ಮೈಸೂರು ಮಹಾನಗರ ಪಾಲಿಕೆಗೆ ಮುಂದಿನ ಸಾರಥಿ ಯಾರು?
ಮೈಸೂರು, ಆಗಸ್ಟ್ 27: ಮೈಸೂರು ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಸೆಪ್ಟೆಂಬರ್ 6 ರಂದು ಚುನಾವಣೆ ನಡೆಯುತ್ತಿರುವುದರಿಂದ ನಗರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.
ಪ್ರಮುಖ ಮೂರು ಪಕ್ಷಗಳ ನಾಯಕರು ಮೈಸೂರಿನಲ್ಲಿ ಮೊಕ್ಕಾಂ ಹೂಡಿ ರಾಜಕೀಯ ತಂತ್ರಗಾರಿಕೆ ಆರಂಭಿಸಿದ್ದಾರೆ. ಗುರುವಾರ ರಾತ್ರಿಯೇ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಮೈಸೂರಿಗೆ ಆಗಮಿಸಿ ಹಲವು ಮುಖಂಡರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಮೇಯರ್ ಸ್ಥಾನದ ಆಕಾಂಕ್ಷಿಗಳು ತಮ್ಮ ತಮ್ಮ ಪಕ್ಷದ ಮುಖಂಡರನ್ನು ಭೇಟಿ ಮಾಡಿ ತಮಗೆ ಅವಕಾಶ ನೀಡುವಂತೆ ಮನವಿ ಮಾಡುತ್ತಿದ್ದಾರೆ.
ಮೈಸೂರು ನಗರ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್
ಶನಿವಾರ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಮೈಸೂರಿಗೆ ಆಗಮಿಸಿ ಚುನಾವಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಪಕ್ಷ ಇವರಿಗೆ ಮೈಸೂರು ಮೇಯರ್, ಉಪ ಮೇಯರ್ ಚುನಾವಣೆ ಜವಾಬ್ದಾರಿ ನೀಡಲಾಗಿದೆ. ಈ ಸಭೆಯಲ್ಲಿ ಸಂಸದ, ಶಾಸಕರು ಹಾಗೂ ಈ ಭಾಗದ ಪ್ರಮುಖ ಮುಖಂಡರನ್ನು ಒಳಗೊಂಡ ಕೋರ್ ಕಮಿಟಿ ಸಭೆಯಲ್ಲಿ ಹಲವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಚುನಾವಣೆ ಬಗ್ಗೆ ಸ್ಥಳೀಯರಿಂದ ಅಭಿಪ್ರಾಯ ಸಂಗ್ರಹಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ
ಮೈತ್ರಿ ಸಂಬಂಧ ಶಾಸಕ ಸಾರಾ ಮಹೇಶ್ ಮಾತನಾಡಿ, " ಸೆಪ್ಟೆಂಬರ್ 6ರಂದು ಮೇಯರ್ ಚುನಾವಣೆ ಜೊತೆಗೆ ನಾಲ್ಕು ಸ್ಥಾಯಿ ಸಮಿತಿಗಳಿಗೂ ಎಲೆಕ್ಷನ್ ನಡೆಯಲಿದ್ದು, ನಮ್ಮ ನಾಯಕರು ಹಾಗೂ ಜಿಲ್ಲೆಯ ಪ್ರಮುಖರೆಲ್ಲಾ ಸೇರಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಈ ಬಾರಿ ಮೇಯರ್ ಹುದ್ದೆ ಜೆಡಿಎಸ್‌ಗೆ ಸಿಗಲಿದೆ. ಈವರೆಗೆ ಸ್ಥಳೀಯ ಮಾಜಿ ಸಿಎಂ ಸಿದ್ದರಾಮಯ್ಯ ನಡೆ ಬೇಸರ ತರಿಸಿದೆ. ಕಾಂಗ್ರೆಸ್ ಪಕ್ಷದವರ ಧೋರಣೆಯಿಂದ ಬೇಸತ್ತಿದ್ದೇವೆ. ಕಾಂಗ್ರೆಸ್ ಜೊತೆ ನಮಗೆ ಮೈತ್ರಿ ಬೇಡ ಅನ್ನಿಸಿದೆ. ಆದರೆ ಬಿಜೆಪಿ ಜೊತೆ ಸಖ್ಯ ಬೆಳೆಸುವ ಕುರಿತು ಈವರೆಗೆ ತೀರ್ಮಾನಿಸಿಲ್ಲ" ಎಂದರು.
ಪಕ್ಷ ಕಷ್ಟದಲ್ಲಿರುವಾಗ ದೂರುವುದು ಆಜಾದ್ ಅನುಭವಕ್ಕೆ ತಕ್ಕ ನಡೆ ಅಲ್ಲ: ಸಿದ್ದರಾಮಯ್ಯ
" ಶುಕ್ರವಾರ ಎಚ್.ಡಿ.ಕುಮಾರಸ್ವಾಮಿ ಮೈಸೂರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಜೆಡಿಎಸ್‌ನ ಮೇಯರ್, ಉಪ ಮೇಯರ್ ಆಕಾಂಕ್ಷಿಗಳು ಕುಮಾರಸ್ವಾಮಿ ಅವರನ್ನು ಭೇಟಿ ತಮ್ಮ ಇಚ್ಛೆಯನ್ನು ಹೇಳಿಕೊಂಡಿದ್ದಾರೆ. ಇದಲ್ಲದೇ ಈ ಬಗ್ಗೆ ಚರ್ಚಿಸಲು ಜೆಡಿಎಸ್ ಮುಖಂಡರ ಸಭೆಯನ್ನೂ ಕರೆಯಲಾಗಿದೆ" ಎಂದಿದ್ದಾರೆ.
ಕಾಂಗ್ರೆಸ್ ರಣತಂತ್ರ ಏನು?
ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಇಲ್ಲ. ಹಾಗಾಗಿ ಯಾವುದೇ ಪಕ್ಷ ಅಧಿಕಾರ ಹಿಡಿಯಬೇಕಾದರೂ ಮತ್ತೊಂದು ಪಕ್ಷವನ್ನು ಆಶ್ರಯಿಸಬೇಕು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದೆ. ಕಾಂಗ್ರೆಸ್‌ನ ಪುಷ್ಪ ಜಗನ್ನಾಥ್ ಒಂದು ಅವಧಿಗೆ ಮೇಯರ್ ಸ್ಥಾನ ಅಲಂಕರಿಸಿದ್ದರು. ಅದು ಬಿಟ್ಟರೆ ಎರಡು ಬಾರಿ ಜೆಡಿಎಸ್ ಹಾಗೂ ಒಂದು ಬಾರಿ ಬಿಜೆಪಿ ಮೇಯರ್ ಸ್ಥಾನ ಅನುಭವಿಸಿದೆ. ಹಾಗಾಗಿ ಈ ಬಾರಿ ಕಾಂಗ್ರೆಸ್ ರಣತಂತ್ರ ಏನು ಎಂಬುದು ಕುತೂಹಲ ಮೂಡಿಸಿದೆ.