟರು. ಪರಿಣಾಮ ಸೋಲು ಕಂಡರು.

ಕೆ.ಆರ್.ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಭಾರಿ ಪೈಪೋಟಿ
ಇನ್ನು 1994, 1999, 2008 ಹಾಗೂ 2018ರಲ್ಲಿ ವಿಧಾನಸಭೆಗೆ ಆಯ್ಕೆಯಾಗುವ ಮೂಲಕ ಗಮನಸೆಳೆದಿದ್ದಾರೆ. ರಾಮದಾಸ್ ನಾಲ್ಕು ಗೆಲುವು, 2004, 2013ರ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. 2023ರ ಚುನಾವಣೆ ಅವರಿಗೆ ಅಗ್ನಿಪರೀಕ್ಷೆಯಾಗಿದೆ. ಒಂದು ವೇಳೆ ಟಿಕೆಟ್ ಸಿಕ್ಕಿ ಗೆದ್ದರೆ ಅದು ಅವರ ಪಾಲಿಗೆ ದಾಖಲೆಯಾಗಲಿದೆ. ಆದರೆ ಈ ಬಾರಿ ಬಿಜೆಪಿಯಲ್ಲಿ ಕೆ.ಆರ್.ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಭಾರಿ ಪೈಪೋಟಿ ಏರ್ಪಡುವ ಸಾಧ್ಯತೆ ಹೆಚ್ಚಾಗಿದೆ. ಇದುವರೆಗೆ ಪಕ್ಷಕ್ಕಾಗಿ ದುಡಿದ ನಾಯಕರು ನಮಗೂ ಟಿಕೆಟ್ ಬೇಕು ಎಂಬ ಆಕಾಂಕ್ಷೆಯನ್ನು ಮುಂದಿಡುತ್ತಿದ್ದಾರೆ. ಅದಕ್ಕಾಗಿ ಹಲವರು ಹಲವು ರೀತಿಯ ಲಾಭಿಗಳನ್ನು ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ.

ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಯಾರ್ಯಾರು..?
ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ, ನಗರಪಾಲಿಕೆ ಮಾಜಿ ಸದಸ್ಯ ಪಾರ್ಥಸಾರಥಿ, ಮೈಲ್ಯಾಕ್ ಮಾಜಿ ಅಧ್ಯಕ್ಷ ಫಣೀಶ್, ಪಾಲಿಕೆ ಸದಸ್ಯ ಮಾವಿ ರಾಂಪ್ರಸಾದ್ ಹೀಗೆ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಾ ಹೋಗುತ್ತಿದೆ. ಆದರೆ ಮೇಲ್ನೋಟಕ್ಕೆ ಗೆಲ್ಲುವ ಕುದುರೆಯಾಗಿ ರಾಮದಾಸ್ ಕಂಡು ಬರುತ್ತಿದ್ದಾರೆ. ಪಕ್ಷ ಟಿಕೆಟ್ ನೀಡುವ ವೇಳೆ ಯಾವ ನಿರ್ಧಾರ ಮಾಡುತ್ತದೆ ಎನ್ನುವುದು ಕುತೂಹಲಕಾರಿಯಾಗಿದೆ.

ಕಾಂಗ್ರೆಸ್‌ಗೆ ಲಾಭವಾಗಲಿದೆ ಬಿಜೆಪಿ ಗೊಂದಲ
ಕೆ.ಆರ್.ಕ್ಷೇತ್ರದಲ್ಲಿ ಹಿಂದಿನಿಂದಲೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿಯಿದ್ದು, ಕಾಂಗ್ರೆಸ್‌ನಿಂದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ರಾಮದಾಸ್ ಅವರಿಗೆ ಪ್ರಬಲ ಸ್ಪರ್ಧಿಯಾಗಿದ್ದಾರೆ. ಒಂದು ವೇಳೆ ಬಿಜೆಪಿಯಲ್ಲಿ ಸ್ವಲ್ಪ ಗೊಂದಲವಾದರೂ ಅದರ ಲಾಭ ಕಾಂಗ್ರೆಸ್‌ಗೆ ಆಗಲಿದೆ. ಹೀಗಾಗಿ ಬಿಜೆಪಿಯಲ್ಲಿರುವ ಟಿಕೆಟ್ ಆಕಾಂಕ್ಷಿಗಳ ನಡುವೆ ಸಮರ್ಥರನ್ನು ಆಯ್ಕೆ ಮಾಡುವುದು ಬಿಜೆಪಿ ನಾಯಕರಿಗೆ ಸವಾಲಿನ ಕೆಲಸವಾಗಿದೆ. ಸದ್ಯಕ್ಕೆ ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವುದು ಎಲ್ಲರನ್ನು ಕಾಡುತ್ತಿರುವ ಕುತೂಹಲವಾಗಿದೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications