ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಗಮನ ಸೆಳೆದ ವಿಶ್ವ ಪ್ರವಾಸೋದ್ಯಮ ಜಾಥಾ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್‌, 27: ಮೈಸೂರು ನಗರದ ಅರಮನೆಯ ಮುಂಭಾಗದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮದ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು.

ವಿಶ್ವ ಪ್ರವಾಸೋದ್ಯಮ ಜಾಥಾಕ್ಕೆ ಚಾಲನೆ ಬಳಿಕ ಮಾತನಾಡಿದ ಸಚಿವರು, ಟ್ರಾವೆಲ್ಸ್ ಅಸೋಸಿಯೇಷನ್, "ಹೋಟೆಲ್ ಮಾಲೀಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿರುವ ಈ ಮೆರವಣಿಗೆ ಪ್ರವಾಸಿಗರನ್ನು ಸೆಳೆಯಲು ಸಹಕಾರಿಯಾಗಲಿದೆ. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆ ಮಾಡುತ್ತಿರುವುದರಿಂದ ಪ್ರವಾಸೋದ್ಯಮಕ್ಕೆ ಚೇತರಿಕೆ ಸಿಗಲಿದೆ. ದೇಶ ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಾಲನೆ ನೀಡುತ್ತಿರುವುದಕ್ಕೆ ತುಂಬಾ ಖುಷಿ ಆಗುತ್ತಿದೆ. ಗೋಲ್ಡ್ ಪಾಸ್ ಬಗ್ಗೆ ರೂಪುರೇಷೆಗಳನ್ನು ಮಾಡಿದ ನಂತರ ಸಭೆಯಲ್ಲಿ ತಿರ್ಮಾನ ಕೈಗೊಂಡು ತಿಳಿಸಲಾಗುವುದು," ಎಂದರು.

ಮೈಸೂರು ದಸರಾ 2022: ದಸರಾ ಬೆಳಕಿನ ವೈಭವಕ್ಕೆ ಚಾಲನೆಮೈಸೂರು ದಸರಾ 2022: ದಸರಾ ಬೆಳಕಿನ ವೈಭವಕ್ಕೆ ಚಾಲನೆ

ನಂತರ ಈ ಬಗ್ಗೆ ಜಿ.ಟಿ.ದೇವೇಗೌಡ ಅವರು ಮಾತನಾಡಿ, "ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ದಸಾರ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ಈ ಬಾರಿ ಅದ್ದೂರಿಯಾಗಿ ಹಾಗೂ ಯಶಸ್ವಿಯಾಗಿ ಆಚರಿಸಬೇಕು ಎಂದು ಕಳೆದ ವರ್ಷ ಘೋಷಣೆ ಮಾಡಿದ್ದರಂತೆ ನಡೆದುಕೊಳ್ಳುತ್ತಿದ್ದಾರೆ. ಈ ವರ್ಷ ಯೋಗಾ ದಿನವನ್ನು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದು ಆಚರಿಸಿದ್ದರು. ಈ ಬಾರಿಯ ದಸಾರ ಮಹೋತ್ಸವವನ್ನು ರಾಷ್ಟ್ರಪತಿಗಳು ಉದ್ಘಾಟಿಸಿದ್ದರಿಂದ ವಿಶ್ವಮಟ್ಟದಲ್ಲಿ ಮೈಸೂರನ್ನು ಹಾಗೂ ಮೈಸೂರು ದಸರಾವನ್ನು ನೋಡುವಂತೆ ಮಾಡಿದೆ. ದಸರಾ ಮಹೋತ್ಸವವನ್ನು ಎಲ್ಲರೂ ಸಂಭ್ರಮ, ಸಡಗರದಿಂದ ಆಚರಿಸುವ ಮೂಲಕ ಯಶಸ್ವಿಗೊಳಿಸೋಣ," ಎಂದರು.

world tourism jatha attracted attention in Mysuru

ಪ್ರವಾಸಿಗರ ಗಮನ ಸೆಳೆದ ಕಲಾ ತಂಡಗಳು:

ಇದೇ ಸಂದರ್ಭದಲ್ಲಿ ನಾನಾ ರಾಜ್ಯಗಳ ಸಂಸ್ಕೃತಿಗಳನ್ನು ಬಿಂಬಿಸುವ ವೇಷಭೂಷಣಗಳು ಎಲ್ಲರ ಗಮನ ಸೆಳೆದವು. ಬ್ಯಾಂಡ್‍ ಸೆಟ್, ಡೊಳ್ಳು ಕುಣಿತ, ಕಂಸಾಳೆ ನೃತ್ಯ, ತಮಟೆ, ಹುಲಿವೇಷ, ಕಲಾ ತಂಡಗಳು ಮೆರವಣಿಗೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ನೋಡುಗರ ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಎಸ್.ಎ.ರಾಮದಾಸ್, ಬಿಜೆಪಿ ಮುಖಂಡರಾದ ಶ್ರೀವತ್ಸ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಚಿವರಿಂದ ದಸರಾ ವಸ್ತುಪ್ರದರ್ಶನಕ್ಕೆ ಚಾಲನೆ

