ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ. ಟಿ. ದೇವೇಗೌಡರಿಗೆ ಎದುರಾಳಿ ಯಾರು?
ಮೈಸೂರು, ಡಿಸೆಂಬರ್ 11; ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೋಲಿನ ಬಳಿಕ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರ ರಾಜ್ಯದಲ್ಲಿ ಹೆಚ್ಚಿನ ಗಮನಸೆಳೆದಿದೆ.
ಒಕ್ಕಲಿಗರ ಭದ್ರಕೋಟೆಯಾಗಿರುವ ಈ ಕ್ಷೇತ್ರವನ್ನು ಕಳೆದ ಎರಡು ದಶಕಗಳಿಂದ ಪ್ರತಿನಿಧಿಸುತ್ತಿರುವ ಜಿ. ಟಿ. ದೇವೇಗೌಡರು ಈ ಬಾರಿಯೂ ಸ್ಪರ್ಧಿಸುವುದು ಖಚಿತವಾಗಿದೆ. ಹೀಗಾಗಿ ಅವರ ವಿರುದ್ಧ ಸ್ಪರ್ಧಿಸುವವರು ಯಾರಿರಬಹುದು ಎಂಬ ಕುತೂಹಲ ಎಲ್ಲರನ್ನು ಕಾಡಲಾರಂಭಿಸಿದೆ.
ಒಂದು ವೇಳೆ ಮತ್ತೆ ಜಿ. ಟಿ. ದೇವೇಗೌಡರಿಗೆ ಪ್ರತಿಸ್ಪರ್ಧಿಯಾಗುವ ಘೋಷಣೆಯನ್ನು ವಿಪಕ್ಷನಾಯಕ ಸಿದ್ದರಾಮಯ್ಯ ಅವರೇನಾದರೂ ಮಾಡಿದ್ದರೆ ಕ್ಷೇತ್ರಕ್ಕೆ ಇಷ್ಟರಲ್ಲೇ ಹೈವೊಲ್ಟೋಜ್ ಬಂದಿರುತ್ತಿತ್ತು. ಆದರೆ ಸದ್ಯಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲುವ ಕುದುರೆಗಾಗಿ ತಲಾಸೆ ನಡೆಯುತ್ತಿರುವುದಂತು ನಿಜ.
ಜೆಡಿಎಸ್ ನಾಯಕರೊಂದಿಗೆ ಮುನಿಸಿಕೊಂಡು ತಟಸ್ಥವಾಗಿದ್ದ ಜಿ. ಟಿ. ದೇವೇಗೌಡರನ್ನು ಎಳೆದು ತರುವ ಪ್ರಯತ್ನಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಕೈಹಾಕಿದ್ದರು. ಆದರೆ ಕೊನೆಗಳಿಗೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡರ ಮಧ್ಯಪ್ರವೇಶದಿಂದ ಜೆಡಿಎಸ್‌ನಲ್ಲಿಯೇ ಉಳಿಯುವಂತಾಗಿದೆ.

ಹಠಕ್ಕೆ ಕಾಂಗ್ರೆಸ್, ಬಿಜೆಪಿ ಬಿದ್ದಿವೆ
ಹಾಗೆ ನೋಡಿದರೆ ಜಿ. ಟಿ. ದೇವೇಗೌಡರು ಜೆಡಿಎಸ್‌ನಲ್ಲಿ ಉಳಿದಿರುವುದು ಸ್ವಪಕ್ಷದ ಕೆಲವೊಂದು ನಾಯಕರಿಗೆ ಸಹಿಸಲು ಸಾಧ್ಯವಾಗದಂತಾಗಿದೆ. ಪಕ್ಷದಲ್ಲಿಯೇ ಅಸಮಾಧಾನದ ಹೊಗೆಯಿದ್ದರೂ ಅದನ್ನು ಮುಂದಿನ ದಿನಗಳಲ್ಲಿ ಪಕ್ಷದ ನಾಯಕರು ಹೇಗೆ ಶಮನಗೊಳಿಸುತ್ತಾರೆಯೋ ಗೊತ್ತಿಲ್ಲ. ಆದರೆ ಅವರನ್ನು ಸೋಲಿಸಿಯೇ ತೀರಬೇಕೆಂಬ ಹಠಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಬಿದ್ದಿದ್ದು, ಗೆಲ್ಲುವ ಅಭ್ಯರ್ಥಿಗಾಗಿ ಹುಡುಕಾಟ ಮುಂದುವರೆದಿದೆ. ಈ ನಡುವೆ ಕ್ಷೇತ್ರದಲ್ಲಿ ಗೆಲ್ಲುತ್ತೇವೆಯೋ ಅಥವಾ ಸೋಲುತ್ತೇವೆಯೋ ಆದರೆ ಸ್ಪರ್ಧೆಯಂತು ಮಾಡಿಯೇ ಮಾಡುತ್ತೇವೆ ಎಂಬ ನಿರ್ಧಾರಕ್ಕೆ ಬಂದಿರುವ ಹಲವು ಆಕಾಂಕ್ಷಿಗಳು ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿದ್ದಾರೆ.

