ರಾಜಕಾರಣದಲ್ಲಿ ಸತ್ಯವಂತರು ಯಾರಿದ್ದಾರೆ?; ಮಾಜಿ ಪ್ರಧಾನಿ ದೇವೇಗೌಡ ಪ್ರಶ್ನೆ
ಮೈಸೂರು, ಏಪ್ರಿಲ್ 16: ಪ್ರಸ್ತುತ ರಾಜಕಾರಣದಲ್ಲಿ ಸತ್ಯವಂತರು ಯಾರಿದ್ದಾರೆ? ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅಸಮಾಧಾನ ಹೊರಹಾಕಿದ್ದಾರೆ.
ಶನಿವಾರ ಮೈಸೂರು ಜಿಲ್ಲೆ ಎಚ್.ಡಿ. ಕೋಟೆಯ ಬೀಚನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಪರ್ಸೆಂಟೇಜ್ ಬಗ್ಗೆ ಕೇಳಿದರೆ ಅವರ ಮೇಲೆ ಇವರು, ಇವರ ಮೇಲೆ ಅವರು ಮಾತನಾಡುತ್ತಾರೆ. ಕಾಂಗ್ರೆಸ್‌ನವರು ಏನೂ ಮಾಡಿಯೇ ಇಲ್ವೇ? ಯಾರು ಸಾಚಾ ಇದ್ದಾರೆ ಹೇಳಿ? ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ 10% ಸರ್ಕಾರ ಅಂತ ಪ್ರಧಾನಿ ಮೋದಿಯೇ ಆರೋಪ ಮಾಡಿದ್ದರು. ಆಗಲೂ ನಾನು ಆರೋಪ ಮಾಡಲಿಲ್ಲ. ಈಗಲೂ ಅಷ್ಟೇ ನಾನು ಯಾವುದೇ ರೀತಿಯ ಪ್ರತಿಕ್ರಿಯೆ ಕೊಡಲ್ಲ. ಭ್ರಷ್ಟಾಚಾರ ಎಲ್ಲಾ ಕಡೆ ತುಂಬಿ ಹೋಗಿದೆ. ರಾಜಕಾರಣ ಹೇಳಲಾಗದಷ್ಟು ಕೆಟ್ಟು ಹೋಗಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಜಲ ಸಂಪನ್ಮೂಲಕ್ಕೆ ಯಾವುದೇ ಕೊರತೆ ಇಲ್ಲ. ಅದನ್ನು ಸಮರ್ಥವಾಗಿ ಬಳಸಿಕೊಳ್ಳಲು ಬಿಜೆಪಿ- ಕಾಂಗ್ರೆಸ್ ಸಹಕಾರ ಕೊಡುತ್ತಿಲ್ಲ. ಕಾವೇರಿ, ಕಬಿನಿ, ಕೃಷ್ಣಾ ಸೇರಿದಂತೆ ಬಹುತೇಕ ಅಂತರರಾಜ್ಯ ನದಿಗಳು.
ನೀರಾವರಿ ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಬೇಡಿ ಅಂತ ನಾನು ರಾಜ್ಯಸಭೆಯಲ್ಲಿ ಕೈಮುಗಿದು ಮನವಿ ಮಾಡಿದೆ. ಯಾವ ಪಕ್ಷದವರೂ ಸಹಕಾರ ಕೊಡಲಿಲ್ಲ. ನಮ್ಮದು ಪ್ರಾದೇಶಿಕ ಪಕ್ಷ. ಜನರಿಗೆ ಜಾಗೃತಿ ಬಂದರೆ ಸಹಜವಾಗಿ ಒಳ್ಳೆಯ ಆಯ್ಕೆ ಮಾಡುತ್ತಾರೆ. ಅದಕ್ಕಾಗಿಯೇ ಜನತಾ ಜಲಧಾರೆ ಯಾತ್ರೆ ಮೂಲಕ ಜನ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.

ತಮಿಳುನಾಡಿನಲ್ಲಿ ನೆಲ ಜಲ ವಿಚಾರ ಬಂದಾಗ ಎಲ್ಲಾ ಪಕ್ಷಗಳು ಒಂದಾಗುತ್ತವೆ. ಆದರೆ ನಮ್ಮ ರಾಜ್ಯದಲ್ಲಿ ಯಾರೂ ಒಂದಾಗಲ್ಲ. ಕೈ ಮುಗಿದು ಬೇಡಿದರೂ ಸಹಕಾರ ಕೊಡಲಿಲ್ಲ. ಕೇಂದ್ರ ಜಲಶಕ್ತಿ ಸಚಿವರು ಮೂರು ಬಾರಿ ಭೇಟಿಗೆ ಸಮಯ ನೀಡಿ ಚಕ್ಕರ್ ಹಾಕಿದರು ಎಂದು ಬೇಸರ ವ್ಯಕ್ತಪಡಿಸಿದರು.
ಬಿಜೆಪಿ ಜೊತೆ ಚುನಾವಣಾ ಪೂರ್ವ ಮೈತ್ರಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಎಚ್.ಡಿ. ದೇವೇಗೌಡರು, ಕೆಲವರು ಉತ್ಪ್ರೇಕ್ಷೆಯಿಂದ ಮಾತನಾಡುತ್ತಾರೆ. ಜೆಡಿಎಸ್ ಕಾರ್ಯಕ್ರಮಗಳನ್ನು ನೋಡಿ ಒಂದಲ್ಲಾ ಒಂದು ಬಣ್ಣ ಕಟ್ಟುತ್ತಾರೆ. ನಮ್ಮ ಜೊತೆ ಬಿಜೆಪಿಯ ಯಾರಾದರೂ ಇಲ್ಲಿಗೆ ಬಂದಿದ್ದಾರಾ? ಸುಮ್ನೆ ಯಾರೋ ಏನೋ ಹೇಳುತ್ತಾರೆ ಹೇಳಲಿ ಬಿಡಿ ಎಂದರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications