ಮಹಿಳೆಯರಿಗೆ ಅರ್ಧಕೂಲಿ, ಪೂರ್ತಿ ಸಂಬಳ: ಏನಿದು ಹೊಸ ಅಭಿಯಾನ?
ಮೈಸೂರು, ಏಪ್ರಿಲ್ 02: ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಜಾರಿಗೊಳಿಸಲಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮ-ನರೇಗಾ) ಯೋಜನೆಯಲ್ಲಿ ಮಹಿಳಾ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರವು ಸ್ತ್ರೀ ಚೇತನ ಯೋಜನೆಯನ್ನು ಜಾರಿಗೊಳಿಸಿದ ಬೆನ್ನಲ್ಲೇ ಮೈಸೂರು ಜಿಲ್ಲೆಯಲ್ಲೂ ಅಭಿಯಾನ ಪ್ರಾರಂಭಗೊಂಡಿದೆ.
ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಮಹಿಳೆಯರ ಭಾಗವಹಿಸಿಕೆ ಹೆಚ್ಚಿಸಲು ಸ್ತ್ರಿ ಚೇತನಾ ಅಭಿಯಾನದ ಮೂಲಕ ಪ್ರಯತ್ನ ನಡೆಸಿದೆ. ಮ-ನರೇಗಾ ಸಂಪೂರ್ಣವಾಗಿ ಮಹಿಳಾ ಸ್ನೇಹಿ ಎಂಬುದಾಗಿ ಪರಿಚಯಿಸುವ ಉದ್ದೇಶವನ್ನು ಸ್ತ್ರೀ ಚೇತನ ಅಭಿಯಾನ ಒಳಗೊಂಡಿದೆ. ಮ-ನರೇಗಾದಲ್ಲಿ ಶೇ.50ರಷ್ಟಿರುವ ಮಹಿಳಾ ಕೂಲಿಕಾರ್ಮಿಕರ ಸಂಖ್ಯೆಯನ್ನು ಶೇ.60ಕ್ಕೆ ಹೆಚ್ಚಿಸುವುದು ಅಭಿಯಾನದ ಉದ್ದೇಶವಾಗಿದೆ.

ಮಾತ್ರವಲ್ಲದೇ, ಮೂರು ತಿಂಗಳು ಮಹಿಳಾ ಕೂಲಿಕಾರರಿಗೆ ನಿರಂತರ ಕೆಲಸ ಆದ್ಯತೆ ನೀಡುವುದು. ತಾಯಿ ಮತ್ತು ಮಕ್ಕಳಿಗೆ ಅನುಕೂಲವಾಗುವಂತೆ ಮಕ್ಕಳಿಗಾಗಿ ಕೂಸಿನ ಮನೆ, ವೈಯಕ್ತಿಕ ಕಾಮಗಾರಿಗಳಾದ ಇಂಗುಗುಂಡಿ, ವೈಯಕ್ತಿಕ ಶೌಚಾಲಯ, ಪೌಷ್ಟಿಕ ಕೈತೋಟ, ದನ ಮತ್ತು ಕುರಿ ಕಾಮಗಾರಿಗಳನ್ನು ನೀಡುವುದಾಗಿದೆ. ಮ-ನರೇಗಾ ಯೋಜನೆ ಮೂಲಕ ಮಹಿಳಾ ಸಬಲೀಕರಣ ಕೈಗೊಳ್ಳುವ ಬಹುಮುಖ್ಯ ಉದ್ದೇಶವನ್ನು ಸ್ತ್ರೀ ಚೇತನ ಕಾರ್ಯಕ್ರಮ ಹೊಂದಿದೆ.
ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿಯ ಮಾರ್ಗದರ್ಶನದ ಮೂಲಕ ಸ್ಥಳೀಯ ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಿವೆ. ಮ-ನರೇಗಾ ಕಾಮಗಾರಿಗಳಲ್ಲಿ ಪ್ರಸ್ತುತ ಮಹಿಳಾ ಪಾಲ್ಗೊಳ್ಳುವಿಕೆಯ ಪ್ರಮಾಣವು ರಾಜ್ಯ ಮಟ್ಟದಲ್ಲಿ ಶೇ 53.51ರಷ್ಟಿದ್ದರೆ ಮೈಸೂರು ಶೇ.50ರಷ್ಟಿದ್ದು, ಅದನ್ನು ವೃದ್ಧಿಸುವ ಉದ್ದೇಶವಿದೆ.

