ಮೈಸೂರಿನ ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿಲ್ಲ ಯಾಕೆ?
ಮೈಸೂರು, ಮಾರ್ಚ್ 25: ಹಳೇ ಮೈಸೂರು ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಅದರಲ್ಲೂ ಮೈಸೂರಿನ ಹನ್ನೊಂದು ಕ್ಷೇತ್ರಗಳ ಮೇಲೆಯೂ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಕಣ್ಣಿಟ್ಟಿದೆ. ಹೀಗಿರುವಾಗ ಇಲ್ಲಿ ಪ್ರಬಲ ಪೈಪೋಟಿಗಳು ಎದುರಾಗುವ ಸಾಧ್ಯತೆಯಿದ್ದು, ಹೀಗಾಗಿಯೇ ಹತ್ತು ಹಲವು ಲೆಕ್ಕಚಾರಗಳನ್ನು ಮಾಡಿ ಕಾಂಗ್ರೆಸ್ ಹನ್ನೊಂದು ಕ್ಷೇತ್ರಗಳ ಪೈಕಿ ಎಂಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಉಳಿದ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡದಿರುವುದು ಅಚ್ಚರಿಗೆ ಕಾರಣವಾಗಿದೆ.
ಇಷ್ಟಕ್ಕೂ ಕೆ.ಆರ್.ಕ್ಷೇತ್ರ, ಚಾಮರಾಜ ಮತ್ತು ಚಾಮುಂಡೇಶ್ವರಿ ಕ್ಷೇತ್ರಗಳನ್ನು ಹೊರತು ಪಡಿಸಿದರೆ ಅಚ್ಚರಿಯ ಬೆಳವಣಿಗೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಅವರ ನಿಧನದಿಂದಾಗಿ ನಂಜನಗೂಡು ಕ್ಷೇತ್ರಕ್ಕೆ ಅವರ ಪುತ್ರ ದರ್ಶನ್ ರವರನ್ನು ಘೋಷಿಸಲಾಗಿದೆಯಾದರೂ ಉಳಿದಂತೆ ಎಲ್ಲರೂ ನಿರೀಕ್ಷಿತ ಅಭ್ಯರ್ಥಿಗಳಾಗಿದ್ದಾರೆ.

ಸದ್ಯದ ಅಭ್ಯರ್ಥಿಗಳ ಘೋಷಣೆ ಪ್ರಕಾರ ವರುಣಾದಲ್ಲಿ ಸಿದ್ದರಾಮಯ್ಯ, ತಿ.ನರಸೀಪುರದಲ್ಲಿ ಡಾ.ಹೆಚ್.ಸಿ.ಮಹದೇವಪ್ಪ, ನಂಜನಗೂಡಿನಲ್ಲಿ ದರ್ಶನ್, ಕೆ.ಆರ್.ನಗರದಲ್ಲಿ ರವಿಶಂಕರ್, ಪಿರಿಯಾಪಟ್ಟಣದಲ್ಲಿ ಕೆ.ವೆಂಕಟೇಶ್, ಹುಣಸೂರಿನಲ್ಲಿ ಹೆಚ್.ಪಿ.ಮಂಜುನಾಥ್, ನರಸಿಂಹರಾಜದಲ್ಲಿ ತನ್ವೀರ್ ಸೇಠ್ ಹಾಗೂ ಹೆಚ್.ಡಿ.ಕೋಟೆಯಲ್ಲಿ ಅನಿಲ್ ಚಿಕ್ಕಮಾಧು ಅವರನ್ನು ಘೋಷಿಸಲಾಗಿದೆ.
ಮೈಸೂರು ನಗರಕ್ಕೆ ಹೊಂದಿಕೊಂಡಂತೆ ಇರುವ ಕ್ಷೇತ್ರಗಳಾದ ಕೃಷ್ಣರಾಜ, ಚಾಮರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಈ ಮೂರು ಕ್ಷೇತ್ರಗಳಲ್ಲಿ ಕೃಷ್ಣರಾಜ ಮತ್ತು ಚಾಮರಾಜ ಈ ಎರಡು ಕ್ಷೇತ್ರ ಬಿಜೆಪಿ ತೆಕ್ಕೆಯಲ್ಲಿದ್ದರೆ, ಚಾಮುಂಡೇಶ್ವರಿ ಕ್ಷೇತ್ರ ಜೆಡಿಎಸ್ ಹಿಡಿತದಲ್ಲಿದೆ. ಅದಾಗಲೇ ಚಾಮುಂಡೇಶ್ವರಿ ಕ್ಷೇತ್ರವನ್ನು ಜೆಡಿಎಸ್‌ನ ಜಿ.ಟಿ.ದೇವೇಗೌಡರು ಕಬ್ಜಾ ಮಾಡಿಕೊಂಡಿದ್ದಾರೆ. ಬಿಜೆಪಿ ಇನ್ನೆರಡು ಕ್ಷೇತ್ರದಲ್ಲಿದ್ದು, ಕೆ.ಆರ್.ಕ್ಷೇತ್ರದಲ್ಲಿ ಎಸ್.ಎ.ರಾಮದಾಸ್, ಚಾಮರಾಜದಲ್ಲಿ ನಾಗೇಂದ್ರ ಅವರು ಪ್ರಾಬಲ್ಯ ಮೆರೆದಿದ್ದಾರೆ.

