ಮೈಸೂರಿನ ಚಾಮರಾಜದ ‘ಕೈ’ ಟಿಕೆಟ್‍ ಯಾರಿಗೆ..? ಇಲ್ಲಿದೆ ಮಾಹಿತಿ

ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ರಾಜಕೀಯ ಗರಿಗೆದರಿದೆ ಅದರಲ್ಲೂ ಕಾಂಗ್ರೆಸ್ ನಿಂದ ಅಭ್ಯರ್ಥಿ ಯಾರು ಎನ್ನುವುದೇ ಭಾರೀ ಕುತೂಹಲ ಕೆರಳಿಸಿದೆ. ಚಾಮರಾಜದ ಕಾಂಗ್ರೆಸ್‌ ಟಿಕೆಟ್‍ ಯಾರಿಗೆ ಸಿಗುತ್ತದೆ ಎನ್ನುವ ಕುತೂಹಲ ಎಲ್ಲರಲ್ಲಿದೆ.

ಮೈಸೂರು, ಫೆಬ್ರವರಿ 6: ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ರಾಜಕೀಯ ಗರಿಗೆದರಿದೆ ಅದರಲ್ಲೂ ಕಾಂಗ್ರೆಸ್‌ನಿಂದ ಅಭ್ಯರ್ಥಿ ಯಾರು ಎನ್ನುವುದೇ ಭಾರೀ ಕುತೂಹಲ ಕೆರಳಿಸಿದೆ. ಈಗಾಗಲೇ ಕ್ಷೇತ್ರದಲ್ಲಿ ಮೂಲ ಮತ್ತು ವಲಸಿಗ ಕಾಂಗ್ರೆಸ್ ನಾಯಕರ ನಡುವೆ ಫೈಟ್ ಆರಂಭವಾಗಿದ್ದು, ಅದು ಎಲ್ಲಿಗೆ ಬಂದು ನಿಲ್ಲಲಿದೆಯೋ ಗೊತ್ತಿಲ್ಲ.

ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಕ್ಷೇತ್ರದಲ್ಲಿ ಮಾಜಿ ಶಾಸಕ ವಾಸು ಮತ್ತು ಹರೀಶ್ ಗೌಡರ ನಡುವೆ ಪೈಪೋಟಿ ಆರಂಭವಾಗಿದ್ದು, ವಾಸು ಅವರಿಗೆ ವೀರಪ್ಪಮೊಯ್ಲಿ ಮತ್ತು ಡಿ.ಕೆ.ಶಿವಕುಮಾರ್ ಅವರ ಕೃಪಾಶೀರ್ವಾದವಿದ್ದರೆ, ಹರೀಶ್ ಗೌಡರಿಗೆ ಸಿದ್ದರಾಮಯ್ಯರವರ ಶ್ರೀರಕ್ಷೆಯಿದೆ. ಹೀಗಾಗಿ ಇವರಿಬ್ಬರು ನಾಯಕರ ನಡುವಿನ ಶೀತಲ ಸಮರದಿಂದಾಗಿ ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದಾರೆ.

ಹಾಗೆ ನೋಡಿದರೆ ಮಾಜಿ ಶಾಸಕ ವಾಸು ಅವರು ಒಕ್ಕಲಿಗ ಸಮುದಾಯದ ನಾಯಕನಾಗಿದ್ದು, ಡಿ.ಕೆ.ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಅವರ ಜೊತೆಗಿನ ಸಂಬಂಧವೂ ಅಷ್ಟಕಷ್ಟೇ ಆಗಿದೆ. ಈ ಹಿಂದೆ ಸಿದ್ದರಾಮಯ್ಯರ ಬೆಂಬಲಿಗರು ಹರೀಶ್ ಗೌಡರಿಗೆ ಟಿಕೆಟ್ ಎಂದು ಘೋಷಣೆ ಮಾಡಿದ್ದರು. ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೆಂಗೆಣ್ಣಿಗೆ ಕಾರಣವಾಗಿತ್ತು. ಇದಾದ ನಂತರ ಇತ್ತೀಚೆಗಿನ ಬೆಳವಣಿಗೆ ಮಾಜಿ ಶಾಸಕ ವಾಸು ಅವರನ್ನು ಅನುಮಾನದಿಂದ ನೋಡುವಂತಾಗಿದೆ.