ಸ್ತ್ರೀ ಚೇತನ ಅಭಿಯಾನವು ಮೂರು ತಿಂಗಳವರೆಗೆ ಜಾರಿಯಲ್ಲಿರಲಿದ್ದು, ಈ ಸಂದರ್ಭದಲ್ಲಿ ನರೇಗಾ ಯೋಜನೆಯಲ್ಲಿ ಮಹಿಳೆಯರಿಗೆ ಇರುವ ಸವಲತ್ತು ಮತ್ತು ಸೌಲಭ್ಯಗಳ ಬಗ್ಗೆ ಮನದಟ್ಟು ಮಾಡಿಕೊಡಲಾಗುತ್ತದೆ. ಈ ಮೂಲಕ ಮ-ನರೇಗಾ ಯೋಜನೆಯಲ್ಲಿ ಮತ್ತಷ್ಟು ಮಹಿಳೆಯರು ಪಾಲ್ಗೊಳ್ಳುವಂತೆ ಉತ್ತೇಜಿಸುವ ನೂತನ ಪ್ರಯತ್ನಕ್ಕೆ ಜಿಲ್ಲಾ ಪಂಚಾಯಿತಿ ಮುಂದಾಗಿರುವುದು ವಿಶೇಷವಾಗಿದೆ.
ಅರ್ಧಕೂಲಿ, ಪೂರ್ತಿ ಸಂಬಳ
ರಾಷ್ಟ್ರೀಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡುವ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಆಯಾ ದಿನದ ನಿಗದಿತ ಅವಧಿಯಲ್ಲಿ ಅರ್ಧ ಕೆಲಸ ನಿರ್ವಹಿಸಿದರೂ ಪೂರ್ತಿ ಕೂಲಿ ಕೈಸೇರಲಿದೆ. ಅದರಂತೆ ವಿಶೇಷಚೇತನರು ಮತ್ತು ಹಿರಿಯ ನಾಗರಿಕರಿಗೆ ಕೆಲಸದಲ್ಲಿ ಶೇ.50ರಷ್ಟು ರಿಯಾಯಿತಿ ಘೋಷಿಸಿರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗರ್ಭಿಣಿಯರು ಹಾಗೂ ಬಾಣಂತಿಯರ ರಿಯಾಯಿತಿ ನೀಡಿದೆ. ನರೇಗಾ ಕೆಲಸ ಮಾಡುವ 6 ತಿಂಗಳು ತುಂಬಿದ ಗರ್ಭಿಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನದ ನಂತರದ ಆರು ತಿಂಗಳವರೆಗೆ ನಿಗದಿತ ಕೂಲಿ ಪಡೆಯಲು ಕೆಲಸದಲ್ಲಿ ಶೇ.50ರಷ್ಟು ರಿಯಾಯತಿ ಸೌಲಭ್ಯ ನೀಡಲಾಗುತ್ತಿದೆ.
ಮಹಿಳಾ ಸಬಲೀಕರಣದ ಜೊತೆಗೆ ಮ-ನರೇಗಾದಡಿ ಮಹಿಳಾ ಕೂಲಿಕಾರರ ಪಾಲ್ಗೊಳ್ಳುವಿಕೆಯನ್ನು ಶೇ.60ಕ್ಕೆ ಹೆಚ್ಚಿಸುವ ಉದ್ದೇಶದಿಂದ ಸ್ತ್ರೀ ಚೇತನ ಅಭಿಯಾನ ಎಂಬ ಮಹಿಳಾ ಸ್ನೇಹಿ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ. ಮೈಸೂರು ಜಿಲ್ಲೆಯ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಅಭಿಯಾನದಲ್ಲಿ ಭಾಗವಹಿಸಿ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು. ಅರ್ಹ ಮಹಿಳೆಯರು ಯೋಜನೆ ಸದುಪಯೋಗಪಡಿಸಿಕೊಳ್ಳುವ ಮೂಲಕ ಮಹಿಳಾ ಸಬಲೀಕರಣಕ್ಕೆ ಕೈ ಜೋಡಿಸಲಿ ಎನ್ನುವುದು ಸ್ಥಳೀಯ ಅಧಿಕಾರಿಗಳ ಆಶಯವಾಗಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications