ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

By Kiran B Hegde
|
Google Oneindia Kannada News

ಮೈಸೂರು, ಡಿ. 2: ಯುಪಿಎ ಸರ್ಕಾರ ಜಾರಿಗೊಳಿಸಿದ್ದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ನಿಧಿಯಲ್ಲಿ ಕಡಿತಗೊಳಿಸಲಾಗುತ್ತದೆ ಎಂಬ ವದಂತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಯೋಜನೆಯಡಿ ಕರ್ನಾಟಕಕ್ಕೆ ನೀಡುವ ಅನುದಾನದಲ್ಲಿ ಕಡಿತಗೊಳಿಸಿದರೆ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಮೈಸೂರು ನಗರಕ್ಕೆ ಮಂಗಳವಾರ ಬಂದಾಗ ಪತ್ರಕರ್ತರೊಂದಿಗೆ ಈ ಕುರಿತು ಮಾತನಾಡಿದ ಅವರು, ಉದ್ಯೋಗ ಖಾತ್ರಿ ಯೋಜನೆಯಡಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರವು ನೀಡುತ್ತಿದ್ದ ಅನುದಾನವು ಕಡಿತಗೊಳ್ಳುವ ನಿರೀಕ್ಷೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು. [ಆಂಗ್ಲ ಮಾಧ್ಯಮ ಅನುಮತಿಗೆ ಶಾಲೆಗಳ ಪಟ್ಟು]

ಈ ಯೋಜನೆಯಿಂದ ಗ್ರಾಮದಲ್ಲಿ ಜನರಿಗೆ ವರ್ಷಕ್ಕೆ 100 ದಿನಗಳ ಕಾಲ ಕೆಲಸ ಸಿಗುತ್ತಿದೆ ಎಂದು ಸಮರ್ಥಿಸಿಕೊಂಡರು.

siddu

ಸುಪ್ರೀಂ ಕೋರ್ಟ್‌ಗೆ ಹೋಗ್ತೇವೆ: ಮಕ್ಕಳಿಗೆ ಯಾವ ಮಾಧ್ಯಮದಲ್ಲಿ ಶಿಕ್ಷಣ ನೀಡಬೇಕೆಂಬುದನ್ನು ನಿರ್ಧರಿಸುವುದು ಪಾಲಕರ ಹಕ್ಕು ಎಂದು ಆದೇಶದ ಕುರಿತು ಕರ್ನಾಟಕ ಸರ್ಕಾರ ಮತ್ತೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. [ಕನ್ನಡ ಮಾಧ್ಯಮ ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್]

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಬಾಕಿ ಉಳಿದಿರುವ ಮಸೂದೆಗಳನ್ನು ಜಾರಿಗೆ ತರಲು ಯೋಜಿಸಲಾಗಿದೆ ಎಂದು ತಿಳಿಸಿದರು.

ನಂತರ ಸಿದ್ದರಾಮಯ್ಯ ಅವರು ತಮ್ಮ ಕ್ಷೇತ್ರವಾದ ವರುಣಾದಲ್ಲಿ 23 ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. [ಸುಪ್ರೀಂ ತೀರ್ಪು ಸ್ವಾಗತಾರ್ಹ: ಕುಸ್ಮಾ]

English summary
Chief Minister Siddaramaiah said the state government will register a strong protest with the centre if the allocation of funds to the state under Mahatma Gandhi National Rural Employment Guarantee Act scheme is reduced.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X