ಗೃಹಲಕ್ಷ್ಮಿ ಹಣದಿಂದ ಸ್ವ-ಉದ್ಯೋಗ ಪ್ರಾರಂಭಿಸಿ ಬದುಕು ಕಟ್ಟಿಕೊಂಡ ಮೈಸೂರಿನ ಮಹಿಳೆಯರು
ಮೈಸೂರು, ಸೆಪ್ಟೆಂಬರ್ 24: ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು (ಸೆಪ್ಟೆಂಬರ್ 24) ಮಂಗಳವಾರ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತಂತೆ ಪ್ರಗತಿ ಪರಿಶೀಲನ ಸಭೆ ನಡೆದಿದೆ. ಈ ವೇಳೆ ಸರ್ಕಾರದಿಂದ ಪ್ರತಿ ತಿಂಗಳು ಪಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯಿಂದ ತಮಗಾದ ಪ್ರಯೋಜನವನ್ನು ಸಭೆಯಲ್ಲಿ ತಿಳಿಸಿದರು.
ನನಗೆ ಬಂದಂತಹ 5 ತಿಂಗಳ ಗೃಹಲಕ್ಷ್ಮಿ ಹಣವನ್ನು ಸಂಗ್ರಹಿಸಿ, ಅದರಲ್ಲಿ ಇಂದು ವಿವಿಧ ರೀತಿಯ ಬಟ್ಟೆ ಬ್ಯಾಗ್ ಗಳನ್ನು ತಯಾರಿಸುವ ಮೂಲಕ ಸ್ವಂತ ಉದ್ಯೋಗವನ್ನು ಪ್ರಾರಂಭಿಸಿ ಬದುಕನ್ನು ಕಟ್ಟಿಕೊಂಡೆ. ಇದರಿಂದ ದಿನಕ್ಕೆ ಸುಮಾರು 350 ರೂ. ಲಾಭ ಗಳಿಸುತ್ತಿದ್ದೇನೆ. ಒಟ್ಟಾರೆಯಾಗಿ ನಮ್ಮ ಕುಟುಂಬಕ್ಕೆ ಗೃಹಲಕ್ಷ್ಮಿ ಹಾಗೂ ಸರ್ಕಾರದ ಎಲ್ಲಾ ಗ್ಯಾರಂಟಿ ಯೋಜನೆಗಳು ಬಹಳ ಉಪಯುಕ್ತವಾಗಿವೆ ಎಂದು ಕುಕ್ರಹಳ್ಳಿ ಗ್ರಾಮದ ಗ್ಯಾರಂಟಿ ಯೋಜನೆಗಳ ಫಲಾನುಭವಿಯಾದ ಲಕ್ಷ್ಮೀ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಗ್ಯಾರಂಟಿ ಯೋಜನೆಗಳ ಮತ್ತೊಬ್ಬ ಫಲಾನುಭವಿಯಾದ ನಜ್ಮಾ ಕೌಸರ್ ಮಾತನಾಡಿ, ಮೂಲತಃ ಗೃಹಿಣಿಯಾಗಿರುವ ನಾನು ಮನೆಯ ದಿನನಿತ್ಯದ ಖರ್ಚು ಹಾಗೂ ವೈಯಕ್ತಿಕ ಖರ್ಚಿನ ಹಣಕ್ಕಾಗಿ ನನ್ನ ಪತಿಯನ್ನೇ ಅವಲಂಬಿಸಿದ್ದೆ. ಆದರೆ ಗೃಹಲಕ್ಷ್ಮಿ ಯೋಜನೆ ಬಂದಾಗಿನಿಂದ ನನ್ನ ಗೃಹಲಕ್ಷ್ಮಿ ಹಣವನ್ನು ಉಳಿತಾಯ ಮಾಡಿ ಹೊಲಿಗೆ ಯಂತ್ರವನ್ನು ಖರೀದಿಸಿ, ಪ್ರಸ್ತುತ ನನ್ನ ಸ್ವಂತ ಉದ್ಯೋಗವನ್ನು ಪ್ರಾರಂಭಿಸಿದ್ದೇನೆ ಎಂದರು.