ಹ್ಯಾಟ್ರಿಕ್ ಗೆಲುವಿಗೆ ಕಡಿವಾಣ ಬೀಳುತ್ತಾ?
ಸದ್ಯದ ಪರಿಸ್ಥಿತಿಯಲ್ಲಿ ಈ ಬಾರಿ ಕ್ಷೇತ್ರದಲ್ಲಿ ಜಿ. ಟಿ. ದೇವೇಗೌಡರ ವಿರುದ್ಧ ಸ್ಪರ್ಧಿಸಿ ಅವರ ಹ್ಯಾಟ್ರಿಕ್ ಗೆಲುವಿಗೆ ಕಡಿವಾಣ ಹಾಕಲು ಮುಂದಾಗಿರುವ ಆಕಾಂಕ್ಷಿಗಳು ಯಾರೆಲ್ಲ ಇರಬಹುದು ಎಂಬುದನ್ನು ನೋಡಿದ್ದೇ ಆದರೆ ಕಾಂಗ್ರೆಸ್‌ನಿಂದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಮರಿಗೌಡ, ಕೂರ್ಗಳ್ಳಿ ಮಹದೇವ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಬಿ. ಜೆ. ವಿಜಯಕುಮಾರ್, ಜಿಪಂ ಮಾಜಿ ಸದಸ್ಯ ರಾಕೇಶ್ ಪಾಪಣ್ಣ, ಮಾಜಿ ಶಾಸಕ ಸತ್ಯನಾರಾಯಣ ಪುತ್ರ ಅರುಣ್‌ಕುಮಾರ್, ನಗರಪಾಲಿಕೆ ಮಾಜಿ ಸದಸ್ಯ ಆರ್. ರವೀಂದ್ರಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು, ಮುಖಂಡರಾದ ಕೃಷ್ಣಕುಮಾರ್ ಸಾಗರ್, ಲೇಖಾ ವೆಂಕಟೇಶ್ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ.