ತಂದೆ ಕಾಂಗ್ರೆಸ್‌ನಲ್ಲಿ ಮಕ್ಕಳು ಬಿಜೆಪಿಯಲ್ಲಿ

ತಂದೆ ಕಾಂಗ್ರೆಸ್‌ನಲ್ಲಿ ಮಕ್ಕಳು ಬಿಜೆಪಿಯಲ್ಲಿ

ಈಗಾಗಲೇ ವಾಸು ಅವರ ಪುತ್ರರಿಬ್ಬರು ಕಮಲ ಹಿಡಿದಿದ್ದಾರೆ. ಆದರೆ ವಾಸು ಅವರು ಮಾತ್ರ ಮಕ್ಕಳ ನಿರ್ಧಾರಕ್ಕೂ ನನಗೂ ಸಂಬಂಧವಿಲ್ಲ ನಾನೇನಿದ್ದರೂ ಕಾಂಗ್ರೆಸ್‌ನಲ್ಲೇ ಇರ್ತೀನಿ ಎಂದು ಹೇಳಿದ್ದಾರೆ. ಆದರೆ ಈ ಬೆಳವಣಿಗೆ ನಂತರ ಕ್ಷೇತ್ರದಲ್ಲಿನ ಕಾಂಗ್ರೆಸ್ ನಲ್ಲಿ ಒಂದಷ್ಟು ಗೊಂದಲ ಮುಂದುವರೆದಿದೆ. ಬಹಳಷ್ಟು ಕಾರ್ಯಕರ್ತರು ಹರೀಶ್ ಗೌಡರಿಗೆ ಟಿಕಟ್ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ.

ಹರೀಶ್ ಗೌಡರ ಬಗ್ಗೆ ಹೇಳಬೇಕೆಂದರೆ ಈ ಹಿಂದೆ ಹರೀಶ್ ಗೌಡರು ಜೆಡಿಎಸ್‌ನಲ್ಲಿ ಪ್ರಭಾವಿ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅವರಿಗೆ ಟಿಕೆಟ್ ನೀಡದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ಅವರ ಸ್ಪರ್ಧೆ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ಸೋಲಿಗೆ ಮತ್ತು ಬಿಜೆಪಿ ಗೆಲುವಿಗೆ ಕಾರಣವಾಗಿತ್ತು. ಕಳೆದ ವಿಧಾನ ಸಭಾ ಚುನಾವಣೆ ಬಳಿಕ ಹರೀಶ್ ಗೌಡರು ಕಾಂಗ್ರೆಸ್ ಸೇರಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಮೂಲ ಮತ್ತು ವಲಸಿಗ ನಾಯಕರ ನಡುವೆ ಶೀತಲ ಸಮರ ಶುರುವಾಗಿದೆ.

ಚಾಮರಾಜ ಕ್ಷೇತ್ರಕ್ಕೆ ಬಲಿಷ್ಠ ಅಭ್ಯರ್ಥಿ ವಾಸು

ಚಾಮರಾಜ ಕ್ಷೇತ್ರಕ್ಕೆ ಬಲಿಷ್ಠ ಅಭ್ಯರ್ಥಿ ವಾಸು

ಇದೆಲ್ಲದರ ನಡುವೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರು ವಾಸು ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಜೊತೆಗೆ ಅವರು ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ವಾಸು ಸ್ಪರ್ಧೆ ಮಾಡುವ ಸುಳಿವು ನೀಡಿದ್ದು, ಮೊದಲ ಪಟ್ಟಿಯಲ್ಲಿ ಮಾಜಿ ಶಾಸಕ ವಾಸು ಅವರ ಹೆಸರಿರುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ವಾಸು ಅವರು ಚಾಮರಾಜ ಕ್ಷೇತ್ರಕ್ಕೆ ಬಲಿಷ್ಠ ಅಭ್ಯರ್ಥಿ. ಮೊದಲ ಪಟ್ಟಿಯಲ್ಲಿ ವಾಸು ಅವರ ಹೆಸರು ಇರುತ್ತದೆ. ವಾಸುಗೆ ಟಿಕೆಟ್ ತಪ್ಪಿಸಿ ಬೇರೆಯವರಿಗೆ ಕೊಡಲು ಸಾಧ್ಯವಿಲ್ಲ. ಮೂಲ ಕಾಂಗ್ರೆಸ್ಸಿಗರನ್ನು ಕಾಯುವುದೇ ನನ್ನ ಕೆಲಸ. ನಾನು ಮತ್ತು ಮಾಜಿ ಶಾಸಕ ವಾಸು ಮೂಲ ಕಾಂಗ್ರೆಸ್ಸಿಗರು. ಅವರಿಗೆ ಟಿಕೆಟ್ ತಪ್ಪಿಸಿ ಬೇರೆಯವರಿಗೆ ನೀಡಲು ಸಾಧ್ಯವಿಲ್ಲ ಎಂದು ವೀರಪ್ಪ ಮೊಯ್ಲಿ ಅವರು ಖಡಕ್ಕಾಗಿ ಹೇಳಿದ್ದಾರೆ. ಆ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ ಎಂದರೆ ತಪ್ಪಾಗಲಾರದು.