ಕೆ.ಆರ್.ಕ್ಷೇತ್ರದಲ್ಲಿ ಎಂ.ಕೆ.ಸೋಮಶೇಖರ್‌ಗೆ ಪ್ರತಿಸ್ಪರ್ಧಿಗಳು
ಈ ಮೂರು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನ್ನು ಮಣಿಸಿ ಗೆಲುವು ಸಾಧಿಸಬೇಕಾದರೆ ಕಾಂಗ್ರೆಸ್ ನಿಂದ ಘಟಾನುಘಟಿ ನಾಯಕರೇ ಕಣಕ್ಕಿಳಿಯಬೇಕಾಗಿದೆ. ಆದರೆ ಈ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದು ಕೂಡ ಕಾಂಗ್ರೆಸ್ ನಾಯಕರ ತಲೆನೋವಿಗೆ ಕಾರಣವಾಗಿದೆ. ಹೀಗಾಗಿ ತೂಗಿ ಅಳೆದು ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಸುಲಭವಾಗಿ ಉಳಿದಿಲ್ಲ. ಇಲ್ಲಿ ಟಿಕೆಟ್ ಆಕಾಂಕ್ಷಿಗಳ ಮನವೊಲಿಸಿ ಒಬ್ಬರನ್ನು ಆಯ್ಕೆ ಮಾಡಬೇಕಾಗಿದೆ. ಇಲ್ಲದೆ ಹೋದರೆ ಬಂಡಾಯದ ಹೊಗೆ ಕಾಣಿಸಿಕೊಂಡರೆ ಪಕ್ಷಕ್ಕೆ ತೊಂದರೆಯಾಗಲಿದೆ.
ಮೇಲ್ನೋಟಕ್ಕೆ ಕೆ.ಆರ್.ಕ್ಷೇತ್ರದಲ್ಲಿ ಶಾಸಕ ರಾಮದಾಸ್‌ಗೆ ಕಾಂಗ್ರೆಸ್ ನಿಂದ ಪ್ರಬಲ ಪೈಪೋಟಿ ನೀಡುವ ನಾಯಕರಿದ್ದರೆ ಅದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾತ್ರ. ಆದರೆ ಸೋಮಶೇಖರ್ ಅವರಿಗೆ ಪೈಪೋಟಿ ನೀಡುವಂತೆ ಸ್ವಪಕ್ಷ ಕಾಂಗ್ರೆಸ್ ನಲ್ಲಿಯೇ ಆಕಾಂಕ್ಷಿಗಳು ಹುಟ್ಟಿಕೊಂಡಿದ್ದು, ಅವರಲ್ಲಿ ಕಾಂಗ್ರೆಸ್ ಮುಖಂಡ ಗುರುಪಾದಸ್ವಾಮಿ, ಪ್ರದೀಪ್‌ಕುಮಾರ್, ನವೀನ್‌ಕುಮಾರ್, ಎನ್.ಭಾಸ್ಕರ್ ಟಿಕೆಟ್‌ಗಾಗಿ ಕಾಯುತ್ತಿದ್ದಾರೆ. ಜತೆಗೆ ಕಳೆದೊಂದು ವರ್ಷದಿಂದ ಪ್ರದೀಪ್‌ಕುಮಾರ್, ನವೀನ್‌ಕುಮಾರ್, ತಮ್ಮದೇ ಆದ ಸಮಾಜಸೇವೆಯನ್ನು ಮಾಡುವ ಮೂಲಕ ಕ್ಷೇತ್ರದ ಜನರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

ಚಾಮರಾಜದಲ್ಲಿ ವಾಸು ವರ್ಸಸ್ ಹರೀಶ್ ಗೌಡ
ಎಂ.ಕೆ.ಸೋಮಶೇಖರ್ ಮಾಜಿ ಶಾಸಕರಾಗಿರುವುದಲ್ಲದೆ, ಸಿದ್ದರಾಮಯ್ಯ ಅವರಿಗೆ ಆಪ್ತರೂ ಆಗಿರುವುದರಿಂದ ಅವರಿಗೆ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಿತ್ತು. ಆದರೀಗ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡದಿರುವುದು ಹತ್ತು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಸದ್ಯ ಕ್ಷೇತ್ರದಲ್ಲಿ ರಾಮದಾಸ್ ಅವರ ವಿರುದ್ಧ ಸ್ವಪಕ್ಷದಲ್ಲಿಯೇ ಒಂದಷ್ಟು ವಿರೋಧಗಳು ಇರುವುದರಿಂದ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಲಿ ಆ ನಂತರ ನೋಡೋಣ ಎಂಬ ಲೆಕ್ಕಾಚಾರವಿದ್ದರೂ ಅಚ್ಚರಿ ಪಡಬೇಕಾಗಿಲ್ಲ.