ಅಲ್ಲದೇ ನನ್ನ ತಂದೆ ಮರಣ ಹೊಂದಿದಾಗ ನನ್ನ ಅಮ್ಮನ ಯೋಗಕ್ಷೇಮ ವಿಚಾರಿಸಲು ಶಕ್ತಿ ಯೋಜನೆಯ ಮೂಲಕ 4 ತಿಂಗಳು ಸುಮಾರು 30-40 ಕಿ ಮೀ ಉಚಿತ ಬಸ್ ಪ್ರಯಾಣ ಮಾಡಿದ್ದೇನೆ ಇದರಿಂದ 25 ಸಾವಿರ ಹಣವನ್ನು ಉಳಿಸಿದ್ದೇನೆ. ಪ್ರಸ್ತುತ ನಾನು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಲ್ಲಿ 4 ಗ್ಯಾರಂಟಿಗಳ ಉಪಯೋಗವನ್ನು ಪಡೆಯುತ್ತಿದ್ದೇನೆ. ಈ ಗ್ಯಾರಂಟಿಗಳು ಪ್ರತಿಯೊಬ್ಬ ಬಡಜನರ ಜೀವನಕ್ಕೆ ಆಧಾರ ಸ್ತಂಭವಾಗಿವೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರ್‌ನಾಥ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನರಿಗಾಗಿಯೇ ಜಾರಿ ಮಾಡಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಪ್ರತಿಯೊಬ್ಬರಿಗೂ ತಲುಪುವಂತೆ ಮಾಡುವುದು ಎಲ್ಲಾ ಅಧಿಕಾರಿಗಳ ಜವಾಬ್ದಾರಿ. ಪ್ರಸ್ತುತ ಗ್ಯಾರೆಂಟಿ ಯೋಜನೆಗಳ ಅನುಷ್ಠಾನದಲ್ಲಿ ಮೈಸೂರು 5ನೇ ಸ್ಥಾನದಲ್ಲಿದ್ದು, ಮುಂಬರುವ ದಿನಗಳಲ್ಲಿ ಮೊದಲನೇ ಸ್ಥಾನಕ್ಕೆ ಬರುವಂತೆ ಮಾಡಬೇಕು. ಮುಖ್ಯಮಂತ್ರಿಗಳ ಜಿಲ್ಲೆಯಾದ್ದರಿಂದ ಜವಾಬ್ದಾರಿ ಹಾಗೂ ನಿರೀಕ್ಷೆ ಹೆಚ್ಚಾಗಿರುತ್ತದೆ. ಅದನ್ನು ಅರಿತು ಅಧಿಕಾರಿಗಳು ಕೆಲಸ ಮಾಡಬೇಕು ಎಂದರು.
ಜಿಲ್ಲಾ ಮಟ್ಟ, ತಾಲೂಕು ಮಟ್ಟದ ಹಾಗೂ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಸ್ಥಳಗಳಿಗೆ ಭೇಟಿ ನೀಡಿ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿದೆಯೇ ಎಂಬುದರ ಮಾಹಿತಿ ಕಲೆಹಾಕಬೇಕು. ಒಂದು ವೇಳೆ ಜನರಿಗೆ ತಲುಪುತ್ತಿಲ್ಲವಾದರೆ ಅದರ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಯಾರೊಬ್ಬರೂ ವಂಚಿತರಾಗದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿದಾಗ ಮಾತ್ರ ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಸಾಧ್ಯ ಎಂದು ಹೇಳಿದರು.
