CM Siddaramaiah: ಬಿಜೆಪಿ-ಜೆಡಿಎಸ್ ಕುತಂತ್ರಕ್ಕೆ ಹೆದರಲ್ಲ; ಸಿಎಂ ಸಿದ್ದರಾಮಯ್ಯ

ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು ಬಿಜೆಪಿ-ಜೆಡಿಎಸ್‌ ಷಡ್ಯಂತ್ರಕ್ಕೆ ಹೆದರಲ್ಲ. ಎಲ್ಲಾ ಷಡ್ಯಂತ್ರ ಸೋಲಿಸುತ್ತೇನೆ. ಅವರ ಆಟಗಳಿಗೆ ಜಗ್ಗಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮ ಸ್ವಕ್ಷೇತ್ರವಾದ ವರುಣಾದಲ್ಲಿ 501.81 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸಿದ ಅವರು, ವಿಪಕ್ಷಗಳ ವಿರುದ್ಧ ಗುಡುಗಿದರು.

ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ‌ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಗಿಂತ ಹೆಚ್ಚು ಮತ ಕೊಟ್ಟಿದ್ದೀರಿ. ನನಗೆ ವಿಶೇಷವಾಗಿ ಆಶೀರ್ವಾದ ಮಾಡಿದ್ದಕ್ಕಾಗಿ ಮತದಾರರಿಗೆ ಧನ್ಯವಾದ ಎಂದು ಹೇಳಿದರು.

will not be afraid of bjp and jds cm siddaramaiah

ವರುಣಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ಕೊಡಲಾಗುತ್ತಿದೆ. ನಾನೇನು ಉಪಕಾರ ಮಾಡುತ್ತಿಲ್ಲ. ಕ್ಷೇತ್ರದ ಪ್ರತಿನಿಧಿಯಾಗಿ ಅಭಿವೃದ್ಧಿ ಮಾಡುವ ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇನೆ ಎಂದರು.

ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೆಲ್ಲಾ ವರುಣ ಕ್ಷೇತ್ರ ಮಾತ್ರವಲ್ಲದೆ ರಾಜ್ಯದ ಎಲ್ಲ ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೇನೆ. ಹತ್ತು ಹಲವು ಭಾಗ್ಯಗಳನ್ನು ಕೊಡುವ ಜೊತೆಗೆ ಹಲವು ನಿಗಮಗಳ ಸಾಲ ಮನ್ನಾ ಮಾಡಿದ್ದೇನೆ. ಅಂಬೇಡ್ಕರ್ ಅವರ ಆಶಯದಂತೆ ಬಡವರಿಗೆ ಆರ್ಥಿಕ‌ ಶಕ್ತಿ ಕೊಡುವ ಕಾರ್ಯಕ್ರಮ ರೂಪಿಸಿದ್ದೇನೆ ಎಂದರು.

ಎರಡನೇ ಬಾರಿ ಮುಖ್ಯಮಂತ್ರಿ ಆದಾಗಲೂ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ, ಮಧ್ಯಮ ವರ್ಗದವರ ಬದುಕಿಗೆ ಆಸರೆ ಆಗುವ ಐದೂ ಗ್ಯಾರಂಟಿ ಯೋಜನೆಗಳನ್ನು ಜನಪರವಾಗಿ ರೂಪಿಸಿ ಜಾರಿ ಮಾಡಿದ್ದೇವೆ. ಪ್ರತೀ ವರ್ಷ ಈ ಗ್ಯಾರಂಟಿಗಳ ಮೂಲಕ 56 ಸಾವಿರ ಕೋಟಿ ರೂಪಾಯಿಗಳನ್ನು ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗೆ ದೇಶದಲ್ಲಿ ನುಡಿದಂತೆ ನಡೆದುಕೊಂಡಿರುವ ಪಕ್ಷ ನಿಮ್ಮ ಪಕ್ಷ. ನಿಮ್ಮದೇ ಕಾಂಗ್ರೆಸ್ ಪಕ್ಷ ಎಂದರು.

ಕೇಂದ್ರದಲ್ಲಿರುವ ಮೋದಿ ಸರ್ಕಾರವಾಗಲಿ, ರಾಜ್ಯದಲ್ಲಿದ್ದ ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಜನರ ಕಲ್ಯಾಣ ಮಾಡದೆ ಲೂಟಿ ಮಾಡಿದರು. ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ, ಬಡವರ ವಿರೋಧಿ. ಮೂರು ಬಾರಿ ಪ್ರಧಾನಿ ಆಗಿರುವ ಮೋದಿ ಕೊಟ್ಟ ಮಾತಿನಂತೆ ನಡೆದ ಉದಾಹರಣೆ ಇದೆಯಾ ಹೇಳಿ.‌ ಇಷ್ಟು ವರ್ಷ ಪ್ರಧಾನಿಯಾಗಿ ಮೋದಿ ಬಡಪರ ಪರವಾಗಿ ಒಂದೇ ಒಂದು ಯೋಜನೆ ಜಾರಿ ಮಾಡಿದ್ದಾರಾ ಎಂದು ಪ್ರಶ್ನಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ

ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಕಟ್ಟುವವರು ನಾವು. ನಾವು ನಮ್ಮ ಪಾಲಿನ ತೆರಿಗೆ ಪಡೆಯಲು ಭಿಕ್ಷೆ ಬೇಡಬೇಕಾ? ಇತ್ತೀಚೆಗೆ ಉತ್ತರ ಪ್ರದೇಶ, ಬಿಹಾರ ರಾಜ್ಯಗಳಿಗೆ ಅತಿ ಹೆಚ್ಚು ತೆರಿಗೆ ಪಾಲು ಕೊಟ್ಟಿರುವ ಕೇಂದ್ರಕ್ಕೆ ರಾಜ್ಯಕ್ಕೆ ಮಾತ್ರ ಕೇವಲ ಆರು ಸಾವಿರ ಕೋಟಿ ಕೊಟ್ಟು ಅನ್ಯಾಯ ಮಾಡಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಅನ್ಯಾಯದ ವಿರುದ್ದ ದೆಹಲಿಗೇ ಹೋಗಿ ನಾವು ಪ್ರತಿಭಟನೆ ಮಾಡಿದೆವು. ಬಿಜೆಪಿ-ಜೆಡಿಎಸ್ ಒಬ್ಬೇ ಒಬ್ಬ ಲೋಕಸಭಾ ಸದಸ್ಯ ರಾಜ್ಯದ ಪಾಲನ್ನು ಕೇಳುವ ಧೈರ್ಯ ಮಾಡಿಲ್ಲ. ಮಾಡುವುದೂ ಇಲ್ಲ, ಆದ್ದರಿಂದ ಕೇಂದ್ರದ ದ್ರೋಹದ ವಿರುದ್ಧ ರಾಜ್ಯದ ಜನತೆ ಧ್ವನಿಯೆತ್ತಬೇಕು ಎಂದರು.

ರಾಜ್ಯಕ್ಕೆ ವಿಶೇಷ ಅನುದಾನದ ಜೊತೆಗೆ ನೀರಾವರಿ ಯೋಜನೆಗೆ 5495 ಕೋಟಿ ನೀಡಲು ಶಿಫಾರಸ್ಸು ಮಾಡಿದ್ದ ನಿರ್ಮಲಾ ಸೀತಾರಾಮನ್ ಈ ಹಣವನ್ನೂ ಕೊಡಲಿಲ್ಲ. ರಾಜ್ಯದ ಫೆರಿಫೆರಲ್ ರಸ್ತೆಗೆ, ಕೆರೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ಕೊಡ್ತೀವಿ ಅಂದು ಘೋಷಿಸಿದರು, ಆದರೆ ನಯಾಪೈಸೆ ಕೊಡಲಿಲ್ಲ. ಈ ಅನ್ಯಾಯಗಳ ವಿರುದ್ಧ ರಾಜ್ಯದ ಜನತೆ ಮಾತನಾಡಿದರೆ ತಪ್ಪಾ, ನಾವು ಪ್ರತಿಭಟಿಸಿದರೆ ತಪ್ಪಾ ಎಂದರು.

ಸುಳ್ಳು ಆರೋಪ ಸಹಿಸಬೇಕಾ

ನಾನು ರಾಜಕೀಯಕ್ಕೆ ಬಂದು 45 ವರ್ಷ ಆಯ್ತು. ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ಹಿಂದುಳಿದ ವರ್ಗದ ನಾನು ಎರಡು ಬಾರಿ ಸಿಎಂ ಆದೆ ಅಂತ ಬಿಜೆಪಿಗೆ ಹೊಟ್ಟೆಕಿಚ್ಚು. ಇದನ್ನು ನೀವು ಸಹಿಸ್ತೀರಾ ಎಂದು ಮರು ಪ್ರಶ್ನಿಸಿದರು.

ನಾನು ಎರಡು ಬಾರಿ ಸಿಎಂ ಆಗಿ ಮೈಸೂರಲ್ಲಿ ಒಂದೂ ಮನೆ ಇಲ್ಲ. ಮರಿಸ್ವಾಮಿ ಮನೇಲಿ ಇದೀನಿ. ಕುವೆಂಪು ರಸ್ತೇಲಿ 3 ವರ್ಷದಿಂದ ಮನೆ ಕಟ್ಟುತ್ತಲೇ ಇದ್ದೇನೆ, ಇದುವರೆಗೂ ಪೂರ್ತಿ ಆಗಿಲ್ಲ. ನನಗೆ ವರ್ಚಸ್ಸು ಕೊಡುವವರು ನೀವು, ನಿಮ್ಮ ಎದುರಿಗೆ ಪ್ರಾಮಾಣಿಕವಾಗಿ ಇದ್ದೇನೆ ಎಂದರು. ನೀವೇ ನನ್ನ ಮಾಲೀಕರು. ನೀವೇ ನನ್ನ ಯಜಮಾನರು, ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+