ಮೈಸೂರಿನಲ್ಲಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ತಾಯಿ
ಮೈಸೂರು, ಜನವರಿ 24:ತನ್ನ ಅವಳಿ ಮಕ್ಕಳಿಗೆ ನೇಣು ಹಾಕಿದ ತಾಯಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಬಂಡಿಪಾಳ್ಯದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಬಂಡಿಪಾಳ್ಯದಲ್ಲಿ ವಾಸವಿರುವ ಆಶಾ ಗೌಡ(30), ಶೌರ್ಯ ಗೌಡ(8), ಸುಪ್ರೀತ್ ಗೌಡ(8) ಎಂದು ಗುರುತಿಸಲಾಗಿದೆ. ಆಶಾ ಪತಿ ಮಹೇಶ್ ಎಪಿಎಂಸಿಯಲ್ಲಿ ಹಮಾಲಿ ಕೆಲಸ ನಿರ್ವಹಿಸುತ್ತಿದ್ದರು. ಪತಿ-ಪತ್ನಿ ಅನ್ಯೋನ್ಯವಾಗಿಯೇ ಇದ್ದರು ಎನ್ನಲಾಗಿದೆ.

ಪತಿ-ಪತ್ನಿಯಲ್ಲಿ ವೈಮನಸ್ಯ ಇರಲಿಲ್ಲ. ವೈಯಕ್ತಿಕ ಕಾರಣಗಳಿಂದ ನೇಣಿಗೆ ಶರಣಾಗಿರಬೇಕೆಂದು ಹೇಳಲಾಗುತ್ತಿದೆ. ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜಯಪ್ರಕಾಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.













Click it and Unblock the Notifications