ಕೋವಿಡ್‌ನಿಂದ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ದಸರಾ ವಸ್ತುಪ್ರದರ್ಶನ ಈ ಬಾರಿ ಮತ್ತೆ ಚಾಲನೆಗೊಂಡಿದೆ. ಇಡೀ ವಸ್ತುಪ್ರದರ್ಶನದ ಆವರಣದ ಪ್ರವೇಶ ದ್ವಾರ ಸೇರಿದಂತೆ ಎಲ್ಲೆಡೆ ವಿದ್ಯುತ್ ದೀಪಾಲಂಕಾರ, ತಳಿರು-ತೋರಣಗಳನ್ನು ಕಟ್ಟಿ ಸಿಂಗಾರ ಮಾಡಿದ್ದರೂ ಒಳಗೆ ಮಾತ್ರ ನೀರಸವಾಗಿತ್ತು. ಪ್ರವೇಶ ದ್ವಾರದ ಮುಖ್ಯ ರಸ್ತೆಯಿಂದಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ಕಲಾ ತಂಡಗಳ ಮೆರವಣಿಗೆಯಲ್ಲಿ ಮೂಲಕ ಕರೆ ತರಲಾಗಿತ್ತು. ಈ ವೇಳೆ ಸಚಿವರು ಟೇಪು ಕತ್ತರಿಸುವ ಮೂಲಕ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದ್ದರು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು, 90 ದಿನಗಳ ಕಾಲ ನಡೆಯಲಿರುವ ವಸ್ತು ಪ್ರದರ್ಶನದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಕಲಾಕೃತಿಗಳಿರುವ ಸ್ಯಾಂಡ್ ಮ್ಯೂಸಿಯಂ ನಿರ್ಮಿಸಲಾಗಿದ್ದು, ಇದು ವಿಶೇಷವಾಗಿದೆ. ಈ ವಿಶೇಷ ವಸ್ತು ಪ್ರದರ್ಶನವನ್ನು ಸಾರ್ವಜನಿಕರು ವೀಕ್ಷಿಸಬೇಕು ಎಂದು ಮನವಿ ಮಾಡಿದ್ದರು.

ನಗರದ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ದಸರಾ ಆಹಾರ ಮೇಳವನ್ನು ಆಯೋಜಿಸಲಾಗಿದೆ. ಮೇಳದಲ್ಲಿ ಬುಡಕಟ್ಟು ಆಹಾರ ಪದ್ಧತಿ (ಬೊಂಬು ಬಿರಿಯಾನಿ), ಜಾನಪದ ಪದ್ಧತಿ, ಮೈಸೂರು, ಕೊಡಗು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ, ಉತ್ತರ ಭಾರತ, ಕೇರಳ, ಆಂಧ್ರ ಶೈಲಿ, ಕರಾವಳಿ ಶೈಲಿ, ತೆಲಂಗಾಣ, ಮಹಾರಾಷ್ಟ್ರ, ಚೈನೀಸ್, ಐಸ್ ಕ್ರೀಮ್, ಬಂಗಾರಪೇಟೆ ಹಾಗೂ ಬಾಂಬೆ ಚಾಟ್ಸ್‌, ಬೇಕರಿ, ಬಿಸ್ಕತ್ತುಗಳು, ಹಣ್ಣು ಮತ್ತು ಹಣ್ಣಿನ ರಸಗಳು, ಸಾಂಪ್ರದಾಯಿಕ ಸಿಹಿ ತಿನಿಸು, ತಂಪು ಪಾನೀಯಗಳು, ಚಾಟ್ಸ್, ಔಷಧಿ ಆಹಾರ ಶೈಲಿಯ ತಿಂಡಿ ತಿನಿಸುಗಳು, ಸಿರಿಧಾನ್ಯದ ಜೊತೆಗೆ ಸಾವಯವ ಆಹಾರಗಳು ಭೋಜನ ಪ್ರಿಯರನ್ನು ಆಕರ್ಷಿಸುತ್ತಿದೆ.

ಬೊಂಬು ಬಿರಿಯಾನಿಗೆ ಹೆಚ್ಚಿದ ಬೇಡಿಕೆ
ಕಳೆದ ಎಂಟು ವರ್ಷದಿಂದ ಆದಿವಾಸಿಗಳು ಬೊಂಬು ಬಿರಿಯಾನಿ ಹಾಗೂ ಬಿದಿರು ಅಕ್ಕಿ ಪಾಯಸವನ್ನು ಆಹಾರ ಮೇಳದಲ್ಲಿ ಮಾರಾಟ ಮಾಡುತ್ತಾರೆ. ಆದರೆ ಈ ವರ್ಷ ಬುಡಕಟ್ಟು ಮಹಿಳೆ ರಾಷ್ಟ್ರಪತಿ ಆಗಿದ್ದು, ದಸರಾ ಉದ್ಘಾಟನೆ ನೆರವೇರಿಸಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬೊಂಬು ಬಿರಿಯಾನಿ ಬಗ್ಗೆ ವಿಚಾರಿಸುತ್ತಿದ್ದಾರೆ.

English summary
world tourism Jatha program organized in premises of Kote Anjaneya Swamy Temple, Minister ST Somashekhar launched program. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X