ಇನ್ನೊಂದು ಕ್ಷೇತ್ರ ಚಾಮರಾಜದಲ್ಲಿ ಮಾಜಿ ಶಾಸಕ ವಾಸು ಮತ್ತು ಮುಖಂಡ ಹರೀಶ್ ಗೌಡರ ನಡುವೆ ಸ್ಪರ್ಧೆಯಿದೆ. ವಾಸು ಅವರಿಗೆ ಡಿ.ಕೆ.ಶಿವಕುಮಾರ್ ಮತ್ತು ವೀರಪ್ಪ ಮೊಯ್ಲಿ ಅವರ ಅಭಯವಿದ್ದರೆ, ಹರೀಶ್ ಗೌಡರಿಗೆ ಸಿದ್ದರಾಮಯ್ಯ ಅವರ ಕೃಪಾಶೀರ್ವಾದವಿದೆ. ಈ ಹಿಂದೆ ಸಿದ್ದರಾಮಯ್ಯ ಬೆಂಬಲಿಗರು ಹರೀಶ್ ಗೌಡರಿಗೆ ಟಿಕೆಟ್ ಎಂದು ಘೋಷಣೆ ಮಾಡಿದ್ದರು. ನಂತರದ ಬೆಳವಣಿಗೆಯಲ್ಲಿ ಕಾಂಗ್ರೆಸ್ ನಾಯಕ ವೀರಪ್ಪಮೊಯ್ಲಿ ಅವರು ವಾಸು ಅವರಿಗೆ ಟಿಕೆಟ್ ಎಂದು ಹೇಳಿದ್ದರು. ಹೀಗಾಗಿ ಈ ಕ್ಷೇತ್ರದಲ್ಲಿ ವಾಸು ಮತ್ತು ಹರೀಶ್ ಗೌಡರ ನಡುವೆ ಭಾರೀ ಪೈಪೋಟಿಯಿದ್ದು, ಇಲ್ಲಿ ಇಬ್ಬರ ಪೈಕಿ ಒಬ್ಬರಿಗೆ ಟಿಕೆಟ್ ಕೈತಪ್ಪಿದರೂ ಪಕ್ಷದ ಮೇಲೆ ಪರಿಣಾಮ ಬೀರಲಿದೆ.
ಚಾಮುಂಡೇಶ್ವರಿಯಲ್ಲಿ ಯಾರಿಗೆ 'ಕೈ' ಟಿಕೆಟ್
ಇನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡರು ಪ್ರಭಾವಿಯಾಗಿದ್ದು, ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರನ್ನೇ 2018ರ ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಿದ ಖ್ಯಾತಿಯಿದೆ. ಅವರ ಎದುರು ಸ್ಪರ್ಧೆ ಮಾಡಿ ಗೆಲ್ಲುವುದು ಸುಲಭದ ಕೆಲಸವೇನಲ್ಲ. ಆದರೂ ಸ್ಪರ್ಧೆ ಮಾಡಲು ಜಿ.ಪಂ ಮಾಜಿ ಅಧ್ಯಕ್ಷ ಕೆ.ಮರಿಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಜಿಪಂ ಮಾಜಿ ಸದಸ್ಯ ರಾಕೇಶ್ ಪಾಪಣ್ಣ ಮೊದಲಾದವರು ಪೈಪೋಟಿ ನಡೆಸುತ್ತಿದ್ದಾರೆ.
ಇದೆಲ್ಲವನ್ನು ಗಮನಿಸಿದರೆ ಈ ಮೂರು ಕ್ಷೇತ್ರಗಳಲ್ಲಿ ಹಲವು ಗೊಂದಲಗಳಿದ್ದು, ಅವುಗಳನ್ನು ಪರಿಹರಿಸದೆ ಟಿಕೆಟ್ ಘೋಷಣೆ ಮಾಡುವುದು ಕಷ್ಟವಾಗಿರುವುದರಿಂದ ಟಿಕೆಟ್ ಘೋಷಣೆಯನ್ನು ತಡೆಹಿಡಿಯಲಾಗಿದೆ. ಸದ್ಯದ ಮಟ್ಟಿಗೆ ಈ ಮೂರು ಕ್ಷೇತ್ರ ಕಾಂಗ್ರೆಸ್ ಪಕ್ಷದ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿರುವುದಂತು ನಿಜ. ಮುಂದೇನು ಎಂಬುದನ್ನು ಕಾದು ನೋಡಬೇಕಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications