ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮಹಿಳೆಯರದ್ದೇ ಮೇಲುಗೈ

|
Google Oneindia Kannada News

ಮೈಸೂರು, ಫೆಬ್ರವರಿ 2: ರಾಜ್ಯ ರಾಜಕೀಯದಲ್ಲಿ ಬದಲಾವಣೆ ತರಬಹುದಾದಂತಹ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಇದಕ್ಕೆ ಪುಷ್ಟಿ ನೀಡುವಂತೆ ಈ ಬಾರಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ಮಹಿಳಾ ಮತದಾರರದ್ದೇ ಮೇಲುಗೈ ಸಾಧಿಸಿದ್ದಾರೆ.

ಮೈಸೂರು ಹಾಗೂ ಕೊಡಗು ಜಿಲ್ಲಾಡಳಿತ ಈಗಾಗಲೇ ವಿಶೇಷ ಪರಿಷ್ಕರಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದೆ ಈ ಎರಡೂ ಜಿಲ್ಲೆಗಳ ಲೋಕಸಭಾ ಕ್ಷೇತ್ರ ವ್ಯಾಪ್ತಿ ಸೇರಿ 9.28 ಲಕ್ಷ ಪುರುಷರು ಹಾಗೂ 9.30 ಲಕ್ಷ ಮಹಿಳೆಯರು ಇದ್ದಾರೆ. ಮೈಸೂರು ಜಿಲ್ಲೆಯ ಆರು ಹಾಗೂ ಕೊಡಗು ಜಿಲ್ಲೆಯ ಎರಡು ಕ್ಷೇತ್ರ ಸೇರಿ ಒಟ್ಟು ಎಂಟು ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡಿದೆ.

ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿದೆ ಮೈಸೂರು-ಕೊಡಗು ಕ್ಷೇತ್ರ:ಯಾರ ಲೆಕ್ಕಾಚಾರ ಹೇಗಿದೆ? ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿದೆ ಮೈಸೂರು-ಕೊಡಗು ಕ್ಷೇತ್ರ:ಯಾರ ಲೆಕ್ಕಾಚಾರ ಹೇಗಿದೆ?

ಮೈಸೂರು ಜಿಲ್ಲೆಗೆ ಸೇರಿರುವ ಲೋಕಸಭಾ ವ್ಯಾಪ್ತಿಯಲ್ಲಿ ಕೃಷ್ಣರಾಜ, ಚಾಮರಾಜ, ನರಸಿಂಹರಾಜ ಕ್ಷೇತ್ರಗಳು ಹಾಗೂ ಕೊಡಗು ಜಿಲ್ಲೆಯ ಮಡಿಕೇರಿ ಕ್ಷೇತ್ರದಲ್ಲಿ ಮಹಿಳೆಯರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ, ಈ ಬಾರಿ ಚುನಾವಣೆಯ ಫಲಿತಾಂಶ ನಿರ್ಧರಿಸುವಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸುವ ನಿರೀಕ್ಷೆ ಇದೆ. ಮಹಿಳಾ ಮತದಾರರನ್ನು ಸೆಳೆಯಲು ಸ್ಪರ್ಧಿಗಳು ಕಸರತ್ತು ನಡೆಸಬೇಕಿದೆ.

Women voters are Superior in Mysuru kodagu lokasabha constituency

2014ರ ಚುನಾವಣೆಯಲ್ಲಿ 17.21 ಲಕ್ಷ ಮತದಾರರು ಇದ್ದರು. ಶೇ 50.37ರಷ್ಟು ಪುರುಷರು ಹಾಗೂ ಶೇ 49.62 ಮಹಿಳೆಯರಿದ್ದರು. ಈ ಪೈಕಿ 11.60 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಶೇ.67.30ರಷ್ಟು ಮತದಾನವಾಗಿತ್ತು. ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪ್ರತಾಪಸಿಂಹ ಮೊದಲ ಅವಕಾಶದಲ್ಲಿ 5.04 ಲಕ್ಷ ಮತ ಪಡೆದು (ಶೇ 43.46) ಜಯಶಾಲಿಯಾಗಿದ್ದರು.

ನಾನು ಕೂಡ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ:ಮಾಜಿ ಶಾಸಕ ವಾಸು ನಾನು ಕೂಡ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ:ಮಾಜಿ ಶಾಸಕ ವಾಸು

ಹಿಂದಿನ ಚುನಾವಣೆಗೆ ಹೋಲಿಸಿದರೆ ಈಗ ಸುಮಾರು 1.37 ಲಕ್ಷ ಮತದಾರರು ಹೆಚ್ಚಿದ್ದಾರೆ. ಹೆಸರು ನೋಂದಾವಣಿಗೆ ಇನ್ನೂ ಅವಕಾಶವಿದೆ. ಏಪ್ರಿಲ್-ಮೇನಲ್ಲಿ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಹಳೆ ಮೈಸೂರು ಭಾಗದ ಮುಖಂಡರೊಂದಿಗೆ ಸಿದ್ದರಾಮಯ್ಯ ಸಭೆ ಹಳೆ ಮೈಸೂರು ಭಾಗದ ಮುಖಂಡರೊಂದಿಗೆ ಸಿದ್ದರಾಮಯ್ಯ ಸಭೆ

1951ರಿಂದ 2014ರವರೆಗೆ ನಡೆದ 16 ಚುನಾವಣೆಗಳಲ್ಲಿ ಮೈಸೂರು ಕ್ಷೇತ್ರದಿಂದ ಒಬ್ಬ ಮಹಿಳೆ ಮಾತ್ರ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಸ್ಪರ್ಧಿಸಿದ ಮಹಿಳೆಯರ ಸಂಖ್ಯೆಯೂ ಕಡಿಮೆ. ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಪುತ್ರಿ ಚಂದ್ರಪ್ರಭಾ ಅರಸ್ 1991ರಲ್ಲಿ ಸ್ಪರ್ಧಿಸಿ ಯಶಸ್ವಿಯಾಗಿದ್ದರು. ಬಿಜೆಪಿ ಅಭ್ಯರ್ಥಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಎದುರು ಜಯ ಗಳಿಸಿದ್ದರು.

English summary
This time the women's voters Superior in the Mysuru -Kodagu lokasaba constituency .District Administration have already announced a final list of final voters, including 9.28 lakh men and 9.30 lakh women in the Lok Sabha constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X