ಕಾಂಗ್ರೆಸ್ ಮಹಾಸಾಗರ ಇದ್ದ ಹಾಗೆ

ಕಾಂಗ್ರೆಸ್ ಮಹಾಸಾಗರ ಇದ್ದ ಹಾಗೆ

ಇನ್ನು ಪಕ್ಷದ ಕುರಿತಂತೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ವಿಚಾರ ಇಲ್ಲವೇ ಇಲ್ಲ. ನಮ್ಮಲ್ಲಿ ಸಾವಿರಾರು ಬಣಗಳು ಇರಬಹುದೆಂದು ಭಾವಿಸಲಾಗಿದೆ. ಆದರೆ, ಸಣ್ಣ ಸಣ್ಣ ನದಿಗಳು ಸೇರಿ ಸರೋವರ ಸೇರುತ್ತದೆ. ಸಮುದ್ರ ಸೇರಿದ ಕೂಡಲೇ ಯಾವ ಬಣ ಇರುವುದಿಲ್ಲ. ಕೆಲವು ಸಣ್ಣ ಸಣ್ಣ ನದಿಗಳು ಹಾರಿ ಹೋಗುತ್ತವೆ. ಕಾಂಗ್ರೆಸ್ ಮಹಾಸಾಗರ ಇದ್ದ ಹಾಗೆ. ಪರೋಕ್ಷವಾಗಿ ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಎಚ್ಚರಿಕೆ ನೀಡಿದರು. ನನಗೆ ಯಾವುದೇ ಅಸಮಾಧಾನವಿಲ್ಲ.

ವೀರಪ್ಪ ಮೊಯ್ಲಿ ಕೃಪೆ ವಾಸು ಅವರ ಮೇಲೆ

ವೀರಪ್ಪ ಮೊಯ್ಲಿ ಕೃಪೆ ವಾಸು ಅವರ ಮೇಲೆ

ಕೇಂದ್ರೀಯ ಚುನಾವಣೆ ಸಮಿತಿಯಲ್ಲಿ ರಾಜ್ಯದಿಂದ ನಾನೊಬ್ಬನೇ ಸದಸ್ಯನಾಗಿದ್ದು, ಸಕ್ರಿಯವಾಗಿ ಕಾಂಗ್ರೆಸ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದೇನೆ. ಬಣ ರಾಜಕೀಯ ಕಾಂಗ್ರೆಸ್‌ನಲ್ಲಿ ಇಲ್ಲ. ಯಾರಿಗೆ ಅರ್ಹತೆ ಇದೆಯೋ ಅವರೆಲ್ಲರಿಗೂ ಟಿಕೆಟ್ ಸಿಗುವುದು ನಿಶ್ಚಿತ ಎಂದಿದ್ದಾರೆ. ಇದೆಲ್ಲವನ್ನು ಗಮನಿಸಿದರೆ ಮೊಯ್ಲಿ ಅವರ ಕೃಪೆ ವಾಸು ಅವರ ಮೇಲೆ ಇರುವುದಂತು ನಿಜವಾಗಿದೆ. ಇನ್ನು ವೀರಪ್ಪ ಮೊಯ್ಲಿ ಅವರು ವಾಸು ಅವರ ಮನೆಗೆ ಭೇಟಿ ನೀಡಿದ ಬಗ್ಗೆ ವಿಶ್ಲೇಷಣೆಗಳು ನಡೆಯುತ್ತಿದ್ದು ವಾಸು ಅವರ ಪುತ್ರರಿಬ್ಬರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಹಾಗಾಗಿ, ವಾಸು ಅವರು ಮುಂದಿನ ದಿನಗಳಲ್ಲಿ ಟಿಕೆಟ್ ಸಿಗದಿದ್ದಲ್ಲಿ ಪಕ್ಷ ತೊರೆಯಬಹುದೆಂಬ ಕಾರಣಕ್ಕಾಗಿ ಎಂ.ವೀರಪ್ಪ ಮೊಯ್ಲಿ ಭೇಟಿ ನೀಡಿ ಮಾತುಕತೆ ನಡೆಸಿದ್ದು, ವಾಸು ಅವರಿಗೆ ಟಿಕೆಟ್ ನೀಡುವ ಭರವಸೆ ನೀಡಿರಬಹುದು ಎಂದು ಹೇಳಲಾಗಿದೆ.

ಒಟ್ಟಾರೆ ಚಾಮರಾಜಕ್ಷೇತ್ರದಲ್ಲಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಪೈಪೋಟಿ ಆರಂಭವಾಗಿದ್ದು ಟಿಕೆಟ್ ಘೋಷಣೆ ಇನ್ನಷ್ಟೆ ಆಗಬೇಕಾಗಿರುವುದರಿಂದ ಕಾರ್ಯಕರ್ತರಲ್ಲಿ ಕುತೂಹಲವಿದ್ದರೆ, ನಾಯಕರಲ್ಲಿ ಗೊಂದಲವಿದೆ. ಎಲ್ಲವನ್ನು ಸರಿಪಡಿಸಿಕೊಂಡು ಹೇಗೆ ಮುಂದುವರೆಯುತ್ತಾರೆ ಎಂಬುದೇ ಕುತೂಹಲಕಾರಿಯಾಗಿದೆ. ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+