ಪ್ರವಾಸೋದ್ಯಮ ಇಲಾಖೆಯ ಬ್ರಾಂಡ್ ಅಂಬಾಸಿಡರ್ ಆಗಿ ಯದುವೀರ್ ಆಯ್ಕೆ
Recommended Video

ಮೈಸೂರು, ಸೆಪ್ಟೆಂಬರ್. 25 : ಮೈಸೂರು ಭಾಗದ ಪ್ರವಾಸೋದ್ಯಮ ರಾಯಭಾರಿಯಾಗಲು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒಪ್ಪಿಗೆ ಸೂಚಿಸಿದ್ದಾರೆ.
ಮೈಸೂರು ಭಾಗವನ್ನು ದಕ್ಷಿಣ ಭಾರತದ ಪ್ರಮುಖ ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡುವ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರುವ ಯದುವೀರ್ ಅವರ ನಿರ್ಧಾರಕ್ಕೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರು ಸಂತಸ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
ಇದಕ್ಕೂ ಮುನ್ನ ಕಳೆದ ಬುಧವಾರ ಅರಮನೆಗೆ ತೆರಳಿದ್ದ ಸಚಿವರು ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಯ ಪ್ರವಾಸೋದ್ಯಮ ರಾಯಭಾರಿ (ಬ್ರಾಂಡ್ ಅಂಬಾಸಿಡರ್) ಆಗುವಂತೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಲ್ಲಿ ಮನವಿ ಮಾಡಿದ್ದರು.

ಇದೀಗ ಪ್ರವಾಸೋದ್ಯಮ ರಾಯಭಾರಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ನೇಮಕ ಮಾಡಿ ರಾಜ್ಯ ಪ್ರವಾಸೋದ್ಯಮ ಹಾಗೂ ರೇಷ್ಮೆ ಇಲಾಖೆ ಆದೇಶ ಹೊರಡಿಸಿದೆ.
ಯದುವೀರ್ ಅವರು ತಿಳಿಸಿರುವಂತೆ ಈ ಕಾರ್ಯ ಸಾಧಿಸಲು, ನಿಖರತೆ ಹೊಂದಲು, ರಚನಾತ್ಮಕವಾಗಿ ಮುಂದುವರೆಯುವ ಸಲುವಾಗಿ ಅವರಿಗೆ ಅನುಕೂಲಕರವಾಗುವ, ಸೂಕ್ತವೆನಿಸುವ ಸಮಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಸಭೆ ಏರ್ಪಡಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಈ ಸಂಬಂಧ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಸಚಿವರು ಸೋಮವಾರ ಪತ್ರ ಸಹ ಬರೆದಿದ್ದಾರೆ.












Click it and Unblock the Notifications