ಅನ್ನಭಾಗ್ಯ ಎಂಬುದು ಒಂದು ಮಹತ್ವದ ಯೋಜನೆಯಗಿದ್ದು, ಇದರಿಂದ ಎಷ್ಟೋ ಬಡಜನರಿಗೆ ಆಹಾರ ದೊರಕುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಅಲ್ಲಿನ ಅಧಿಕಾರಿಗಳು ಸಾರ್ವಜನಿಕರಿಗೆ ಪಡಿತರ ತೂಕದಲ್ಲಿ ಮೋಸ ಮಾಡುತ್ತಿರುವುದು ಹಾಗೂ ಸಾರ್ವಜನಿಕರಿಗೆ ಪಡಿತರ ವಿತರಿಸಲು ನಿರ್ದಿಷ್ಟ ಸಮಯ ನಿಗಧಿ ಮಾಡದೆ ತಮ್ಮ ಬಿಡುವಿನ ವೇಳೆಯಲ್ಲಿ ವಿತರಿಸುವಂತೆ ಹೇಳುತ್ತಿರುವುದು ಕಂಡು ಬರುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳು ಕ್ರಮ ಕೈಗೊಂಡು ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬೇಕು. ಪಡಿತರಕ್ಕೆ ಸಂಬಂಧಿಸಿದಂತೆ ಫಲಾನುಭವಿಗಳ ಬಯೋ ಮೆಟ್ರಿಕ್ ನಲ್ಲಿ ತೊಂದರೆ ಉಂಟಾದರೆ ಅದಕ್ಕೆ ಪರ್ಯಾಯ ಮಾರ್ಗವನ್ನು ನೀಡಿ ಪ್ರತಿಯೊಬ್ಬರಿಗೂ ಪಡಿತರ ದೊರಕುವಂತೆ ಮಾಡಬೇಕು ಎಂದು ಸೂಚಿಸಿದರು.
ಮಹಿಳೆಯರಿಗೆ ಬಹಳ ಉಪಯುಕ್ತವಾಗಿರುವಂತಹ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚು ಪ್ರಚಾರ ಮಾಡಿ ಇನ್ನು ಹೆಚ್ಚಿನ ಫಲಾನುಭವಿಗಳಿಗೆ ಇದರ ಪ್ರಯೋಜನ ಸಿಗುವಂತೆ ಮಾಡಬೇಕು. ಕೆಲವು ತಾಂತ್ರಿಕ ದೋಷಗಳಿಂದ ಕಳೆದ 2 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ ಮಾಡಲಾಗಿಲ್ಲ. ಈ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸಿ ಶೀಘ್ರದಲ್ಲೇ 2000 ರೂ. ಗಳನ್ನು ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಇನ್ನೂ ಹೆಚ್ಚಿನ ಪ್ರಚಾರದ ಅವ್ಯಕತೆ ಇದ್ದು, ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಬೇಕು. ಈ ಹಿನ್ನೆಲೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ, ವಿದ್ಯಾಸಂಸ್ಥೆಗಳಲ್ಲಿ, ಆಸ್ಪತ್ರೆಗಳಲ್ಲಿ, ಬಸ್ ಹಾಗೂ ರೈಲ್ವೆ ನಿಲ್ದಾಣ ಸೇರಿದಂತೆ ಸಾರ್ವಜನಿಕರು ಹೆಚ್ಚಾಗಿ ಸಂಚಾರಿಸುವ ಇತ್ಯಾದಿ ಸ್ಥಳಗಳಲ್ಲಿ ಹೊರ್ಡಿಂಗ್, ಪೋಸ್ಟರ್ಸ್ ಗಳನ್ನು ಹಾಕುವ ಮೂಲಕ ಅಲ್ಲದೆ ಶಾಲಾ-ಕಾಲೇಜುಗಳಲ್ಲಿ ಸಂವಾದಗಳನ್ನು ಏರ್ಪಡಿಸಿ ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರದ ಯಾವುದೇ ಯೋಜನೆಯಾದರೂ ಸಹ ಯಶಸ್ವಿಯಾಗಬೇಕೆಂದರೆ ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಗಳ ಸಹಕಾರ ಬಹಳ ಮುಖ್ಯವಾಗಿದ್ದು, ಈ ಸಂಬಂಧ ಎಲ್ಲರೂ ಸರ್ಕಾರದೊಂದಿಗೆ ಸಹಕರಿಸಿ, ಬಡಜನರ ಕಷ್ಟಗಳನ್ನು ಪರಿಹರಿಸಲು ಮುಂದಾಗಬೇಕು. ಇಲ್ಲವಾದರೆ ಅಭಿವೃದ್ಧಿ ಆಗಲು, ಸಾರ್ವಜನಿಕರ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ ಹಾಗಾಗಿ ಎಲ್ಲರೂ ಒಗ್ಗಟ್ಟಾಗಿ ಯೋಜನೆಗಳ ಯಶಸ್ವಿಗೆ ಕೆಲಸ ಮಾಡಬೇಕು ಎಂದು ಹೇಳಿದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications