ಎಸ್.ಎ.ರಾಮದಾಸ್ ವಿರುದ್ಧ ಬ್ರಾಹ್ಮಣ ಮುಖಂಡರು ಯಡಿಯೂರಪ್ಪಗೆ ದೂರು ನೀಡಿದ್ದೇಕೆ?- ಇಲ್ಲಿದೆ ವಿವರ
ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ವಿರುದ್ಧ ಬ್ರಾಹ್ಮಣ ಮುಖಂಡರು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ದೂರು ಸಲ್ಲಿಸಿದ್ದೇಕೆ ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ.
ಮೈಸೂರು, ಮಾರ್ಚ್, 15: ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ವಿರುದ್ಧ ಬ್ರಾಹ್ಮಣ ಮುಖಂಡರು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ದೂರು ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ ರಾಮದಾಸ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಅವರ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿದ ನಮ್ಮ ಮೇಲೂ ಹಲ್ಲೆ ನಡೆಸಲು ಹುಡುಗರನ್ನು ಬಿಟ್ಟಿದ್ದಾರೆ. ಬ್ರಾಹ್ಮಣರ ಅಭಿವೃದ್ಧಿ ಬಗ್ಗೆ ಶಾಸಕರು ತಲೆಕೆಡಿಸಿಕೊಂಡಿಲ್ಲ. ಹಾಗಾಗಿ ಅವರಿಗೆ ಈ ಬಾರಿ ವಿಧಾನಸಭೆ ಚುನಾವಣೆ ಟಿಕೆಟ್ ನೀಡಬೇಡಿ ಎಂದು ಮನವಿ ಮಾಡಿದರು.
ಎಸ್.ಎ. ರಾಮದಾಸ್ ಪರ ಸಭೆ
ಇದೇ ವೇಳೆ ಬ್ರಾಹ್ಮಣ ಸಮುದಾಯದ ಅಭಿವೃದ್ಧಿ ಹಾಗೂ ಸಮಸ್ಯೆಗಳಿಗೆ ಸ್ಪಂದಿಸುವ ಅಭ್ಯರ್ಥಿಗಳಿಗೆ ವಿಧಾನಸಭೆ ಚುನಾವಣೆಯಲ್ಲಿ ಬೆಂಬಲ ನೀಡಲು ಮೈಸೂರು ಬ್ರಾಹ್ಮಣ ಯುವ ವೇದಿಕೆ ಸಭೆಯಲ್ಲಿ ತೀರ್ಮಾನಿಸಿದೆ.

ಮೈಸೂರಿನ ಜಯನಗರದಲ್ಲಿರುವ ಶ್ರೀರಾಮ ಮಂದಿರದಲ್ಲಿ ನಡೆದ ಸಭೆಯಲ್ಲಿ, ಕೆ.ಆರ್ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಬ್ರಾಹ್ಮಣ ಸಮುದಾಯದ ಅಭಿವೃದ್ಧಿ, ಯುವಕರಿಗೆ ರಾಜಕೀಯ ಕ್ಷೇತ್ರದಲ್ಲಿ ಪ್ರೋತ್ಸಾಹ, ಸಮುದಾಯದ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಅಭ್ಯರ್ಥಿಗಳು ಯಾವುದೇ ಪಕ್ಷದವರಾದರೂ ಅವರನ್ನು ಬೆಂಬಲಿಸಲು ನಿರ್ಧರಿಸಲಾಯಿತು.
ಕೃಷ್ಣರಾಜ ಕ್ಷೇತ್ರದಲ್ಲಿನ ಮತದಾರರ ವಿವರ
ಕೃಷ್ಣರಾಜ ಕ್ಷೇತ್ರದಲ್ಲಿ 70 ಸಾವಿರ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ 22 ಸಾವಿರ, ಚಾಮರಾಜ ಕ್ಷೇತ್ರದಲ್ಲಿ 25 ಸಾವಿರ, ನರಸಿಂಹರಾಜ ಕ್ಷೇತ್ರದಲ್ಲಿ 8000 ಬ್ರಾಹ್ಮಣ ಮತದಾರರಿದ್ದಾರೆ. ಹೀಗೆ ಕೃಷ್ಣರಾಜ ಕ್ಷೇತ್ರದಲ್ಲಿ ಬ್ರಾಹ್ಮಣರ ಮತಗಲೇ ನಿರ್ಣಾಯಕವಾಗಿವೆ. ಕೃಷ್ಣರಾಜ ಕ್ಷೇತ್ರದಲ್ಲಿ ಶಾಸಕರಾದ ಎಸ್.ಎ. ರಾಮದಾಸ್ ಅವರ ವಿರುದ್ಧವಾಗಿ ಚುನಾವಣೆ ಬರುವ ಸಂದರ್ಭದಲ್ಲಿ ಟಿಕೆಟ್ ನೀಡದಂತೆ ಕೆಲವು ಮುಖಂಡರು ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೇಸರ ವ್ಯಕ್ತಪಡಿಸಿದ ಮುಖಂಡರು
ಬ್ರಾಹ್ಮಣ ಸಮುದಾಯದ ನಾಯಕರು ಎಲ್ಲಾ ಬ್ರಾಹ್ಮಣ ಸಂಘ ಸಂಸ್ಥೆಗಳ ಸಭೆ ಕರೆಯದೇ, ಪದಾಧಿಕಾರಿಗಳ ಬೆಂಬಲ ಅನುಮತಿ ಆಲಿಸದೇ ಸಭೆ ನಡೆಸಿ ನಿರ್ಣಯ ಕೈಗೊಂಡಿರುವುದು ಸರಿಯಲ್ಲ. ಇದರ ಹಿಂದೆ ಕಾಣದ ಕೈ ಬ್ರಾಹ್ಮಣ ಸಮುದಾಯವನ್ನು ರಾಜಕೀಯವಾಗಿ ತುಳಿಯುತ್ತಿದೆ. ಈ ಒಡೆದು ಆಳುವ ನೀತಿ ಮಾಡುತ್ತಿರುವುದು ಸರಿಯಲ್ಲ ಎಂದು ಬಹುತೇಕ ಮುಖಂಡರು ಬೇಸರ ವ್ಯಕ್ತಪಡಿಸಿದರು.
ಈ ಸಂಸರ್ಭದಲ್ಲಿ ಬ್ರಾಹ್ಮಣ ಯುವ ವೇದಿಕೆಯ ಅಧ್ಯಕ್ಷ ಮುಳ್ಳೂರು ಗುರುಪ್ರಸಾಸ್, ಗೌರವಾಧ್ಯಕ್ಷ ಶ್ರೀಧರಮೂರ್ತಿ, ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಸಂಘಟನಾ ಕಾರ್ಯದರ್ಶಿ ಅಜಯ್, ರಾಕೇಶ್, ವಿನಯ್ ಕಣಗಾಲ್, ನಿಶಾಂತ್, ಬ್ರಾಹ್ಮಣ ಮಂಡಳಿ ನಿರ್ದೇಶಕ ಎಂ.ಆರ್. ಬಾಲಕೃಷ್ಣ, ಶ್ರೀನಿವಾಸ ಭಾಷ್ಯಂ, ಗಣೇಶ್ ಪ್ರಸಾದ್, ಪ್ರದೀಪ್ ಪ್ರಸಾದ್, ಮಂಜು ಶಂಕರ್, ಶ್ರೀಕಾಂತ ಕಶ್ಯಪ್, ಚಕ್ರಪಾಣಿ, ಅರುಣ್, ಕಡಕೊಳ ಜಗದೀಶ್ ಹಾಗೂ ಇತರ ಮುಖಂಡರು ಇದ್ದರು.












Click it and Unblock the Notifications