ಬಿಜೆಪಿಯಲ್ಲಿಯೂ ಹಲವು ಆಕಾಂಕ್ಷಿಗಳು
ಬಿಜೆಪಿಯಲ್ಲಿಯೂ ಆಕಾಂಕ್ಷಿಗಳಿಗೆ ಕೊರತೆಯಿಲ್ಲ. ಈ ಪೈಕಿ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲುಕಂಡಿದ್ದ ಎಸ್. ಆರ್. ಗೋಪಾಲರಾವ್ ಕೂಡ ಮತ್ತೊಮ್ಮೆ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸುತ್ತಿದ್ದರೆ, ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಮಾಜಿ ಅಧ್ಯಕ್ಷ ಅರುಣ್ ಕುಮಾರ್ ಗೌಡ, ಕ್ಷೇತ್ರದ ಹಾಲಿ ಅಧ್ಯಕ್ಷ ಗೆಜ್ಜಗಳ್ಳಿ ಮಹೇಶ್, ವಸ್ತುಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎ. ಹೇಮಂತ್‌ಕುಮಾರ್ ಗೌಡ, ಮೈಸೂರು ಜಿಲ್ಲಾ ಗ್ರಾಮಾಂತರ ಉಪಾಧ್ಯಕ್ಷ ಎನ್. ಎಂ. ಜಗದೀಶ್ ಗೌಡ ಮೊದಲಾದವರು ಆಕಾಂಕ್ಷಿಗಳಾಗಿದ್ದರೂ ಇವರೆಲ್ಲರ ನಡುವೆ ಗೆಲ್ಲುವ ಕುದುರೆಯನ್ನೇ ಬೇರೆಡೆಯಿಂದ ತಂದು ನಿಲ್ಲಿಸುವ ತೀರ್ಮಾನವನ್ನು ಪಕ್ಷದ ನಾಯಕರು ಮಾಡಿದರೂ ಅಚ್ಚರಿಯಿಲ್ಲ. ಇದಕ್ಕೆ ಪೂರಕ ಎಂಬಂತೆ ಇತ್ತೀಚೆಗೆ ಕಮಲ ಹಿಡಿದಿರುವ ನಟ ಶಶಿಕುಮಾರ್ ಅವರ ಹೆಸರು ಕೂಡ ಕ್ಷೇತ್ರದಲ್ಲಿ ಓಡಾಡುತ್ತಿದೆ.

ಬಿಜೆಪಿ ತಂತ್ರ ಏನೀರಬಹುದು?
ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ತಂತ್ರ ನಡೆಸುತ್ತಿರುವ ಬಿಜೆಪಿ ಗೆಲುವಿಗೆ ಏನು ಬೇಕಾದರೂ ಮಾಡುವ ಸಾಧ್ಯತೆ ಇರುವುದರಿಂದ ಜತೆಗೆ ಜಿ. ಟಿ. ದೇವೇಗೌಡರಿಗೆ ಸ್ಪರ್ಧೆ ನೀಡಬಹುದಾದ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕಾದ ಅಗತ್ಯತೆಯಿದ್ದು ಆ ನಿಟ್ಟಿನಲ್ಲಿ ಏನಾದರೊಂದು ಕಾರ್ಯತಂತ್ರ ಮಾಡಿಯೇ ತೀರುತ್ತದೆ ಎಂಬುವುದರಲ್ಲಿ ಎರಡು ಮಾತಿಲ್ಲ. ಜತೆಗೆ ಕ್ಷೇತ್ರದಲ್ಲಿ ಖಾತೆ ತೆರೆಯುವ ಹಂಬಲವೂ ಇದ್ದೇ ಇದೆ.
ಸದ್ಯಕ್ಕೆ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳು ನಿರ್ಣಾಯಕವಾಗಿರುವುದರಿಂದ ಜಿ. ಟಿ. ದೇವೇಗೌಡರ ಗೆಲುವಿಗೆ ಸಹಕಾರಿಯಾಗಿದೆ ಎಂಬ ಮಾತುಗಳಿವೆ. ಆದರೆ ಇದೇ ಕ್ಷೇತ್ರದಿಂದ ಐದು ಬಾರಿ ಗೆಲುವು ಸಾಧಿಸಿದ್ದ ಸಿದ್ದರಾಮಯ್ಯ ಅವರು ಕಳೆದ ಬಾರಿ ಸೋಲಬೇಕಾಯಿತು. ಈ ಬಾರಿಯ ಚುನಾವಣೆ ಕ್ಷೇತ್ರದಲ್ಲಿ ಭಾರೀ ಕುತೂಹಲ ಕೆರಳಿಸಿದೆ. ಆದರೆ ಜಿ. ಟಿ. ದೇವೇಗೌಡರ ವಿರುದ್ಧ ಕಾಂಗ್ರೆಸ್ ಮತ್ತು ಬಿಜೆಪಿ ಯಾರನ್ನು ಕಣಕ್ಕಿಸುತ್ತದೆ ಎನ್ನುವುದರ ಮೇಲೆ ಮುಂದಿನ ರಾಜಕೀಯ ಜಿದ್ದಾಜಿದ್ದಿ ಶುರುವಾಗಲಿದೆ.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ












Click it and Unblock the Notifications